ಆರ್ಟಿಇ ಸೀಟು : ದಾಖಲಾತಿ ದಿನಾಂಕ ವಿಸ್ತರಣೆ
Team Udayavani, Apr 29, 2018, 6:30 AM IST
ಬೆಂಗಳೂರು: ಶಿಕ್ಷಣ ಹಕ್ಕು ಕಾಯಿದೆಯಡಿ (ಆರ್ಟಿಇ) ಸೀಟು ಪಡೆದ ಮಕ್ಕಳನ್ನು ಸಂಬಂಧಿಸಿದ ಖಾಸಗಿ ಶಾಲೆಗೆ ಸೇರಿಸಲು ನಿಗದಿಪಡಿಸಿದ್ದ ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದೆ.
ಎ.20ರಂದು ಆನ್ಲೈನ್ ಲಾಟರಿ ಮೂಲಕ ಸೀಟು ಹಂಚಿಕೆ ಮಾಡಲಾಗಿತ್ತು. ಸುಮಾರು 1.11 ಲಕ್ಷ ಮಕ್ಕಳು ಸೀಟು ಪಡೆದಿದ್ದರು. ಸೀಟು ಪಡೆದ ಮಕ್ಕಳನ್ನು ಆಯಾ ಶಾಲೆಗೆ ಸೇರಿಸಲು ಎ.28 ಕೊನೆಯ ದಿನವಾಗಿತ್ತು. ಪಾಲಕ-ಪೋಷಕರು ಮತ್ತು ವಿವಿಧ ಸಂಘಟನೆಗಳ ಆಗ್ರಹದಂತೆ ದಾಖಲಾತಿ ದಿನಾಂಕವನ್ನು ಮೇ 3ರವರೆಗೂ ವಿಸ್ತರಿಸಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಕಟನೆ ತಿಳಿಸಿದೆ.
ಸಿಇಟಿ : ದಾಖಲೆ ಪರಿಶೀಲನೆ
ವೃತ್ತಿಪರ ಕೋರ್ಸ್ಗಳ ಸರಕಾರಿ ಕೋಟದ ಸೀಟುಗಳ ಪ್ರವೇಶಕ್ಕೆ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ಫಲಿತಾಂಶದ ಅನಂತರ ಅರ್ಹ ಅಭ್ಯರ್ಥಿಗಳ ದಾಖಲಾತಿ ಪರಿಶೀಲನೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಸಹಾಯಕ ಕೇಂದ್ರದಲ್ಲಿ ನಡೆಯ ಲಿದೆ. ದಾಖಲಾತಿ ಪರಿಶೀಲನೆಗೆ ಹಾಜರಾಗುವ ವಿದ್ಯಾರ್ಥಿಗಳು ಸಲ್ಲಿಸಬೇಕಾದ ಮೂಲ ದಾಖಲೆ ಹಾಗೂ ದಾಖಲಾತಿ ಪರಿಶೀಲನೆ ಹೇಗೆ ಎಂಬುದರ ಬಗ್ಗೆಯೂ ವಿವರವನ್ನು ಪ್ರಾಧಿಕಾರದ ವೆಬ್ಸೈಟ್ನಲ್ಲಿ ನೀಡಲಾಗಿದೆ. ದಾಖಲೆ ಪರಿಶೀಲನೆಯ ಮಾಹಿತಿಯನ್ನು ಡೌನ್ಲೋಡ್ ಮಾಡಿಕೊಂಡು ಅದೇ ಕ್ರಮ ಅನುಸರಿಸಲು ವಿದ್ಯಾರ್ಥಿಗಳಿಗೆ ಸೂಚನೆ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ