ಭಿನ್ನಗೆ ಪಾಯಲ್‌ ರಾಧಾಕೃಷ್ಣನ್‌ ನಾಯಕಿ

Team Udayavani, Apr 29, 2018, 11:00 AM IST

Binna.jpg

“ಶುದ್ಧಿ’ ಎಂಬ ಜನಮನ್ನಣೆ ಪಡೆದ ಚಿತ್ರವನ್ನು ನಿರ್ದೇಶಿಸಿದ್ದ ಆದರ್ಶ್‌ ಈಶ್ವರಪ್ಪ, “ಭಿನ್ನ’ ಎಂಬ ಹೊಸ ಚಿತ್ರ ಮಾಡುತ್ತಿರುವುದು ಗೊತ್ತಿರಬಹುದು. ಈಗ ಈ ಚಿತ್ರಕ್ಕೆ ಕಲಾವಿದರ ಆಯ್ಕೆ ಆಗಿದೆ. ಅಷ್ಟೇ ಅಲ್ಲ, ಕಲಾವಿದರ ಫೋಟೋ ಶೂಟ್‌ ಸಹ ಆಗಿದೆ. “ಭಿನ್ನ’ದಲ್ಲಿ ಪ್ರಮುಖವಾಗಿ ನಾಲ್ವರು ಕಲಾವಿದರು ನಟಿಸುತ್ತಿದ್ದು, ಆ ನಾಲ್ವರ ಸುತ್ತ ಈ ಚಿತ್ರ ಸುತ್ತಲಿದೆ.

ಇದು ಸಹ “ಶುದ್ಧಿ’ ತರಹ ಒಂದು ಮಹಿಳಾ ಪ್ರಧಾನ ಚಿತ್ರ. “ಉದಯೋನ್ಮುಖ ನಟಿಯೊಬ್ಬಳಿಗೆ ಒಂದು ಚಿತ್ರದಲ್ಲಿ ಅವಕಾಶ ಸಿಗುತ್ತದೆ. ಆ ಚಿತ್ರದ ಕಥೆಗೂ ಅವಳ ನಿಜಜೀವನಕ್ಕೂ ಒಂದು ಸಂಬಂಧವಿರುತ್ತದೆ. ಆ ಸಂಬಂಧ ಏನು ಎಂಬುದನ್ನು ಚಿತ್ರ ಹೇಳಲಿದೆ. ಇದು ಚಿತ್ರದೊಳಗೊಂದು ಚಿತ್ರದ ಕಥೆ. ಇಲ್ಲಿ ನಾಯಕಿ ಪಾತ್ರ ಬಹಳ ಮುಖ್ಯ.

ಕಾವೇರಿ ಮತ್ತು ದೇವಕಿ ಎಂಬ ಎರಡು ಶೇಡ್‌ಗಳಿರುವ ಈ ಪಾತ್ರವನ್ನ ಪಾಯಲ್‌ ರಾಧಾಕೃಷ್ಣನ್‌ ಮಾಡುತ್ತಿದ್ದಾರೆ. ಮಿಕ್ಕಂತೆ “ಲೂಸಿಯಾ’ ಪವನ್‌ ಅವರ ಪತ್ನಿ ಸೌಮ್ಯ ಜಗನ್ಮೂರ್ತಿ, ಸಿದ್ಧಾರ್ಥ್ ಮಾಧ್ಯಮಿಕ, ಶಶಾಂಕ್‌ ಪುರುಷೋತ್ತಮ್‌ ಮುಂತಾದವರು ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ.

ಮಾಡೆಲಿಂಗ್‌ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಪಾಯಲ್‌ ರಾಧಾಕೃಷ್ಣ, ಇದಕ್ಕೂ ಮುನ್ನ ಆದಿತ್ಯ ಅಭಿನಯದ “ಬೆಂಗಳೂರು ಅಂಡರ್‌ವರ್ಲ್ಡ್’ ಚಿತ್ರದಲ್ಲಿ ನಟಿಸಿದ್ದರು. ಮುಂಬೈನಲ್ಲಿ ಮಾಡಲಿಂಗ್‌ ಮಾಡುತ್ತಿರುವ ಪಾಯಲ್‌, “ಭಿನ್ನ’ ಚಿತ್ರದ ಆಡಿಷನ್‌ನಲ್ಲಿ ಭಾಗವಹಿಸಿ, ಆಯ್ಕೆಯಾಗಿದ್ದಾರೆ.

ಕಾವೇರಿ ಹಾಗೂ ದೇವಕಿ ಎಂಬ ಎರಡು ಪಾತ್ರಗಳನ್ನು ಪಾಯಲ್‌ ನಿರ್ವಹಿಸಿದರೆ, ವಿಮಲ ಎಂಬ ಪಾತ್ರವನ್ನು ಸೌಮ್ಯ ಮಾಡುತ್ತಿದ್ದಾರೆ. ಇನ್ನು ಸಿದ್ಧಾರ್ಥ್ ಮತ್ತು ಶಶಾಂಕ್‌, ಸತೀಶ್‌ ಹಾಗೂ ಮೋಹನ್‌ ಎಂಬ ಪಾತ್ರಗಳನ್ನು ಮಾಡುತ್ತಿದ್ದಾರೆ.

ಈ ನಾಲ್ಕೂ ಪಾತ್ರಗಳ ಹೆಸರುಗಳು, ಪುಟ್ಟಣ್ಣ ಅವರ ಚಿತ್ರದ ಪಾತ್ರಗಳ ಹೆಸರಾಗಿದ್ದು, ಆ ಹೆಸರುಗಳನ್ನು ಬಳಸಿಕೊಳ್ಳುವ ಮೂಲಕ ಪುಟ್ಟಣ್ಣ ಕಣಗಾಲ್‌ ಅವರಿಗೆ ಚಿತ್ರವನ್ನು ಅರ್ಪಿಸುತ್ತಿರುವುದಾಗಿ ಹೇಳುತ್ತಾರೆ ಆದರ್ಶ್‌. ಈ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸುವುದರ ಜೊತೆಗೆ ಸಂಕಲನವನ್ನೂ ಮಾಡಲಿದ್ದಾರೆ ಆದರ್ಶ್‌.

ಯತೀಶ್‌ ವೆಂಕಟೇಶ್‌ ಮತ್ತು ಪರ್ಪಲ್‌ ಆರೋ ಫಿಲ್ಮ್ಸ್ ಜಂಟಿಯಾಗಿ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ಅಂಡ್ರೋ ಆಯಿಲೋ ಅವರ ಛಾಯಾಗ್ರಹಣ ಮತ್ತು ಜೆಸ್ಸಿ ಕ್ಲಿಂಟನ್‌ ಅವರ ಸಂಗೀತವಿದೆ. ಇದೊಂದು ಸೈಕಾಲಜಿಕಲ್‌ ಥ್ರಿಲ್ಲರ್‌ ಚಿತ್ರವಾಗಲಿದ್ದು, ಸಿಂಕ್‌ಸೌಂಡ್‌ನ‌ಲ್ಲೇ ಚಿತ್ರೀಕರಣ ನಡೆಯಲಿದೆ. ಜುಲೈನಲ್ಲಿ ಚಿತ್ರದ ಚಿತ್ರೀಕರಣ ಪ್ರಾರಂಭವಾಗಲಿದ್ದು, ಒಂದೇ ಹಂತದಲ್ಲಿ ಚಿತ್ರೀಕರಣ ನಡೆಯಲಿದೆ. ಡಿಸೆಂಬರ್‌ ಹೊತ್ತಿಗೆ ಚಿತ್ರದ ಕೆಲಸಗಳು ಮುಗಿಯಲಿದೆ.

ಟಾಪ್ ನ್ಯೂಸ್

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.