ಧರ್ಮದ ಹೆಸರಲ್ಲಿ ಸಂಘರ್ಷ ಸಲ್ಲ

Team Udayavani, Apr 30, 2018, 9:33 AM IST

dav-3.jpg

ಹರಪನಹಳ್ಳಿ: ನಾಮ ಹಲವಾದರೂ ದೇವರ ಮೂಲ ಸ್ವರೂಪ ಒಂದೇ ಆಗಿದೆ. ದೇವಸ್ಥಾನಗಳು ನಮ್ಮ ಧರ್ಮ, ಸಂಸ್ಕೃತಿಯ ಕೇಂದ್ರಗಳಾಗಿವೆ. ಆದರೆ ಧರ್ಮ, ದೇವರ ಹೆಸರಲ್ಲಿ ಸಂಘರ್ಷ ಬೇಡ ಎಂದು ಶ್ರೀಶೈಲ ಪೀಠದ ಡಾ| ಚೆನ್ನಸಿದ್ದರಾಮ ಪಂಡಿತಾರಾಧ್ಯ ಸ್ವಾಮೀಜಿ ಹೇಳಿದರು.

ತಾಲೂಕಿನ ಬಂಡ್ರಿ ಗ್ರಾಮದಲ್ಲಿ ಭಾನುವಾರ ಆಯೋಜಿಸಿದ್ದ ಮಂಜುನಾಥ ಸ್ವಾಮಿ ನೂತನ ದೇವಸ್ಥಾನ ಉದ್ಘಾಟನೆ ಹಾಗೂ ಮಂಜುನಾಥಸ್ವಾಮಿ, ಶ್ರೀ ವಿಜ್ಞೇಶ್ವರ ಮತ್ತು ಶ್ರೀ ಚೌಡೇಶ್ವರ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಭಕ್ತರು ಹೆಚ್ಚಾದಂತೆ ಕ್ಷೇತ್ರಗಳು ಬೆಳೆಯುತ್ತವೆ. ದೇವರು ಇಲ್ಲದ ಜಾಗವಿಲ್ಲ, ಹಾಗಾದರೆ ದೇವಸ್ಥಾನ ಏಕೆ ಕಟ್ಟಬೇಕು ಎನ್ನಬಹುದು. ಆದರೆ ದೇವರು ಪ್ರಕಟವಾಗುವುದು ದೇವಸ್ಥಾನದಲ್ಲಿರುವ ಮೂರ್ತಿಗಳ ಮೂಲಕ ಎಂದ ಶ್ರೀಗಳು, ಭಾರತ ಧರ್ಮ ಪ್ರಧಾನವಾದ ದೇಶ. ಇಲ್ಲಿ ಧರ್ಮ ಮತ್ತು ದೇವರಿಗೆ ಇರುವಷ್ಟು ಮಹತ್ವ ಬೇರೆ ಯಾವುದಕ್ಕೂ ಇಲ್ಲ ಎಂಬುದನ್ನು ಜನತೆ ತೋರಿಸುತ್ತಾ ಬಂದಿದ್ದಾರೆ. ಭಾರತದಲ್ಲಿ ಇದ್ದಷ್ಟು ದೇವಸ್ಥಾನಗಳು ಜಗತ್ತಿನಲ್ಲಿ ಎಲ್ಲೂ ನೋಡಲಿಕ್ಕೆ ಸಾಧ್ಯವಿಲ್ಲ ಎಂದು ತಿಳಿಸಿದರು. 

ಗ್ರಾಮಗಳು ಅಭಿವೃದ್ಧಿ ಕಾಣದಿದ್ದರೂ ದೇವಸ್ಥಾನಗಳು ಕಡ್ಡಾಯವಾಗಿ ಇರುತ್ತವೆ. ಇದಕ್ಕೆ ಜನರ ಶ್ರದ್ಧೆ, ವಿಶ್ವಾಸ ಕಾರಣವಾಗಿದೆ. ಯಾರ ಹಣೆಯ ಮೇಲೆ ವಿಭೂತಿ ಇಲ್ಲವೊ ಹಾಗೂ ದೇವಾಲಯವಿಲ್ಲದ ಊರಿಗೆಧಿಕ್ಕಾರ ಎಂದು ವೇದ ಹೇಳುತ್ತದೆ ಎಂದು ಅವರು ಹೇಳಿದರು. ಹರಪನಹಳ್ಳಿ ಸುರಪುರ ಮಠದ ಕೊಟ್ರೇಶಯ್ಯಸ್ವಾಮಿ ಪ್ರಸ್ತಾವಿಕ ಮಾತನಾಡಿದರು. ಶ್ರೀಶೈಲ ಜಗದ್ಗುರುಗಳನ್ನು ಗ್ರಾಮದ ಹೊರವಲಯದಲ್ಲಿ ಸುಮಂಗಲೆಯರು ಪೂರ್ಣ ಕುಂಭ ಹಾಗೂ ಕಳಸಗಳೊಂದಿಗೆ ಸ್ವಾಗತಿಸಿದರು. ಈ ಸಂದರ್ಭದಲ್ಲಿ ನೂತನ ಶಿಲಾಮೂರ್ತಿಗಳ ದಾನಿಗಳನ್ನು ಸನ್ಮಾನಿಸಲಾಯಿತು. 

ದೇವಸ್ಥಾನದ ಧರ್ಮಕರ್ತ ಮಂಜುನಾಥ ಸ್ವಾಮಿ ನೇತೃತ್ವ ವಹಿಸಿದ್ದರು. ಹಿರೇಹಡಗಲಿ ಅಭಿನವ ಹಾಲವೀರಪ್ಪಜ್ಜ ಸ್ವಾಮೀಜಿ, ಕೂಲಹಳ್ಳಿ ಗೋಣಿ ಬಸವೇಶ್ವರ ಮಠದ ಪಟ್ಟದ ಚಿನ್ಮಯ ಸ್ವಾಮೀಜಿ, ವಕೀಲ ಗೋಣಿಬಸಪ್ಪ ಇತರರು ಇದ್ದರು 

ಟಾಪ್ ನ್ಯೂಸ್

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

7-uv-fusion

UV Fusion: ಅಲ್ಪನಿಗೆ ಐಶ್ವರ್ಯ ಬಂದರೆ ಅರ್ಧ ರಾತ್ರಿಲಿ ಕೊಡೆ ಹಿಡಿದ

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

6-uv-fusion

UV Fusion: ಮಿತಿಯೊಳಗಿನ ಬದುಕು ನೆನಪಾದಾಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.