ತ್ರಿವಳಿ ತಲಾಖ್ ಜಾರಿಗೆ ಸುಗ್ರೀವಾಜ್ಞೆ ಜಾರಿ?
Team Udayavani, May 3, 2018, 6:00 AM IST
ನವದೆಹಲಿ: ಮುಸ್ಲಿಂ ಸಮುದಾಯದಲ್ಲಿನ ತ್ರಿವಳಿ ತಲಾಖ್ ನಿಷೇಧಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಶೀಘ್ರದಲ್ಲಿಯೇ ಸುಗ್ರೀವಾಜ್ಞೆ ಹೊರಡಿಸಲಿದೆ. ಮುಸ್ಲಿಂ ಮಹಿಳೆಯರ ವೈವಾಹಿಕ ಹಕ್ಕುಗಳ ವಿಧೇಯಕಕ್ಕೆ ಲೋಕಸಭೆ ಈಗಾಗಲೇ ಅಂಗೀಕಾರ ನೀಡಿದೆ. ಆದರೆ ರಾಜ್ಯಸಭೆಯಲ್ಲಿ ಕೇಂದ್ರ ಸರ್ಕಾರಕ್ಕೆ ಬಹುಮತವಿಲ್ಲ. ಹೀಗಾಗಿ ಕೇಂದ್ರ ಸುಗ್ರೀವಾಜ್ಞೆ ದಾರಿ ಮೂಲಕ ಕಾನೂನು ಜಾರಿಗೊಳಿಸಲು ಮುಂದಾಗಿದೆ. 2017ರ ಆ.22ರಂದು ಸುಪ್ರೀಂಕೋರ್ಟ್ ತ್ರಿವಳಿ ತಲಾಖ್ ನಿಷೇಧಿಸಿ ತೀರ್ಪು ನೀಡಿತ್ತು.
ಮುಸ್ಲಿಂ ಸಮುದಾಯದ ಪುರುಷರು ಮೂರು ಬಾರಿ ತಲಾಖ್ ಹೇಳುವ ಮೂಲಕ ಪತ್ನಿಯರಿಗೆ ವಿಚ್ಛೇದನ ನೀಡಬಾರದು. ತಲಾಖ್ ನೀಡುವಿಕೆಯನ್ನು ಗಂಭೀರ ಸ್ವರೂಪದ ಅಪರಾಧ ಎಂದು ಪರಿಗಣಿಸಿ, ಅಂಥವರಿಗೆ ಜಾಮೀನು ಕೂಡ ನೀಡಬಾರದು ಹಾಗೂ ಮೂರು ವರ್ಷಗಳ ಕಾಲ ಜೈಲು ಶಿಕ್ಷೆ ಒದಗಿಸಲು ಕಾನೂನಿನಲ್ಲಿ ಅವಕಾಶ ಉಂಟು. ಕೋರ್ಟ್ ಮೊರೆ ಹೋಗಿ ಪತಿಯಿಂದ ಪರಿಹಾರ ಕೋರುವ ಅವಕಾಶವೂ ಪ್ರಸ್ತಾವಿತ ಸುಗ್ರೀವಾಜ್ಞೆಯಲ್ಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ
Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್ ಪಂತ್
Amruthapura: ಅಮೃತಪುರವೆಂಬ ಅದ್ಭುತ ತಾಣ