ಡಾಟಾ ಸೋರಿಕೆ ಹಗರಣ:ಬಾಗಿಲು ಮುಚ್ಚಿದ ಕೇಂಬ್ರಿಡ್ಜ್ ಅನಾಲಿಟಿಕಾ!
Team Udayavani, May 3, 2018, 9:32 AM IST
ಲಂಡನ್: ಫೇಸ್ಬುಕ್ ನ ಕೋಟ್ಯಂತರ ಖಾತೆದಾರರ ಮಾಹಿತಿ ಸೋರಿಕೆ ಆರೋಪಕ್ಕೆ ಗುರಿಯಾಗಿರುವ ಲಂಡನ್ ಮೂಲದ ಕೇಂಬ್ರಿಡ್ಜ್ ಅನಾಲಿಟಿಕಾ ಸಂಸ್ಥೆ ಬಾಗಿಲು ಮುಚ್ಚಿರುವುದಾಗಿ ವರದಿಯಾಗಿದೆ.
ಅಸೋಸಿಯೆಟೆಡ್ ಪ್ರೆಸ್ ವರದಿಯಂತೆ ಕೇಂಬ್ರಿಡ್ಜ್ ಅನಾಲಿಟಿಕಾ ತನ್ನೆಲ್ಲಾ ಕಾರ್ಯಾಚರಣೆಗಳನ್ನು ಸ್ಥಗಿತಗೊಳಿಸಿದೆ. ಪ್ರಕಟನೆಯಲ್ಲಿ ಸಂಸ್ಥೆ ‘ಅಪಮಾನಕ್ಕೊಳಗಾಗಿದೆ’ ಎಂದು ಹೇಳಿದೆ.
ಡಾಟಾ ಸೋರಿಕೆ ವಿವಾದದಿಂದ ಬಹುಪಾಲು ಗ್ರಾಹಕರನ್ನು ಕಳೆದುಕೊಂಡಿದೆ ಮಾತ್ರವಲ್ಲದೆ ಅಪಾರ ಪ್ರಮಾಣದ ಜಾಹೀರಾತು ಸರಬರಾಜುದಾರರನ್ನು ಕಳೆದುಕೊಂಡಿದ್ದು, ಇದೇ ಕಾರಣಕ್ಕಾಗಿ ಸಂಸ್ಥೆಯನ್ನೆ ಸ್ಥಗಿತಗೊಳಿಸಲಾಗಿದೆ.
ಅಮೆರಿಕ ಅಧ್ಯಕ್ಷೀಯ ಚುನಾವಣೆ,ಭಾರತೀಯ ಚುನಾವಣೆಗಳ ಸಮಯದಲ್ಲಿ ಕೆಲವು ರಾಜಕೀಯ ಪಕ್ಷಗಳ ಜತೆಗೂಡಿ ಮತದಾರರ ಮೇಲೆ ಪರಿಣಾಮ ಬೀರುವ ಕೆಲಸ ಮಾಡಿರುವ ಆರೋಪವೂ ಕೇಂಬ್ರಿಡ್ಜ್ ಅನಾಲಿಟಿಕಾ ಮೇಲೆ ಕೇಳಿ ಬಂದಿತ್ತು. ಈ ಸಂಬಂಧ ಸಂಸ್ಥೆಗೆ ಕೇಂದ್ರ ಸರ್ಕಾರ ನೋಟಿಸ್ ಜಾರಿ ಗೊಳಿಸಿತ್ತು. ಕೇಂಬ್ರಿಡ್ಜ್ ಅನಾಲಿಟಿಕಾ ಹಾಗೂ ಕಾಂಗ್ರೆಸ್ ನಡುವೆ ನಂಟಿದೆ ಎಂದು ಬಿಜೆಪಿ ಆರೋಪಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ