ಹತಾಶರಾಗಿರುವ ಕಾಂಗ್ರೆಸ್‌ ನಾಯಕರು

Team Udayavani, May 3, 2018, 11:00 AM IST

blore-1.jpg

ಬೆಂಗಳೂರು: ಹತಾಶೆಯಲ್ಲಿರುವ ಕಾಂಗ್ರೆಸ್‌ ಪಕ್ಷ ಮತ್ತು ಅದರ ನಾಯಕರು ಜಾಹೀರಾತಿನಲ್ಲಿ ಯಡ್ಡಿ-ಚಡ್ಡಿ ಮೊದಲಾದ ಕೀಳು ಪದ ಪ್ರಯೋಗ ಮಾಡುವ ಜತೆಗೆ ಬಿಜೆಪಿ ಪ್ರಚಾರದ ವಿಡಿಯೋ ವ್ಯಾನ್‌ಗಳ ಮೇಲೆ ದಾಳಿ ನಡೆಸುತ್ತಿದ್ದಾರೆ ಎಂದು ಸಂಸದೆ ಹಾಗೂ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾಂಗ್ರೆಸ್‌ ಜಾಹೀರಾತಿನಲ್ಲಿ ಅಭಿವೃದ್ಧಿಯ ಅಜೆಂಡಾ ಇಲ್ಲ. ಯಡ್ಡಿ- ಚಡ್ಡಿ ಮೊದಲಾದ ಕೆಟ್ಟ ಪದಗಳ ಮೂಲಕ ಜಾಹೀರಾತು ನೀಡುತ್ತಿದ್ದಾರೆ. ರಾಷ್ಟ್ರೀಯ ಪಕ್ಷಕ್ಕೆ ಇದು ಶೋಭೆ ತರುವುದಿಲ್ಲ. ಕೋರ್ಟ್‌ನಲ್ಲಿ ಇತ್ಯರ್ಥವಾದ ಪ್ರಕರಣವನ್ನೇ ಮತ್ತೆ ಕೆದುಕುತ್ತಿದ್ದಾರೆ. 2014ರ ಲೋಕಸಭಾ ಚುನಾವಣೆಯಲ್ಲಿ ಮೋದಿ ವಿರುದ್ಧ ಮಾತನಾಡಿದ್ದ ಕಾಂಗ್ರೆಸ್‌ 40 ಸೀಟಿಗೆ ಬಂದಿಳಿದಿದೆ. ಕರ್ನಾಟಕದಲ್ಲೂ ಕಾಂಗ್ರೆಸ್‌ ಇದೇ ಸ್ಥಿತಿಗೆ ಬರಲಿದೆ ಎಂದು ಹೇಳಿದರು. 

ಚುನಾವಣಾ ಆಯೋಗದ ಅನುಮತಿ ಪಡೆದು ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಬಿಜೆಪಿ ಪ್ರಚಾರ ವಾಹನ ಸಂಚಾರ ಮಾಡುತ್ತಿದೆ. ವಿವಿಧ ವಿಡಿಯೋಗಳ ಮೂಲಕ ಪ್ರಚಾರ ಪ್ರಕ್ರಿಯೆ ನಡೆಯುತ್ತಿದೆ. ಸೋಲಿನ ಹತಾಶೆಯಲ್ಲಿರುವ ಕಾಂಗ್ರೆಸ್‌ ನಾಯಕರು ಬೆಂಗಳೂರು, ಕೋಲಾರ, ದಾವಣಗೆರೆ ಹಾಗೂ ಧಾರವಾಡದಲ್ಲಿ ಬಿಜೆಪಿ ಪ್ರಚಾರದ ವ್ಯಾನ್‌ನಲ್ಲಿದ್ದ ವಿಡಿಯೋ ಪರದೆಯನ್ನು ಒಡೆದು ಹಾಕಿದ್ದಾರೆ. ಇದರ ವಿರುದ್ಧ ಚುನಾವಣಾ ಆಯೋಗ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.

ಭದ್ರತೆ ದೃಷ್ಟಿಯಿಂದ ಹೋಗಿಲ್ಲ ಉಡುಪಿಗೆ ಭೇಟಿ ನೀಡಿದ್ದ ಪ್ರಧಾನಿ ಮೋದಿಯವರಲ್ಲಿ ಉಡುಪಿ ಶ್ರೀಕೃಷ್ಣಮಠಕ್ಕೆ ಭೇಟಿ ನೀಡುವಂತೆ ನಾವೆಲ್ಲರೂ ಮನವಿ ಮಾಡಿಕೊಂಡಿದ್ದೆವು. ಭದ್ರತೆಯ ಕಾರಣದಿಂದಾಗಿ ಉಡುಪಿ ಮಠಕ್ಕೆ
ಹೋಗಿರಲಿಲ್ಲ. ಮಠದ ಆವರಣದಲ್ಲಿ ಎಸ್‌ಪಿಜಿಯವರು ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಭದ್ರತಾ ಆತಂಕ
ಇರುವುದಾಗಿ ಹೇಳಿದ್ದರಿಂದ ಮಠಕ್ಕೆ ಭೇಟಿ ನೀಡಿಲ್ಲ. 

ಪ್ರಧಾನಿಯವರಿಗೆ ಝಡ್‌ ಫ್ಲಸ್‌ ಭದ್ರತೆ ಇರುವುದರಿಂದ ಶಿಷ್ಠಾಚಾರ ಉಲ್ಲಂಘನೆ ಮಾಡಲು ಸಾಧ್ಯವಿಲ್ಲ. ಈ ಹಿಂದೆ ಕೇಂದ್ರ ಗೃಹ ಸಚಿವ ರಾಜನಾಥ್‌ ಸಿಂಗ್‌ ಅವರು ಭೇಟಿ ನೀಡಿದ್ದ ಸಂದರ್ಭದಲ್ಲಿ ಇದೇ ಸಮಸ್ಯೆ ಉದ್ಭವಾಗಿತ್ತು. ಆದರೆ, ಅವರು ಇದನ್ನೆಲ್ಲ ಲೆಕ್ಕಿಸದೆ ಭೇಟಿ ನೀಡಿದ್ದರು. ಪ್ರಧಾನಿಯವರು ಕೃಷ್ಣಮಠಕ್ಕೆ ಭೇಟಿ ನೀಡದೇ ಇರುವುದರ ಹಿಂದೆ ಯಾವುದೇ ದುರುದ್ದೇಶ ಇಲ್ಲ ಎಂದು ಸ್ಪಷ್ಟಪಡಿಸಿದರು.

ಹೊಗಳಿಕೆ ನಮ್ಮಸಂಸ್ಕೃತಿ ಹಿರಿಮೆ
ಮಾಜಿ ಪ್ರಧಾನಿ ದೇವೇಗೌಡರನ್ನು ಪ್ರಧಾನಿ ಮೋದಿಯವರು ಹೋಗಳಿದ್ದು ನಮ್ಮ ಸಂಸ್ಕೃತಿ ಹಿರಿಮೆ. ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿಯವರು ವಯಸ್ಸಿನಲ್ಲಿ ತುಂಬಾ ಚಿಕ್ಕವರು, ದೇವೇಗೌಡ ರಂತಹ ಮುತ್ಸದ್ಧಿಗಳ ವಿರುದ್ಧ ಮಾತನಾಡುವಾಗ ಅರಿವಿರಬೇಕು. ರಾಹುಲ್‌ ಗಾಂಧಿ ಮಾಡಿದ್ದ ಟೀಕೆ ಸರಿಯಿಲ್ಲ ಎಂದು ಮೋದಿ ಹೇಳಿದ್ದಾರೆ ಅಷ್ಟೆ. ನಾವು ಯಾರ ಜತೆನೂ ಮೈತ್ರಿ ಮಾಡಿಕೊಂಡಿಲ್ಲ. 224 ಕ್ಷೇತ್ರದಲ್ಲೂ ಅಭ್ಯರ್ಥಿಗಳನ್ನು ಹಾಕಿದ್ದೇವೆ. ಪ್ರಬಲ ಸ್ಪರ್ಧೆ ನೀಡಲಿದ್ದಾರೆ ಎಂದು ಹೇಳಿದರು.

ಟಾಪ್ ನ್ಯೂಸ್

ಮತ ಪ್ರಮಾಣ ಹೆಚ್ಚಿಸಲು ಶಾಮಿಯಾನ, ಫ್ಯಾನು, ನೀರು…!

ಮತ ಪ್ರಮಾಣ ಹೆಚ್ಚಿಸಲು ಶಾಮಿಯಾನ, ಫ್ಯಾನು, ನೀರು…!

JDS ಜತೆ ಮೈತ್ರಿ ಮುರಿದುಕೊಳ್ಳುವುದಿಲ್ಲ: ಯಡಿಯೂರಪ್ಪ

JDS ಜತೆ ಮೈತ್ರಿ ಮುರಿದುಕೊಳ್ಳುವುದಿಲ್ಲ: ಯಡಿಯೂರಪ್ಪ

Prajwal Revanna ಪರ ನಿಲ್ಲುವುದಿಲ್ಲ: ವಿಜಯೇಂದ್ರ

Prajwal Revanna ಪರ ನಿಲ್ಲುವುದಿಲ್ಲ: ವಿಜಯೇಂದ್ರ

1-ewqqwe

Revanna Case; ಸಾಲ ತೀರಿಸೋಕೆ ಕೂಲಿಗೆ ಬಂದಿದ್ದೀನಿ ಅಂತ ಮಹಿಳೆ ಹೇಳಿದ್ಲು

D. K. Shivakumar ಕಾಂಗ್ರೆಸ್‌ನ ಭರವಸೆ, ಬಿಜೆಪಿಯ ಬುರುಡೆ ನಡುವೆ ಹೋರಾಟ

D. K. Shivakumar ಕಾಂಗ್ರೆಸ್‌ನ ಭರವಸೆ, ಬಿಜೆಪಿಯ ಬುರುಡೆ ನಡುವೆ ಹೋರಾಟ

BJP leaders ನಡ್ಡಾ, ವಿಜಯೇಂದ್ರ ವಿರುದ್ಧ ಎಫ್ಐಆರ್‌

BJP leaders ನಡ್ಡಾ, ವಿಜಯೇಂದ್ರ ವಿರುದ್ಧ ಎಫ್ಐಆರ್‌

ಹುಚ್ಚು ರಾಜಕಾರಣಕ್ಕೆ ಸಿದ್ದು ದೊಡ್ಡ ಬೆಲೆ ತೆರಬೇಕಾದೀತು: ಡಿವಿಎಸ್‌

ಹುಚ್ಚು ರಾಜಕಾರಣಕ್ಕೆ ಸಿದ್ದು ದೊಡ್ಡ ಬೆಲೆ ತೆರಬೇಕಾದೀತು: ಡಿವಿಎಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BESCOM: ಮಳೆ; ಬೆಸ್ಕಾಂಗೆ 1.2 ಕೋಟಿ ರೂ.ನಷ್ಟ

BESCOM: ಮಳೆ; ಬೆಸ್ಕಾಂಗೆ 1.2 ಕೋಟಿ ರೂ.ನಷ್ಟ

ಬಿಲ್ಡರ್‌ಗಳಿಂದ ಸಂಗ್ರಹಿಸಿದ್ದ ಶುಲ್ಕವನ್ನು ಮರಳಿಸುವ ಆದೇಶಕ್ಕೆ ತಡೆ: ಜಲಮಂಡಳಿಗೆ ರಿಲೀಫ್

ಬಿಲ್ಡರ್‌ಗಳಿಂದ ಸಂಗ್ರಹಿಸಿದ್ದ ಶುಲ್ಕವನ್ನು ಮರಳಿಸುವ ಆದೇಶಕ್ಕೆ ತಡೆ: ಜಲಮಂಡಳಿಗೆ ರಿಲೀಫ್

QR code system: ರೈಲ್ವೆ ಟಿಕೆಟ್‌ ಖರೀದಿಗೆ ಕ್ಯೂಆರ್‌ಕೋಡ್‌ ವ್ಯವಸ್ಥೆ; ಉತ್ತಮ ಸ್ಪಂದನೆ

QR code system: ರೈಲ್ವೆ ಟಿಕೆಟ್‌ ಖರೀದಿಗೆ ಕ್ಯೂಆರ್‌ಕೋಡ್‌ ವ್ಯವಸ್ಥೆ; ಉತ್ತಮ ಸ್ಪಂದನೆ

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

Crime: ತವರು ಮನೆಗೆ 1 ಕೋಟಿ ರೂ.ಕೊಟ್ಟಿದ್ದಕ್ಕೆ ಪತ್ನಿಯ ಕೊಂದ ಪತಿ

Crime: ತವರು ಮನೆಗೆ 1 ಕೋಟಿ ರೂ.ಕೊಟ್ಟಿದ್ದಕ್ಕೆ ಪತ್ನಿಯ ಕೊಂದ ಪತಿ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

ಮತ ಪ್ರಮಾಣ ಹೆಚ್ಚಿಸಲು ಶಾಮಿಯಾನ, ಫ್ಯಾನು, ನೀರು…!

ಮತ ಪ್ರಮಾಣ ಹೆಚ್ಚಿಸಲು ಶಾಮಿಯಾನ, ಫ್ಯಾನು, ನೀರು…!

JDS ಜತೆ ಮೈತ್ರಿ ಮುರಿದುಕೊಳ್ಳುವುದಿಲ್ಲ: ಯಡಿಯೂರಪ್ಪ

JDS ಜತೆ ಮೈತ್ರಿ ಮುರಿದುಕೊಳ್ಳುವುದಿಲ್ಲ: ಯಡಿಯೂರಪ್ಪ

Prajwal Revanna ಪರ ನಿಲ್ಲುವುದಿಲ್ಲ: ವಿಜಯೇಂದ್ರ

Prajwal Revanna ಪರ ನಿಲ್ಲುವುದಿಲ್ಲ: ವಿಜಯೇಂದ್ರ

1-ewqqwe

Revanna Case; ಸಾಲ ತೀರಿಸೋಕೆ ಕೂಲಿಗೆ ಬಂದಿದ್ದೀನಿ ಅಂತ ಮಹಿಳೆ ಹೇಳಿದ್ಲು

D. K. Shivakumar ಕಾಂಗ್ರೆಸ್‌ನ ಭರವಸೆ, ಬಿಜೆಪಿಯ ಬುರುಡೆ ನಡುವೆ ಹೋರಾಟ

D. K. Shivakumar ಕಾಂಗ್ರೆಸ್‌ನ ಭರವಸೆ, ಬಿಜೆಪಿಯ ಬುರುಡೆ ನಡುವೆ ಹೋರಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.