ಕೃಷಿ ಚಟುವಟಿಕೆ-ಮತದಾನ ಜಾಗೃತಿ ಅಭಿಯಾನಕ್ಕೆ ಚಾಲನೆ 


Team Udayavani, May 3, 2018, 5:39 PM IST

3-May-27.jpg

ಹಾವೇರಿ: ಮುಂಗಾರು ಬಿತ್ತನೆ ಪೂರ್ವದಲ್ಲಿ ಕೃಷಿ ಚಟುವಟಿಕೆಗೆ ಸಂಬಂಧಿಸಿದಂತೆ ರೈತರಿಗೆ ಸಮಗ್ರ ಮಾಹಿತಿ ನೀಡುವುದರ ಜೊತೆಗೆ ವಿಧಾನಸಭಾ ಚುನಾವಣೆಯ ಮತದಾನ ಜಾಗೃತಿಗಾಗಿ ಜಿಲ್ಲೆಯ 224 ಗ್ರಾಮ ಪಂಚಾಯತಿಗಳಲ್ಲೂ ಅಭಿಯಾನ ಹಮ್ಮಿಕೊಳ್ಳಲಾಗಿದೆ. ರೈತರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಡಾ| ಎಂ.ವಿ. ವೆಂಕಟೇಶ್‌ ಕರೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣದ ಆವರಣದಲ್ಲಿ ಬುಧವಾರ ಕೃಷಿ ಜಾಗೃತಿ ಅಭಿಯಾನದ ವಾಹನಗಳಿಗೆ ಹಸಿರು ನಿಶಾನೆ ತೋರಿ ಅವರು ಮಾತನಾಡಿದರು. ಮುಂಗಾರು ಬಿತ್ತನೆ ಪೂರ್ವದಲ್ಲಿ ಮಣ್ಣಿನ ಗುಣಮಟ್ಟ ಕಾಯ್ದುಕೊಳ್ಳುವುದು, ತಾಂತ್ರಿಕ ವಿವರಗಳು, ಬೇಸಾಯ ಪದ್ಧತಿ, ಬೆಳೆ ಪದ್ಧತಿ, ಬೀಜ ಹದ ಮಾಡುವುದು ಸೇರಿದಂತೆ ಸವಿವರ ಮಾಹಿತಿ ಒಳಗೊಂಡಂತೆ ರೈತರಿಗೆ ಜಾಗೃತಿ ಮೂಡಿಸಲಾಗುವುದು. ಈ ಉದ್ದೇಶಕ್ಕಾಗಿ ಏಳು ವಾಹನಗಳು ಜಿಲ್ಲೆಯ ಏಳು ತಾಲೂಕಿನಲ್ಲಿ ಸಂಚರಿಸಿ ರೈತರಿಗೆ ಮಾಹಿತಿ ನೀಡಲಿವೆ ಎಂದರು.

ವಾಹನಗಳನ್ನು ಕೃಷಿ ಚಟುವಟಿಕೆಗಳು, ಕೃಷಿ ಯೋಜನೆಗಳ ಮಾಹಿತಿ ಫಲಕದಿಂದ ಅಳವಡಿಸಲಾಗಿದೆ. ಕೃಷಿಯ ಮಾಹಿತಿಯೊಂದಿಗೆ ವಿಧಾನಸಭಾ ಚುನಾವಣೆಯಲ್ಲಿ ಮತದಾನದ ಮಹತ್ವ ಕುರಿತಂತೆ ಸಂದೇಶವುಳ್ಳ ಮಾಹಿತಿ ಫಲಕಗಳನ್ನು ಅಳವಡಿಸಲಾಗಿದೆ ಎಂದರು.

ವಾಹನದಲ್ಲಿ ಮತದಾನ ಜಾಗೃತಿ ಹಾಗೂ ಕೃಷಿ ಜಾಗೃತಿಯ ಮಾಹಿತಿಯ ಕರಪತ್ರಗಳನ್ನು ರೈತರಿಗೆ ವಿತರಣೆ ಮಾಡಲಾಗುವುದು. ತಾಂತ್ರಿಕ ಸಿಬ್ಬಂದಿಗಳಿಂದ ವಿವರ ನೀಡಲಾಗುವುದು. ವಿಡಿಯೋಗಳ ಮೂಲಕ ಕೃಷಿ ಮತ್ತು ಮತದಾನ ಜಾಗೃತಿ ಕಿರುಚಿತ್ರ ಪ್ರದರ್ಶನ ಸಹ ನಡೆಯಲಿದೆ. ಪ್ರತಿ ಹೋಬಳಿ ಮಟ್ಟದಲ್ಲಿ ಮೂರು ದಿನ ನಡೆಯುವ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಕೋರಿದರು.

ಕೃಷಿ ಇಲಾಖೆಯ ಕಾರ್ಯಕ್ರಮದ ಜೊತೆಗೆ ತೋಟಗಾರಿಕೆ, ರೇಷ್ಮೆ, ಪಶುಸಂಗೋಪನೆ, ಅರಣ್ಯ, ಜಿಲ್ಲಾ ಅಗ್ರಣೀಯ ಬ್ಯಾಂಕ್‌, ನಬಾರ್ಡ್‌, ಸಹಕಾರಿ ಸಂಘಗಳ ಇಲಾಖೆ ಪ್ರತಿನಿ ಧಿಗಳು ಸಹ ಮಾಹಿತಿ ನೀಡಲಿದ್ದಾರೆ. ಮೇ 9ರ ವರೆಗೆ ನಡೆಯುವ ಈ ಕಾರ್ಯಕ್ರಮಕ್ಕೆ ಚುನಾವಣಾ ಆಯೋಗದ ಅನುಮತಿ ಸಹ ಪಡೆಯಲಾಗಿದೆ ಎಂದು ಹೇಳಿದರು. ಉದ್ಘಾಟನಾ ಸಮಾರಂಭದಲ್ಲಿ ಅಪರ ಜಿಲ್ಲಾಧಿಕಾರಿ ಶಾಂತಾ ಹುಲ್ಮನಿ, ಕೃಷಿ ಇಲಾಖೆ ಉಪನಿರ್ದೇಶಕ ಹುಲಿರಾಜ್‌ ಹಾಗೂ ಕೃಷಿ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.