ಮತದಾನ ಜಾಗೃತಿಗೆ ಬಂದಿದೆ ಕಿರುಚಿತ್ರ

Team Udayavani, May 4, 2018, 7:05 AM IST

Voter-awareness-comes-from-.jpg

ಹುಬ್ಬಳ್ಳಿ: ಮತಜಾಗೃತಿ ಮೂಡಿಸುವ ನಿಟ್ಟಿನಲ್ಲಿ, ಕಡ್ಡಾಯ ಮತದಾನ ನಮ್ಮೆಲ್ಲರ ಕರ್ತವ್ಯ ಎಂಬ ಸಂದೇಶ ಹೊತ್ತ ಕಿರುಚಿತ್ರ
ವೊಂದನ್ನು ನಿರ್ಮಿಸುವ ಮೂಲಕ ಸಹೋದರರಿಬ್ಬರು ಗಮನ ಸೆಳೆದಿದ್ದಾರೆ. “ಒಂದು ಮತದ ಸುತ್ತ’ ಕಿರುಚಿತ್ರಕ್ಕೆ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಇಲ್ಲಿನ ಕೃಷ್ಣ ಪಂತ ಹಾಗೂ ರಾಘವೇಂದ್ರ ಪಂತ ಎಂಬ ಸಹೋದರರು ರವಿರತ್ನ ಕ್ರಿಯೇಶನ್ಸ್‌ ಅಡಿಯಲ್ಲಿ 14 ನಿಮಿಷಗಳ ಈ ಕಿರುಚಿತ್ರ ನಿರ್ಮಿಸಿದ್ದು, ಇದು ಮತದಾನ ಹಕ್ಕಿನ ಮಹತ್ವವನ್ನು ಸಾರಿ ಹೇಳುತ್ತಿದೆ.

ಕಿರುಚಿತ್ರದಲ್ಲಿ ರಂಗಾಯಣ ಮಾಜಿ ನಿರ್ದೇಶಕ, ರಂಗಕರ್ಮಿ ಸುಭಾಸ ನರೇಂದ್ರ, ಯುವಕರಿಗೆ ಮತದಾನ ಮಹತ್ವದ ಮನನ ಮಾಡುವ ಉಪನ್ಯಾಸಕರ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಉಳಿದಂತೆ ಪ್ರಕಾಶ ಧುಳೆ, ಕೇಶವ ಕರ್ಜಗಿ ಸೇರಿ ಸುಮಾರು 15 ಕಲಾವಿದರು ನಟಿಸಿದ್ದಾರೆ. ಶಿವಾನಿ ಅಕ್ಕಿ ಅವರ ಹಿನ್ನೆಲೆ ಗಾಯನವಿದೆ. ನಾಲ್ಕೈದು ದಿನಗಳಲ್ಲಿ ಒಟ್ಟಾರೆಯಾಗಿ ಕಿರುಚಿತ್ರದ ನಿರ್ಮಾಣ
ಕಾರ್ಯ ಮುಗಿಸಲಾಗಿತ್ತು.

ಮೇ 2 ರಂದು ಯುಟ್ಯೂಬ್‌ನಲ್ಲಿ ಕಿರುಚಿತ್ರ ಬಿಡುಗಡೆಯಾಗಿದ್ದು,ಇದುವರೆಗೆ ಸುಮಾರು 3,200ಕ್ಕೂ ಅಧಿಕ ಜನರು ವೀಕ್ಷಿಸಿದ್ದಾರೆ.

ಮತದಾನ ದಿನ ರಜೆ ಇರುವುದರಿಂದ ಅಕ್ಷರವಂತರು ಹಾಗೂ ನಗರವಾಸಿಗಳು ಮತದಾನ ಮಾಡದೆ ರಜೆ ಮಜಾ ಸವಿಯಲು ಬೇರೆ ಕಡೆ ಹೋಗುತ್ತಿರುವುದು ಸಾಮಾನ್ಯ. ಅದೇ ರೀತಿ ಯಾರಿಗೆ ಮತ ಹಾಕಿದರೆ ಪ್ರಯೋಜನ ಏನಿದೆ. ಯಾರು ಬಂದು
ಮಾಡುವುದಾದರೂ ಏನು. ಎಲ್ಲರೂ ಅವರೇ ಎಂಬ ಮನೋಭಾವ ಯುವಕರಲ್ಲಿ ಹೆಚ್ಚುತ್ತಿದ್ದು, ಮತದಾನಕ್ಕೆ ನಿರಾಸಕ್ತಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಿರುಚಿತ್ರದ ಮೂಲಕ ಜಾಗೃತಿ ಮೂಡಿಸಲು, ಯುವಕರು ಹಾಗೂ ವಿಶೇಷವಾಗಿ ಮತದಾನ ದಿನ ರಜೆ ಮಜಾ ಸವಿಯಲು ತೆರಳುವವರನ್ನು ಮತದಾನಕ್ಕೆ ಆಕರ್ಷಿಸಲು ಯತ್ನಿಸಲಾಗಿದೆ. ನಾವು ಯಾವುದೇ ಪಕ್ಷ-ವ್ಯಕ್ತಿ ಪರ ಪ್ರಚಾರ ಸಂದೇಶ ನೀಡಿಲ್ಲ.
ಬದಲಾಗಿ ಯಾವುದೇ ಪಕ್ಷ ಅಥವಾ ಯಾವುದೇ ವ್ಯಕ್ತಿಯಾಗಲಿ ಒಟ್ಟಾರೆ ಮತದಾನ ಮಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನಕ್ಕೆ ಬಹುದೊಡ್ಡ ಮೌಲ್ಯ ಹಾಗೂ ಮಹತ್ವ ಇದೆ ಎಂಬ ಸಂದೇಶವನ್ನು ಒಂದು ಮತದ ಸುತ್ತ ಕಿರುಚಿತ್ರ ನೀಡುತ್ತಿದೆ ಎಂಬುದು ಕಿರುಚಿತ್ರದ ನಿರ್ದೇಶಕ ರಾಘವೇಂದ್ರ ಪಂತ ಅವರ ಅನಿಸಿಕೆ.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.