ಪ್ರಚಾರಕ್ಕೆ ರೆಡ್ಡಿ ಬಳ್ಳಾರಿಗೆ ಬರುವಂತಿಲ್ಲ
Team Udayavani, May 5, 2018, 6:00 AM IST
ಹೊಸದಿಲ್ಲಿ: ಕರ್ನಾಟಕ ಚುನಾವಣೆ ವೇಳೆ ಸೋದರ ಸೋಮಶೇಖರ ರೆಡ್ಡಿ ಪರ ಪ್ರಚಾರ ನಡೆಸುವುದಕ್ಕಾಗಿ ಬಳ್ಳಾರಿಗೆ ತೆರಳಲು ಗಣಿ ಉದ್ಯಮಿ ಜನಾರ್ದನ ರೆಡ್ಡಿಗೆ ಸುಪ್ರೀಂ ಕೋರ್ಟ್ ಅನುಮತಿ ನಿರಾಕರಿಸಿದೆ. ನ್ಯಾಯಮೂರ್ತಿ ಗಳಾದ ಎ.ಕೆ. ಸಿಕ್ರಿ ಮತ್ತು ಅಶೋಕ್ ಭೂಷಣ್ ಅವರ ನ್ನೊಳಗೊಂಡ ನ್ಯಾಯಪೀಠ ಈ ಸಂಬಂಧದ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಳ್ಳಲು ನಿರಾಕರಿಸಿದೆ.
ಕರ್ನಾಟಕದಲ್ಲಿ ಚುನಾವಣೆ ನಡೆಯುತ್ತಿದೆ. ಸೋದರರ ಪರ ಚುನಾವಣ ಪ್ರಚಾರ ನಡೆಸುವುದಕ್ಕಾಗಿ ಬಳ್ಳಾರಿ ಜಿಲ್ಲೆಗೆ ಪ್ರವೇಶಿಸಲು ಜನಾರ್ದನ ರೆಡ್ಡಿಗೆ ಅವಕಾಶ ನೀಡಬೇಕು. 10 ದಿನಗಳ ಮಟ್ಟಿಗಾದರೂ ಜಾಮೀನು ಷರತ್ತನ್ನು ಸಡಿಲಿಸಬೇಕು ಎಂದು ರೆಡ್ಡಿ ಪರ ವಕೀಲರು ಮನವಿ ಮಾಡಿ ದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, “ಕ್ಷಮಿಸಿ, ಈ ಅರ್ಜಿಯನ್ನು ಪರಿಗಣಿಸಲು ನಾವು ಇಷ್ಟಪಡುವುದಿಲ್ಲ. ಅರ್ಜಿಯನ್ನು ವಜಾಗೊಳಿಸ ಲಾಗಿದೆ’ ಎಂದು ಹೇಳಿತು. ಅಕ್ರಮ ಗಣಿಗಾರಿಕೆ ಪ್ರಕರಣ ದಲ್ಲಿ ಮೂರು ವರ್ಷಗಳವರೆಗೆ ಜೈಲುವಾಸ ಅನುಭವಿಸಿದ್ದ ಜನಾರ್ದನ ರೆಡ್ಡಿಗೆ 2015ರಲ್ಲಿ ಷರತ್ತುಬದ್ಧ ಜಾಮೀನು ನೀಡಲಾಗಿತ್ತು. ಕರ್ನಾಟಕದ ಬಳ್ಳಾರಿ, ಆಂಧ್ರದ ಕಡಪ ಹಾಗೂ ಅನಂತಪುರಕ್ಕೆ ಭೇಟಿ ನೀಡದಂತೆ ಈ ವೇಳೆ ಷರತ್ತು ವಿಧಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
MUST WATCH
ಹೊಸ ಸೇರ್ಪಡೆ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು