ಇಂದು ಪ್ರಧಾನಿ ಆಗಮನ; ವ್ಯಾಪಕ ಸಿದ್ಧತೆ-ಭದ್ರತೆ


Team Udayavani, May 5, 2018, 11:21 AM IST

5-May-1.jpg

ಮಹಾನಗರ: ವಿಧಾನಸಭಾ ಚುನಾವಣೆಗೆ ದಿನಗಣನೆ ಬಾಕಿ ಇರುವಂತೆ ವಿವಿಧ ರಾಜಕೀಯ ಪಕ್ಷಗಳಿಂದ ಪ್ರಚಾರದ ಭರಾಟೆಯೂ ಜೋರಾಗಿ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಮೇ 5ರಂದು ಶನಿವಾರ ಸಂಜೆ ಮಂಗಳೂರಿನ ಕೇಂದ್ರ ಮೈದಾನದಲ್ಲಿ ಆಯೋಜಿಸಲಾದ ಬಿಜೆಪಿ ಬೃಹತ್‌ ಚುನಾವಣಾ ಪ್ರಚಾರ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ. 

ಮಂಗಳೂರಿಗೆ ಪ್ರಧಾನಿ ಆಗಮನದ ಹಿನ್ನೆಲೆಯಲ್ಲಿ ಬಿಜೆಪಿ ವತಿಯಿಂದ ಭರದ ಸಿದ್ಧತೆ ನಡೆಯುತ್ತಿದ್ದರೆ, ಪ್ರಧಾನಿ ಆಗಮನದ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಸೂಕ್ತ ಮುಂಜಾಗೃತಾ ಕ್ರಮ ಕೈಗೊಳ್ಳಲು ಪೊಲೀಸ್‌ ಇಲಾಖೆ ಸಕಲ ತಯಾರಿ ನಡೆಸುತ್ತಿದೆ.

ಪ್ರಧಾನಿ ಮೋದಿ ಅವರು ಶನಿವಾರ ಸಂಜೆ ಶಿವಮೊಗ್ಗದಿಂದ ಹೊರಟು ಸಂಜೆ 5.30ರ ವೇಳೆಗೆ ವಿಶೇಷ ವಿಮಾನದ ಮೂಲಕ ಮಂಗಳೂರು ಅಂತಾರಾ ಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಅಲ್ಲಿಂದ ರಸ್ತೆ ಮಾರ್ಗದ ಮೂಲಕ ಮಂಗಳೂರಿನ ಕೇಂದ್ರ ಮೈದಾನಕ್ಕೆ ಆಗಮಿಸಿ ಚುನಾವಣಾ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.

1 ಲಕ್ಷ ಜನರ ನಿರೀಕ್ಷೆ
ನರೇಂದ್ರ ಮೋದಿಯವರು ಪ್ರಧಾನಿಯಾದ ಬಳಿಕ ಮಂಗಳೂರಿನಲ್ಲಿ ಬಹಿರಂಗ ಸಭೆಯಲ್ಲಿ ಭಾಗವಹಿಸುತ್ತಿರುವುದು ಇದು ಪ್ರಥಮ ಬಾರಿಯಾಗಿದೆ. ಜತೆಗೆ ವಿಧಾನ ಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕರಾವಳಿಯಲ್ಲೆಡೆ ವ್ಯಾಪಕ ಪ್ರಚಾರ ಕಾರ್ಯ ನಡೆಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳಿಂದಲೂ ಬಿಜೆಪಿ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಹೀಗಾಗಿ ಒಟ್ಟು ಸುಮಾರು 1 ಲಕ್ಷಕ್ಕೂ ಅಧಿಕ ಮಂದಿ ಸಮಾವೇಶದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ.

ಶನಿವಾರ ಸಂಜೆ 4 ಗಂಟೆಗೆ ಮಂಗಳೂರು ಕೇಂದ್ರ ಮೈದಾನದಲ್ಲಿ ಕಾರ್ಯಕ್ರಮ ಆರಂಭವಾಗಲಿದೆ. ಸುಮಾರು 1 ತಾಸು ದೇಶಭಕ್ತಿ ಗೀತೆ ಗಾಯನ ನಡೆಯಲಿದೆ. ಬಳಿಕ ಪಕ್ಷದ ಮೂವರು ವರಿಷ್ಠರು ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಸುಮಾರು 5.30ರ ವೇಳೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳೂರಿಗೆ ಆಗಮಿಸಲಿದ್ದಾರೆ. ಅವರನ್ನು ಜಿಲ್ಲಾ ಬಿಜೆಪಿ ಪರವಾಗಿ ಸಮ್ಮಾನಿಸಲಾಗುವುದು. ಬಳಿಕ ಸಭೆಯನ್ನು ಉದ್ದೇಶಿಸಿ ನರೇಂದ್ರ ಮೋದಿ ಮಾತನಾಡಲಿದ್ದಾರೆ.

30×60 ಅಡಿ ವೇದಿಕೆ
ಬಿಜೆಪಿ ಬೃಹತ್‌ ಚುನಾವಣಾ ಪ್ರಚಾರ ಸಭೆಯ ಹಿನ್ನೆಲೆಯಲ್ಲಿ ಪುರಭವನದ ಹಿಂಭಾಗದ ಫ‌ುಟ್ಬಾಲ್‌ ಮೈದಾನದಲ್ಲಿ 30 ಅಡಿ ಎತ್ತರ ಹಾಗೂ 60 ಅಡಿ ಅಗಲದ ಬೃಹತ್‌ ವೇದಿಕೆಯನ್ನು ನಿರ್ಮಿಸಲಾಗಿದೆ. ಈ ವೇದಿಕೆಯಲ್ಲಿ ಸುಮಾರು 20 ಮಂದಿ ಕುಳಿತುಕೊಳ್ಳಲು ಅವಕಾಶವಿದೆ. 

ವಾಹನ ನಿಲುಗಡೆ ನಿಷೇಧ 
ಪ್ರಧಾನಿ ಮೋದಿ ಅವರು ಮೇ 5ರಂದು ಮಂಗಳೂರು ವಿಮಾನ ನಿಲ್ದಾಣದಿಂದ ನಗರದ ನೆಹರೂ ಮೈದಾನಕ್ಕೆ ಆಗಮಿಸಿ ವಾಪಸ್‌ ವಿಮಾನ ನಿಲ್ದಾಣಕ್ಕೆ ಸಂಚರಿಸುವ ಸಮಯ ವಿವಿಐಪಿಯವರ ಭದ್ರತೆ ಮತ್ತು ಸುರಕ್ಷೆಯ ಸಲುವಾಗಿ ಈ ವ್ಯಾಪ್ತಿಯ ರಸ್ತೆಯಲ್ಲಿ ವಾಹನ ನಿಲುಗಡೆ ನಿಷೇಧಿಸಲಾಗಿದೆ.

ಪ್ರಧಾನ ಮಂತ್ರಿಯವರು ಮಂಗಳೂರು ವಿಮಾನ ನಿಲ್ದಾಣದಿಂದ ಕೆಂಜಾರು- ಮರವೂರು- ಮರಕಡ- ಕಾವೂರು- ಬೊಂದೇಲ್‌- ಪದವಿ ನಂಗಡಿ- ಯೆಯ್ನಾಡಿ- ಕೆಪಿಟಿ- ಸರ್ಕಿಟ್‌ ಹೌಸ್‌- ಬಟ್ಟಗುಡ್ಡೆ, ಕದ್ರಿ ಕಂಬ್ಳ – ಭಾರತ್‌ ಬೀಡಿ ಕ್ರಾಸ್‌- ಬಂಟ್ಸ್‌ ಹಾಸ್ಟೆಲ್‌- ಡಾ| ಅಂಬೇಡ್ಕರ್‌ ವೃತ್ತ- ಹಂಪನಕಟ್ಟೆ- ಎ. ಬಿ. ಶೆಟ್ಟಿ ವೃತ್ತ- ನೆಹರೂ ಮೈದಾನದವರೆಗೆ ಹಾಗೂ ನೆಹರೂ ಮೈದಾನದಿಂದ ವಾಪಸ್‌ಹೋಗುವ ಸಮಯ ಕ್ಲಾಕ್‌ ಟವರ್‌- ಕೆ. ಬಿ. ಕಟ್ಟೆ- ಲೈಟ್‌ಹೌಸ್‌ ಹಿಲ್‌ ರಸ್ತೆ- ಡಾ| ಅಂಬೇಡ್ಕರ್‌ ವೃತ್ತ- ಬಂಟ್ಸ್‌ಹಾಸ್ಟೆಲ್‌- ಭಾರತ್‌ ಬೀಡಿ ಕ್ರಾಸ್‌- ಕದ್ರಿ ಕಂಬಳ- ಬಟ್ಟಗುಡ್ಡೆ- ಕೆಪಿಟಿ- ಯೆಯ್ನಾಡಿ- ಪದವಿನಂಗಡಿ- ಬೊಂದೇಲ್‌- ಕಾವೂರು- ಮರಕಡ- ಮರ ವೂರು- ಕೆಂಜಾರು- ಮಂಗಳೂರು ವಿಮಾನ ನಿಲ್ದಾಣದ ವರೆಗೆ ಸಂಚರಿಸುವ ರಸ್ತೆಯ ಇಕ್ಕೆಲಗಳಲ್ಲಿ ಎಲ್ಲ ತರಹದ ವಾಹನಗಳ ನಿಲುಗಡೆಯನ್ನು ಮೇ 5ರಂದು ಬೆಳಗ್ಗೆ 8ರಿಂದ ರಾತ್ರಿ 9ರ ವರೆಗೆ ನಿಷೇಧಿಸಲಾಗಿದೆ.

ನೆಹರೂ ಮೈದಾನ ಮತ್ತು ಸುತ್ತಲಿನ 500 ಮೀ. ವ್ಯಾಪ್ತಿಯಲ್ಲಿ ಮೇ 5ರಂದು ಬೆಳಗ್ಗೆ 8ರಿಂದ ಕಾರ್ಯಕ್ರಮ ಮುಗಿಯುವ ತನಕ ವಾಹನಗಳನ್ನು ಅನಾವಶ್ಯಕ ವಾಗಿ ನಿಲ್ಲಿಸುವುದನ್ನು ನಿಷೇಧಿಸಲಾಗಿದೆ. ಮೇ 5ರಂದು ಬೆಳಗ್ಗೆ 8ರಿಂದ ವಿವಿಐಪಿಯವರು ನಿರ್ಗಮಿಸು ವವರೆಗೆ ಸರ್ಕಿಟ್‌ಹೌಸ್‌ ಆವರಣ ದಲ್ಲಿ ಅನಾವಶ್ಯಕ ವಾಹನಗಳ ನಿಲುಗಡೆ ನಿಷೇಧಿಸಲಾಗಿದೆ. 

ಟಾಪ್ ನ್ಯೂಸ್

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.