“ಮೆಜೆಸ್ಟಿಕ್‌’ ನಿರ್ದೇಶಕಪಿ.ಎನ್‌.ಸತ್ಯ ಇನ್ನಿಲ್ಲ

Team Udayavani, May 6, 2018, 10:44 AM IST

blore-2.jpg

ಬೆಂಗಳೂರು: ಅನಾರೋಗ್ಯ ದಿಂದ ಬಳಲುತ್ತಿದ್ದ “ಮೆಜೆಸ್ಟಿಕ್‌’ ಚಿತ್ರ ಖ್ಯಾತಿಯ ನಿರ್ದೇಶಕ ಪಿ.ಎನ್‌.ಸತ್ಯ (45) ಶನಿವಾರ ಸಂಜೆ ನಿಧನರಾದರು. ಒಂದು ವರ್ಷದಿಂದ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಸತ್ಯ ಅವರು, ಇತ್ತೀಚೆಗೆ ಚಿಕಿತ್ಸೆ ಪಡೆದು, ಚೇತರಿಸಿಕೊಂಡಿದ್ದರು.

ಎರಡು ವಾರದಿಂದ ನಾಗರಬಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದ ಹಿನ್ನೆಲೆಯಲ್ಲಿ ಶುಕ್ರವಾರ ಅವರನ್ನು ಮನೆಗೆ ಕರೆದುಕೊಂಡು ಬರಲಾಗಿತ್ತು. ಶನಿವಾರ ಸಂಜೆ ರಕ್ತದೊತ್ತಡ ಕಡಿಮೆಯಾಗಿ ಅವರು ಕೊನೆಯುಸಿರೆಳೆದಿದ್ದಾರೆ. ಮೃತರಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದಾರೆ.

2002ರಲ್ಲಿ “ಮೆಜೆಸ್ಟಿಕ್‌’ ಚಿತ್ರದ ಮೂಲಕ ನಿರ್ದೇಶಕರಾದ ಪಿ.ಎನ್‌.ಸತ್ಯ, ಆ ಚಿತ್ರದ ಮೂಲಕ ದರ್ಶನ್‌ ಅವರನ್ನೂ ನಾಯಕರನ್ನಾಗಿ ಚಿತ್ರರಂಗಕ್ಕೆ ಪರಿಚಯಿಸಿದ್ದರು. ಆ ಚಿತ್ರ ಕನ್ನಡ ಚಿತ್ರರಂಗದಲ್ಲಿ ದೊಡ್ಡ ಯಶಸ್ಸು ಪಡೆಯಿತು. ಆ ಬಳಿಕ ದರ್ಶನ್‌ ಅವರೊಂದಿಗೆ “ದಾಸ’, “ಸರ್ದಾರ’, “ಶಾಸ್ತ್ರೀ’, “ತಂಗಿಗಾಗಿ’ ಚಿತ್ರಗಳನ್ನು ನಿರ್ದೇಶಿಸಿದ್ದರು. ಆ ನಂತರ ಸುದೀಪ್‌ ಅವರಿಗೆ “ಗೂಳಿ’, ಶಿವರಾಜಕುಮಾರ್‌ ಜತೆ “ಡಾನ್‌’, “ಹ್ಯಾಟ್ರಿಕ್‌·ಹೊಡಿಮಗ’ ಚಿತ್ರಗಳನ್ನು ಸತ್ಯ ನಿರ್ದೇಶಿಸಿದ್ದರು. ದುನಿಯಾ ವಿಜಯ್‌ಗೆ “ಶಿವಾಜಿ ನಗರ’, ಆದಿತ್ಯ ನಟನೆಯಲ್ಲಿ “ಬೆಂಗಳೂರು ಅಂಡರ್‌ವರ್ಲ್ಡ್’ ಚಿತ್ರಕ್ಕೂ ಸತ್ಯ ನಿರ್ದೇಶನವಿತ್ತು. 

ಪಿ.ಎನ್‌.ಸತ್ಯ, ನಿರ್ದೇಶನದೊಂದಿಗೆ ನಟನೆಯಲ್ಲೂ ತೊಡಗಿದ್ದರು. ಸಾಕಷ್ಟು ಚಿತ್ರಗಳಲ್ಲಿ ವಿವಿಧ ಪಾತ್ರ ನಿರ್ವಹಿಸಿದ್ದ ಪಿ.ಎನ್‌.ಸತ್ಯ, “ಪಾಗಲ್‌’ ಎಂಬ ಚಿತ್ರದಲ್ಲಿ ನಾಯಕರಾಗಿ ನಟಿಸಿದ್ದರು. ಬಹುತೇಕ ಸ್ಟಾರ್‌ ನಟರೊಂದಿಗೆ ಚಿತ್ರಗಳನ್ನು ನಿರ್ದೇಶಿಸಿದ್ದ ಖ್ಯಾತಿ ಇವರದ್ದಾಗಿತ್ತು. ಸತ್ಯ ಕನ್ನಡ ಚಿತ್ರರಂಗದಲ್ಲಿ ಆ್ಯಕ್ಷನ್‌ ನಿರ್ದೇಶಕ ಎಂದೇ ಗುರುತಿಸಿಕೊಂಡಿದ್ದರು. ಅವರ ನಿರ್ದೇಶನದ ಎಲ್ಲ ಚಿತ್ರಗಳು ಪಕ್ಕಾ ಆ್ಯಕ್ಷನ್‌ ಚಿತ್ರಗಳು ಎಂಬುದು ವಿಶೇಷ. ಬಸವೇಶ್ವರ ನಗರದ ಅವರ ಸಹೋದರಿ ಮನೆಯಲ್ಲಿ ಸತ್ಯ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಭಾನುವಾರ (ಇಂದು) ಬನಶಂಕರಿಯ ಚಿತಾಗಾರದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.

ಟಾಪ್ ನ್ಯೂಸ್

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

9-

Padubidri: ವ್ಯವಹಾರದಲ್ಲಿ ನಷ್ಟ: ಬಾವಿಗೆ ಹಾರಿ ಆತ್ಮಹತ್ಯೆ

8-

Charmadi ಘಾಟ್‌ನಲ್ಲಿ ಟಾಟಾ ಏಸ್‌ ಪಲ್ಟಿ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

7-knee

Knee: ಮೊಣಗಂಟು ಸಮಸ್ಯೆ: ನಿಮ್ಮ ರೋಗಿಗಳಿಗೆ ಅರ್ಥ ಮಾಡಿಕೊಳ್ಳಲು ಸಹಾಯ ಮಾಡುವುದು ಹೇಗೆ?

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

9-

Padubidri: ವ್ಯವಹಾರದಲ್ಲಿ ನಷ್ಟ: ಬಾವಿಗೆ ಹಾರಿ ಆತ್ಮಹತ್ಯೆ

8-

Charmadi ಘಾಟ್‌ನಲ್ಲಿ ಟಾಟಾ ಏಸ್‌ ಪಲ್ಟಿ

Prajadhwani 2; ಯಾದಗಿರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರ ಸಮಾವೇಶ

Prajadhwani 2; ಯಾದಗಿರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರ ಸಮಾವೇಶ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.