ದೀರ್ಘಾವಧಿ ಯೋಜನೆ: ಹರೀಶ್‌ ಪೂಂಜ

Team Udayavani, May 10, 2018, 1:19 PM IST

Kundapur-Bandh-1.jpg

ಬೆಳ್ತಂಗಡಿ: ಪತ್ರಿಕಾ ಭವನದಲ್ಲಿ ಹಮ್ಮಿಕೊಂಡಿದ್ದ ಪತ್ರಕರ್ತರೊಂದಿಗಿನ ಸಂವಾದದಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಆಭ್ಯರ್ಥಿ ಹರೀಶ್‌ ಪೂಂಜ, ಬಿಜೆಪಿ ವಿಭಾಗ ಸಹ ಪ್ರಭಾರಿ ಪ್ರತಾಪಸಿಂಹ ನಾಯಕ್‌ ತಮ್ಮ ಯೋಜನೆ, ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ.

ತಾ|ನ 81 ಗ್ರಾಮಗಳಲ್ಲೂ ಅಭಿವೃದಿಯಾಗಬೇಕಿದೆ. ಮುಖ್ಯವಾಗಿ ನಗರ, ಗ್ರಾಮೀಣ ಪ್ರದೇಶಗಳ ಅಭಿವೃದ್ಧಿ ಯಾಗಬೇಕಿದೆ. ಜತೆಗೆ ರಸ್ತೆ, ನೀರು, ಉದ್ಯೋಗ, ಎಂಡೋಸಲ್ಫಾನ್‌, ಆರೋಗ್ಯ ಮೊದಲಾದ ವಿಚಾರಗಳಿಗೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಅವರ ಯೋಜನೆಗಳನ್ನು ಮಾದರಿಯನ್ನಾಗಿಟ್ಟು ಕೊಂಡು ದೀರ್ಘಾವಧಿಗೆ ಉಪಯೋಗಕ್ಕೆ ಬರುವ ಯೋಜನೆಗಳನ್ನು ತಾಲೂಕಿನಲ್ಲಿ ಹಮ್ಮಿಕೊಳ್ಳಲಾಗುತ್ತದೆ ಎಂದು ಹರೀಶ್‌ ಪೂಂಜ ಹೇಳಿದರು.

ತಾಲೂಕಿನ ಅಭಿವೃದ್ಧಿ ವಿಚಾರವಾಗಿ ತಿಂಗಳಿಗೊಮ್ಮೆ ಪಕ್ಷದ ವತಿಯಿಂದ ಅವಲೋಕನ ಹಮ್ಮಿಕೊಳ್ಳಲಾಗುವುದು. ರಾಜ್ಯದ ನಾಯಕರು ನನಗೆ ಇಲ್ಲಿ ಈ ಬಾರಿ ಸ್ಪರ್ಧಿಸಲು ಅವಕಾಶ ಮಾಡಿಕೊಟ್ಟಿದ್ದಾರೆ. ತಾಲೂಕಿನ ಎಲ್ಲ ಹಿರಿಯರ ಬೆಂಬಲವಿದೆ. ತಾಲೂಕಿನ ಮತದಾರರ ಬೆಂಬಲ ಇರುವುದು ಕಳೆದ ದಿನಗಳಲ್ಲಿ ನಡೆಸಿದ ಓಡಾಟದಿಂದ ಅನುಭವಕ್ಕೆ ಬಂದಿದೆ. ಬದಲಾವಣೆ ಬಯಸಿದ್ದಾರೆ ಎಂಬುದೂ ಗಮನಕ್ಕೆ ಬಂದಿದೆ ಎಂದರು.

ತಾಲೂಕಿನಲ್ಲಿ ರಸ್ತೆ, ಸೇತುವೆಗಳ ನಿರ್ಮಾಣ ಇನ್ನೂ ಹಲವೆಡೆ ಆಗ ಬೇಕಾಗಿದೆ. ಕುಡಿಯವ ಮತ್ತು ಕೃಷಿಗಾಗಿ ನೀರಿನ ವ್ಯವಸ್ಥೆಯ ಕೊರತೆ ಇದೆ. ಕೃಷಿಗಾಗಿ ಅಲ್ಲಲ್ಲಿ ಅಣೆಕಟ್ಟುಗಳ ನಿರ್ಮಾಣ ಮಾಡಲಾಗುತ್ತದೆ. ಬೆಳ್ತಂಗಡಿಯಲ್ಲಿ ವಾಯು ವಿಹಾರಕ್ಕಾಗಿ ಪಾರ್ಕ್‌ ನಿರ್ಮಾಣ, ಸೂಕ್ತ ಚರಂಡಿ ವ್ಯವಸ್ಥೆ, ತಾಲೂಕಿನ ಪ್ರಮುಖ ಪೇಟೆಗಳಲ್ಲಿ ಫುಟ್‌ ಪಾತ್‌ ಸಹಿತ ರಸ್ತೆ ನಿರ್ಮಾಣ, ಪಾರ್ಕಿಂಗ್‌ ವ್ಯವಸ್ಥೆ ಮಾಡಬೇಕಾಗಿದೆ ಎಂದರು.

ಭ್ರಷ್ಟಾಚಾರ ನಿಯಂತ್ರಣ
ಭ್ರಷ್ಟಾಚಾರ ನಿಯಂತ್ರಣಕ್ಕೆ ಚುನಾವಣೆ ಬಂದಾಗ ಕಚೇರಿಗೆ ಹೋಗಿ ಅಬ್ಬರಿಸಿದರೆ ಪ್ರಯೋಜನವಿಲ್ಲ. ಸೂಕ್ತ ಅಧಿಕಾರಿಗಳನ್ನು ನಿಯೋಜಿಸಿದಲ್ಲಿ ವ್ಯವಸ್ಥೆ ಸರಿಯಾದ ದಿಕ್ಕಿನಲ್ಲಿ ಹೋಗುತ್ತವೆ. ಯೋಗ್ಯ ತಹಶೀಲ್ದಾರ್‌, ಎಸಿ ನಿಯುಕ್ತಿ ಮಾಡದಿದ್ದರ ಪರಿಣಾಮ ಮತ್ತು ಆಗ್ಗಿಂದಾಗ್ಗೆ ಬದಲಿಸುತ್ತಿರುವ ಕಾರಣ ಜನರಿಗೆ ತೊಂದರೆಯಾಗುತ್ತದೆ.

ಇನ್ನು ಸವಲತ್ತುಗಳ ವಿತರಣೆಯನ್ನು ಶಾಸಕರೇ ನೀಡಬೇಕು ಎಂದು ಬಿಜೆಪಿ ಬಯಸುವುದಿಲ್ಲ. ಇದುವರೆಗೆ ಶಾಸಕರು ಹಳ್ಳಿ ಮೂಲೆಯಲ್ಲಿನ ಜನರನ್ನು ತಾಲೂಕು ಕಚೇರಿಗೆ ಕರೆಯಿಸಿ ಸವಲತ್ತು ವಿತರಿಸುತ್ತಿದ್ದರು. ಮುಂದೆ ಸ್ಥಳೀಯ ಸಂಸ್ಥೆಗಳೇ ಅದನ್ನು ನಿರ್ವಹಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪ್ರತಾಪ್‌ಸಿಂಹ ನಾಯಕ್‌ ತಿಳಿಸಿದರು.

ಆಗುತ್ತಿರುವ ಅಭಿವೃದ್ಧಿ ಬಗ್ಗೆ ತಿಂಗಳಿಗೊಮ್ಮೆ ಪಕ್ಷದ ವತಿಯಿಂದ ಶಾಸಕರ ನೇತೃತ್ವದಲ್ಲಿ ಪರಿಶೀಲನ ಸಭೆ ನಡೆಸಲಿದ್ದೇವೆ. ಪಕ್ಷದ ಪ್ರಣಾಳಿಕೆಯಲ್ಲಿನ ಅಂಶಗಳಿಗೆ ಹೆಚ್ಚು ಒತ್ತು ನೀಡಲಿದ್ದೇವೆ. ಎಂಡೋ ಸಂತ್ರಸ್ತರ ಪುನರ್ವಸತಿಗಾಗಿ ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು. ಮುಂದಿನ ಚುನಾವಣೆ ಹತ್ತಿರ ಬಂದಾಗ ಯಾವುದೇ ಗಿಮಿಕ್‌ ಮಾಡುವ ಆವಶ್ಯಕತೆ ಇಲ್ಲ. ಸಾಧನೆಗಳನ್ನೇ ಮಾನದಂಡವಾಗಿ ಮತ್ತೆ ಆಯ್ಕೆಯಾಗಲು ಬಳಸಲಾಗುವುದು ಎಂದು ಹರೀಶ್‌ ಪೂಂಜ ಹೇಳಿದರು.

ಟಾಪ್ ನ್ಯೂಸ್

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.