ಕೆಂಪು ಬಸ್‌ಗಳಿಲ್ಲದೇ ಪ್ರಯಾಣಿಕರ ಪರದಾಟ

Team Udayavani, May 12, 2018, 1:06 PM IST

blore-7.jpg

ಬೆಂಗಳೂರು: ನಗರದ ಪ್ರಮುಖ ಕೆಎಸ್‌ಆರ್‌ಟಿಸಿ ನಿಲ್ದಾಣಗಳು ಪ್ರಯಾಣಿಕರಿಂದ ತುಂಬಿತುಳುಕುತ್ತಿವೆ. ಆದರೆ, ಆ ಪ್ರಯಾಣಿಕರನ್ನು ಕೊಂಡೊಯ್ಯಲು ಬಸ್‌ಗಳು ಮಾತ್ರ ಇಲ್ಲ!

ಚುನಾವಣಾ ಎಫೆಕ್ಟ್: ಮತದಾನದ ಜತೆಗೆ ವಾರಾಂತ್ಯದ ರಜಾ-ಮಜಾಕ್ಕೆ ತೆರಳುವ ಜನರಿಂದ ಮೆಜೆಸ್ಟಿಕ್‌, ಮೈಸೂರು ಸ್ಯಾಟಲೈಟ್‌, ನವರಂಗ್‌, ಯಶವಂತ ಪುರಗಳು ಭರ್ತಿ ಆಗಿದ್ದವು. ಆದರೆ, ಬಹುತೇಕ ಬಸ್‌ಗಳು ಚುನಾವಣಾ ಸೇವೆಗೆ ನಿಯೋಜನೆ ಗೊಂಡಿದ್ದರಿಂದ ಪ್ರಯಾಣಿಕರಿಗೆ ಬಸ್‌ಗಳ ಕೊರತೆ ಉಂಟಾಯಿತು. ಈ ಮಧ್ಯೆ ಮಳೆ ಅಬ್ಬರ ಕೂಡ ಇದ್ದುದ ರಿಂದ ಬರುವ ಬಸ್‌ಗಳೂ ತಡವಾಗಿ ಆಗಮಿಸಿದರು. ಪರಿಣಾಮ ಜನ ಪರದಾಡಿದರು. 

ಅರ್ಧಕರ್ಧ ಬಸ್‌: ಕೆಎಸ್‌ಆರ್‌ಟಿಸಿ ವ್ಯಾಪ್ತಿ ಯಲ್ಲಿ ಸರಿಸುಮಾರು 8,796 ಬಸ್‌ ಗಳಿವೆ. ಈ ಪೈಕಿ ಅರ್ಧಕರ್ಧ ಬಸ್‌ಗಳು (4,000) ಚುನಾವಣಾ ಕಾರ್ಯಕ್ಕೆ ನಿಯೋಜನೆ ಗೊಂಡಿವೆ. ಅವೆಲ್ಲವೂ ಕೆಂಪು ಬಸ್‌ಗಳಾಗಿರುವುದರಿಂದ ಇದರ ಬಿಸಿ ಸಾಮಾನ್ಯ ವರ್ಗದ ಪ್ರಯಾಣಿಕರಿಗೆ ತಟ್ಟಿತು. ಅದರಲ್ಲೂ ಉತ್ತರ ಕರ್ನಾಟಕ ಭಾಗದ ಪ್ರಯಾಣಿಕರೇ ಅಧಿಕ ಸಂಖ್ಯೆಯಲ್ಲಿ ಇದ್ದುದರಿಂದ ಸಹಜವಾಗಿಯೇ ಆ ಭಾಗದ ಜನರು ಹೆಚ್ಚು ತೊಂದರೆ ಅನುಭವಿಸುವಂತಾಯಿತು.

ಉತ್ತರ ಕರ್ನಾಟಕ ಭಾಗದ ಪುರುಷ ಮತ್ತು ಮಹಿಳಾ ಕೂಲಿಕಾರ್ಮಿಕರ ಕಂಕುಳಲ್ಲಿ ಮಕ್ಕಳು, ಕೈಯಲ್ಲಿ ಲಗೇಜು
ಹಿಡಿದು ಮಳೆಯಲ್ಲಿ ತೊಯ್ದುತೊ ಪ್ಪೆಯಾಗಿ ಬಸ್‌ ನಿಲ್ದಾಣಗಳ ಕಡೆ ಧಾವಿಸುತ್ತಿದ್ದರು. ಆದರೆ, ಅಲ್ಲಿ ನಿರಾಶೆಕಾದಿತ್ತು. ನಿಗದಿತ ಸಮಯಕ್ಕೆ ಬಸ್‌ಗಳು ಸಿಗದೆ ತಡರಾತ್ರಿವರೆಗೂ ಕಾದುಕುಳಿತ ದೃಶ್ಯ ಸಾಮಾನ್ಯವಾಗಿತ್ತು.

ಈ ನಡುವೆ ಬಸ್‌ಗಳು ಬಂದರೂ, ಕ್ಷಣಾರ್ಧದಲ್ಲಿ ಭರ್ತಿ ಆಗುತ್ತಿದ್ದವು. ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ಕಲಬುರ್ಗಿ, ಶಿವಮೊಗ್ಗ, ದಾವಣಗೆರೆ, ಹಾವೇರಿ ಕಡೆಗೆ ತೆರಳುವ ಬಸ್‌ಗಳಲ್ಲಿ ಈ ದೃಶ್ಯ ಕಂಡುಬಂತು. ಊರುಗಳಿಗೆ ತೆರಳಲು ಹೆಚ್ಚಿನ ಸಂಖ್ಯೆಯ ಬಸ್‌ಗಳು ಸಿಗದಿದ್ದರಿಂದ ಬಹುತೇಕರು ಚುನಾವಣೆಗೆ ಹಿಡಿಶಾಪ ಹಾಕುತ್ತಿದ್ದರು.
 
ಬಿಎಂಟಿಸಿ ಬಸ್‌ಗಳ ಬಳಕೆ: ಒಂದೆಡೆ ಚುನಾವಣೆ ಕಾರ್ಯಕ್ಕೆ ಬಸ್‌ಗಳನ್ನು ಕಳು ಹಿಸಲಾಗಿದೆ. ಮತ್ತೂಂದೆಡೆ ಪ್ರಯಾಣಿಕರ ಸಂಖ್ಯೆ ಸಾಕಷ್ಟು ಏರಿಕೆ ಆಗಿದೆ. ಇದರಿಂದ ಬಸ್‌ಗಳ ಕೊರತೆ ಉಂಟಾಗಿದೆ. ಆದಾಗ್ಯೂ ಕಡಿಮೆ ಸಂಖ್ಯೆಯಲ್ಲಿ ನಿಯೋಜನೆಗೊಂಡ ಬಸ್‌ಗಳನ್ನು ನಗರಕ್ಕೆ ತರಿಸಿಕೊಳ್ಳಲಾಗಿದೆ. ಅಷ್ಟೇ ಅಲ್ಲ, 50ಕ್ಕೂ ಹೆಚ್ಚು ಬಿಎಂಟಿಸಿ
ಬಸ್‌ಗಳನ್ನೂ ಬಳಸಿಕೊಳ್ಳಲಾಗುತ್ತಿದೆ ಎಂದು ಕೆಎಸ್‌ಆರ್‌ಟಿಸಿ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.  

ಟಾಪ್ ನ್ಯೂಸ್

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

1-qweqwqew

Congress ಪಕ್ಷವನ್ನು ಎರಡನೇ ಬಾರಿ ತೊರೆದ ಲವ್ಲಿ; ಮತ್ತೆ ಬಿಜೆಪಿ ಸೇರ್ಪಡೆ

Why Modi doesn’t talk about ladies now: Priyanka Gandhi

Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ

1-wewqewewq

H.D. Revanna ಬಂಧಿಸಿದ ಎಸ್ ಐಟಿ; ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್

1-qwweqwewq

Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚಿನ್ನದ ನಾಡಿನ ಕಲಾವಿದೆ ವಿದ್ಯಾಶ್ರೀ ಪ್ರತಿಭೆ ಅನಾವರಣ-ನೃತ್ಯಗಂಗಾ ಪ್ರದರ್ಶನ

ಚಿನ್ನದ ನಾಡಿನ ಕಲಾವಿದೆ ವಿದ್ಯಾಶ್ರೀ ಪ್ರತಿಭೆ ಅನಾವರಣ-ನೃತ್ಯಗಂಗಾ ಪ್ರದರ್ಶನ

Theft Case: ನಕಲಿ ಕೀ ಬಳಸಿ ಬ್ಯೂಟಿಷಿಯನ್‌ ಮನೆಗೆ ಕನ್ನ

Theft Case: ನಕಲಿ ಕೀ ಬಳಸಿ ಬ್ಯೂಟಿಷಿಯನ್‌ ಮನೆಗೆ ಕನ್ನ

Arrested: ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ 9 ವರ್ಷ ಬಳಿಕ ಬಂಧನ

Arrested: ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ 9 ವರ್ಷ ಬಳಿಕ ಬಂಧನ

Crime: ರೌಡಿಶೀಟರ್‌ನಿಂದ ಆಟೋ ಚಾಲಕನ ಹತ್ಯೆ

Crime: ರೌಡಿಶೀಟರ್‌ನಿಂದ ಆಟೋ ಚಾಲಕನ ಹತ್ಯೆ

Theft Case: ಕೆಲಸಕ್ಕಿದ್ದ ಮನೆಯಲ್ಲೇ 34 ಲಕ್ಷ ಒಡವೆ ಕದ್ದ ಕಳ್ಳಿ

Theft Case: ಕೆಲಸಕ್ಕಿದ್ದ ಮನೆಯಲ್ಲೇ 34 ಲಕ್ಷ ಒಡವೆ ಕದ್ದ ಕಳ್ಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

gold 2

Mumbai Airport ; 12.74 ಕೆಜಿ ಚಿನ್ನಾಭರಣ ಜಪ್ತಿ, ಐವರು ಪ್ರಯಾಣಿಕರ ಬಂಧನ

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

1-qweqwqew

Congress ಪಕ್ಷವನ್ನು ಎರಡನೇ ಬಾರಿ ತೊರೆದ ಲವ್ಲಿ; ಮತ್ತೆ ಬಿಜೆಪಿ ಸೇರ್ಪಡೆ

Why Modi doesn’t talk about ladies now: Priyanka Gandhi

Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.