ರಾಜ್ಯದಲ್ಲಿ 38 ಮತ ಎಣಿಕೆ ಕೇಂದ್ರ ಸ್ಥಾಪನೆ

Team Udayavani, May 14, 2018, 6:55 AM IST

Kumar,-Election-Commission,.jpg

ಬೆಂಗಳೂರು: ಸುಸೂತ್ರ, ಶಾಂತಿಯುತ ಮತ್ತು ದಾಖಲೆ ಮತದಾನದ ಬಳಿಕ ಇದೀಗ ಚುನಾವಣಾ ಆಯೋಗ ಮತ ಎಣಿಕೆಗೆ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಇಡೀ ರಾಜ್ಯದಲ್ಲಿ 38 ಮತ ಎಣಿಕೆ ಕೇಂದ್ರಗಳನ್ನು ಸ್ಥಾಪಿಸಲಾಗಿದೆ
ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ ಕುಮಾರ್‌ ಹೇಳಿದ್ದಾರೆ.

ವಿಕಾಸಸೌಧದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರು ನಗರದಲ್ಲಿ ನಾಲ್ಕು, ತುಮಕೂರು ಜಿಲ್ಲೆಯಲ್ಲಿ ಮೂರು, ಚಿತ್ರದುರ್ಗ, ದಕ್ಷಿಣ ಕನ್ನಡ ಹಾಗೂ ಮೈಸೂರು ಜಿಲ್ಲೆಯಲ್ಲಿ ತಲಾ ಎರಡರಂತೆ 33 ಚುನಾವಣಾ ಜಿಲ್ಲೆಗಳಲ್ಲಿ ಒಟ್ಟು 38 ಮತ ಎಣಿಕೆ ಕೇಂದ್ರ ಸ್ಥಾಪಿಸಲಾಗಿದೆ. ನಿಗದಿಯಂತೆ ಮಂಗಳವಾರ ಎಲ್ಲ ಕೇಂದ್ರಗಳಲ್ಲಿ ಏಕಕಾಲಕ್ಕೆ ಮತ ಎಣಿಕೆ ಕಾರ್ಯ ಆರಂಭವಾಗಲಿದೆ ಎಂದರು.

ಮತಯಂತ್ರಗಳನ್ನು ಸಂಗ್ರಹಿಸಿಟ್ಟಿರುವ ಕೇಂದ್ರಗಳಿಗೆ ಅರೆಸೇನಾ ಪಡೆ, ಕೇಂದ್ರ ಮೀಸಲು ಪಡೆಯ ಶಸOಉಸಜ್ಜಿತ ಸಿಬ್ಬಂದಿ ನಿಯೋಜಿಸಲಾಗಿದೆ. ಮತಯಂತ್ರಗಳಿರುವ ಸ್ಟ್ರಾಂಗ್‌ ರೂಂಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, 24 ಗಂಟೆ ಕಟ್ಟೆಚ್ಚರ ವಹಿಸಲಾಗುತ್ತದೆ. ಮತ ಎಣಿಕೆ ದಿನ ಕೇಂದ್ರಗಳ ಸುತ್ತ ಬಿಗಿ ಬಂದೋಬಸ್ತ್ಏರ್ಪಡಿಸಲಾಗುವುದು ಎಂದು ತಿಳಿಸಿದರು.

ಮಹಾನಗರಗಳಲ್ಲಿ ಕಮೀಷನರ್‌ಗಳು, ವಲಯವಾರು ಐಜಿಪಿಗಳು, ಜಿಲ್ಲಾ ಕೇಂದ್ರಗಳಲ್ಲಿ ಎಸ್‌ಪಿಗಳು ಭದ್ರತೆಯ ನಿಗಾವಹಿಸಿದ್ದಾರೆ. ಚುನಾವಣೆಯ ಭದ್ರತೆಗಾಗಿ ಕೇಂದ್ರದಿಂದ ಬಂದಿರುವ ಅರೆ ಸೇನಾಪಡೆಯ 40 ಕಂಪನಿಗಳು ಸೇರಿ ಕೇಂದ್ರ ಮೀಸಲು ಪಡೆಯ 585 ಕಂಪನಿಗಳನ್ನು ಮತ ಎಣಿಕೆ ಸಂದರ್ಭದಲ್ಲಿ ಭದ್ರತಾ ವ್ಯವಸ್ಥೆಗೆ
ಬಳಸಿಕೊಳ್ಳಲಾಗುತ್ತಿದೆ. ಜತೆಗೆ ರಾಜ್ಯ ಮೀಸಲು ಪಡೆ, ಸಿಎಆರ್‌, ಡಿಎಆರ್‌ 754 ತುಕಡಿಗಳು 278 ಡಿವೈಎಸ್‌ಪಿಗಳು, 947 ಮಂದಿ ಪೊಲೀಸ್‌ ಇನ್ಸ್‌ಪೆಕ್ಟರ್‌ಗಳು, 5,322 ಎಎಸ್‌ಐಗಳು, 45,685 ಮುಖ್ಯಪೇದೆ-ಪೇದೆಗಳು, 26,672 ಗೃಹರಕ್ಷಕ ಸಿಬ್ಬಂದಿ ಭದ್ರತೆಯಲ್ಲಿ ತೊಡಗಲಿದ್ದಾರೆ ಎಂದು ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ ಕಮಲ್‌ಪಂತ್‌ ಇದೇ ವೇಳೆ ತಿಳಿಸಿದ್ದಾರೆ. 

ಐಟಿ ಅಧಿಕಾರಿಗಳಿಗೆ ಜೀವ ಬೆದರಿಕೆ
ಬೆಂಗಳೂರು
: ಚುನಾವಣಾ ಪೂರ್ವದಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿದ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ಜೀವ ಬೆದರಿಕೆ ಬಂದಿದೆ.

ಕಾರ್ಯಾಚರಣೆ ಮುಂದುವರಿಸಬೇಕಾಗಿರುವುದರಿಂದ ನಮ್ಮ ಅಧಿಕಾರಿಗಳಿಗೆ ಸೂಕ್ತ ರಕ್ಷಣೆ ಕೊಡಿ ಎಂದು ಆದಾಯ ತೆರಿಗೆ ಇಲಾಖೆ ಮಹಾನಿರ್ದೇಶಕ ಬಿ.ಆರ್‌.ಬಾಲಕೃಷ್ಣನ್‌ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.

ಮೇ 11ರಂದು ಬಾಲಕೃಷ್ಣನ್‌ ಅವರು ಮುಖ್ಯ ಕಾರ್ಯದರ್ಶಿಗೆ ಈ ಪತ್ರ ಬರೆದಿದ್ದು, ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ರಾಜ್ಯದಲ್ಲಿ ಇನ್ನೂ ತಮ್ಮ ಕಾರ್ಯಾಚರಣೆ ಮುಂದುವರಿಸಬೇಕಿದೆ.

ಹೀಗಾಗಿ ಅವರಿಗೆ ಸೂಕ್ತ ರಕ್ಷಣೆ ಒದಗಿಸಿ ಎಂದು ಮನವಿ ಮಾಡಿದ್ದಾರೆ. ರಾಜ್ಯ ವಿಧಾನಸಭಾ ಚುನಾವಣೆ ದಿನಾಂಕ
ನಿಗದಿಯಾಗುತ್ತಿದ್ದಂತೆ ಐಟಿ ಅಧಿಕಾರಿಗಳು ರಾಜ್ಯಾ ದ್ಯಂತ ವಿಶೇಷ ಕಾರ್ಯಾಚರಣೆ ನಡೆಸಿದರು. ರಾಜಕೀಯ ಮುಖಂಡರು, ಅವರ ಆಪ್ತರು ಹಾಗೂ ತೆರಿಗೆ ವಂಚಕರ ನಿವಾಸ ಮತ್ತು ಕಚೇರಿಗಳ ಮೇಲೆ ಸರಣಿ ದಾಳಿ ನಡೆಸಿ, ಕೋಟ್ಯಂತರ ರೂ. ಹಣ ಹಾಗೂ ಮಹತ್ವದ ದಾಖಲೆಗಳನ್ನು ಸಂಗ್ರಹಿಸಿದ್ದರು. ಈ ದಾಳಿ ವೇಳೆ ಅಘೋಷಿತ 34 ಕೋಟಿ ರೂ. ಮೌಲ್ಯದ ನಗದು ಪತ್ತೆ ಹಚ್ಚಿದ್ದರು.

ಇದಕ್ಕೆ ಆಕ್ರೋಶಗೊಂಡಿರುವ ಕೆಲ ರಾಜಕೀಯ ಮುಖಂಡರು ಹಾಗೂ ಕಿಡಿಗೇಡಿಗಳು ದಾಳಿ ನಡೆಸಿದ ಐಟಿ ಅಧಿಕಾರಿಗಳ ಮೇಲೆ ಹಲ್ಲೆ ಮಾತ್ರವಲ್ಲದೆ, ಕೊಲೆಗೂ ನಿರ್ಧರಿಸಿದ್ದಾರೆಂದು ಗುಪ್ತಚರ ಇಲಾಖೆ ಮಾಹಿತಿ ಬಂದಿದೆ. ಅಲ್ಲದೆ, ಈ ವಿಚಾರ ರಾಜ್ಯ ಪೊಲೀಸರ ಗಮನಕ್ಕೂ ಬಂದಿದ್ದು, ಕೆಲ ದಿನಗಳ ಹಿಂದೆ ಸರಣಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅದೇ ಜಿಲ್ಲೆಗಳಲ್ಲಿ ಇನ್ನೂ ಕೆಲವೆಡೆ ದಾಳಿ ನಡೆಸಬೇಕಿದೆ.

ಹೀಗಾಗಿ ಮುಂದಿನ ದಿನಗಳಲ್ಲಿ ಕೆಲ ರಾಜಕೀಯ ಮುಖಂಡರು ಹಾಗೂ ಅಧಿಕಾರಿಗಳ ಮೇಲೆ ದಾಳಿಗೆ ಐಟಿ ಸಿದಟಛಿತೆ ಮಾಡಿಕೊಂಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಗುಪ್ತಚರ ಇಲಾಖೆ ಹಾಗೂ ಪೊಲೀಸರು ಐಟಿ ತನಿಖಾಧಿಕಾರಿಗಳಿಗೆ ಎಚ್ಚರಿಕೆಯಿಂದ ಇರುವಂತೆ ಸಲಹೆ ನೀಡಿದ್ದಾರೆ. ಹೀಗಾಗಿ ಬೆಂಗಳೂರು ಹಾಗೂ ಇತರೆ ಜಿಲ್ಲೆಗಳಲ್ಲಿರುವ ಐಟಿ ಅಧಿಕಾರಿಗಳಿಗೆ ಸೂಕ್ತ ಭದ್ರತೆ ಒದಗಿಸಬೇಕೆಂದು ಮಹಾನಿರ್ದೇಶಕ ಬಿ.ಆರ್‌.ಬಾಲಕೃಷ್ಣನ್‌ ಮನವಿ ಮಾಡಿಕೊಂಡಿದ್ದಾರೆ.

ಟಾಪ್ ನ್ಯೂಸ್

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.