ಕುಸ್ತಿ ಶಿಬಿರದಿಂದ ಫೊಗಾಟ್‌ ಸೋದರಿಯರು ಔಟ್‌


Team Udayavani, May 18, 2018, 6:20 AM IST

national-wrestling-camp.jpg

ಲಕ್ನೋ: ಇಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಕುಸ್ತಿ ಶಿಬಿರದಿಂದ ಫೊಗಾಟ್‌ ಸಹೋದರಿಯರನ್ನು ಅಶಿಸ್ತಿನ ಕಾರಣ ನೀಡಿ ಹೊರಹಾಕಲಾಗಿದೆ.

ಮೇ 10ಕ್ಕೆ ರಾಷ್ಟ್ರೀಯ ಶಿಬಿರ ಆರಂಭವಾದರೂ ಗೀತಾ, ಬಬಿತಾ, ರೀತು,ಸಂಗೀತಾ ಶಿಬಿರವನ್ನು ಕೂಡಿಕೊಳ್ಳಲಿಲ್ಲ. ಈ ಬಗ್ಗೆ ಯಾವುದೇ ಮಾಹಿತಿಯನ್ನೂ ರಾಷ್ಟ್ರೀಯ ಕುಸ್ತಿ ಒಕ್ಕೂಟಕ್ಕೆ ನೀಡಿಲ್ಲ. ಇದರಿಂದ ಸಿಟ್ಟಾಗಿರುವ ಕುಸ್ತಿ ಒಕ್ಕೂಟದ ಅಧ್ಯಕ್ಷ ಬ್ರಜಭೂಷಣ್‌ ಸಿಂಗ್‌, ಆಟಗಾರ್ತಿಯರನ್ನು ರಾಷ್ಟ್ರೀಯ ಶಿಬಿರದಿಂದ ಹೊರಹಾಕುವ ನಿರ್ಧಾರ ತೆಗೆದುಕೊಂಡಿದ್ದಾರೆ.

ಈ ನಿರ್ಧಾರ ಫೊಗಾಟ್‌ ಸಹೋದರಿಯರಿಗೆ ಮಾರಕವಾಗುವ ಸಾಧ್ಯತೆಯಿದೆ.ಮುಂದಿನ ಏಷ್ಯನ್‌ ಗೇಮ್ಸ್‌ ಅರ್ಹತಾ
ಕೂಟಗಳಿಗೆ ಆಯ್ಕೆಯಾಗುವುದೂ ಕಷ್ಟಕರವಾಗಲಿದೆ. ಆದರೂ ಆಟಗಾರ್ತಿಯರಿಗೆ ಒಂದು ಜೀವದಾನ ನೀಡಿದ್ದು,
ಫೊಗಾಟ್‌ ಸಹೋದರಿಯರು ಸರಿಯಾದ ವಿವರಣೆ ನೀಡಿದರೆ ಕ್ಷಮಿಸುವುದಾಗಿ ಬ್ರಜಭೂಷಣ್‌ ತಿಳಿಸಿದ್ದಾರೆ.

ಈ ಬಾರಿ ಕಾಮನ್‌ವೆಲ್ತ್‌ ಕೂಟ ಮತ್ತು 2010ರ ದೆಹಲಿಕಾಮನ್‌ವೆಲ್ತ್‌ ಕೂಟದಲ್ಲಿ ಗೀತಾ ಮತ್ತು ಬಬಿತಾ ಚಿನ್ನದ ಪದಕ ಗೆದ್ದಿದ್ದರು. ಇವರ ಕುರಿತು ದಂಗಲ್‌ ಸಿನಿಮಾ ಬಂದ ನಂತರ ಇಡೀ ದೇಶದಲ್ಲಿ ಜನಪ್ರಿಯರಾಗಿದ್ದನ್ನು ಇಲ್ಲಿ
ನೆನಪಿಸಿಕೊಳ್ಳಬಹುದು.

ಈ ಬಗ್ಗೆ ಪ್ರತಿಕ್ರಿಯಿಸಿರುವ ಬಬಿತಾ ಫೊಗಾಟ್‌, ನನಗೆ ಎರಡೂ ಮಂಡಿನೋವಿನಿಂದ ಬಳಲುತ್ತಿದ್ದೇನೆ. ಆದ್ದರಿಂದ
ಶಿಬಿರವನ್ನು ಸೇರಿಕೊಂಡಿಲ್ಲ. ಅವರಿಗೆ ಮಾಹಿತಿ ನೀಡದಿರುವುದು ನನ್ನ ತಪ್ಪು. ತಕ್ಷಣವೇ ಈ ಬಗ್ಗೆ ಮಾಹಿತಿ ರವಾನಿಸಲಿದ್ದೇನೆ. ಇನ್ನು ರಿಂಕು ಮತ್ತು ಸಂಗೀತಾ ರಷ್ಯಾದಲ್ಲೇ ಕುಸ್ತಿ ತರಬೇತಿ ಪಡೆಯಲು ವೀಸಾಕ್ಕೆ ಯತ್ನಿಸುತ್ತಿದ್ದಾರೆ. ಅಕ್ಕ ಗೀತಾ ಬೆಂಗಳೂರಿನಲ್ಲಿ ಖಾಸಗಿಯಾಗಿ ತರಬೇತಿ ಪಡೆಯುತ್ತಿದ್ದಾರೆ. ಅವರು ಯಾಕೆ ಇನ್ನೂ ಶಿಬಿರ ಸೇರಿಕೊಂಡಿಲ್ಲ ಎನ್ನುವುದು ತನಗೆ ಗೊತ್ತಿಲ್ಲ ಎಂದು ಬಬಿತಾ ವಿವರಿಸಿದ್ದಾರೆ.

ಕುಸ್ತಿ ಶಿಬಿರದಿಂದ ಹೊರಬಿದ್ದಿರುವ ಇನ್ನೊಬ್ಬ ಕುಸ್ತಿಪಟು ರಿಯೋ ಕಂಚಿನ ಪದಕ ವಿಜೇತೆ ಸಾಕ್ಷಿ ಮಲಿಕ್‌ ಪತಿ ಸತ್ಯವ್ರತ ಕಡಿಯಾನ್‌. ಅವರು ಕೂಡ ಸೂಕ್ತ ಸಮಯಕ್ಕೆ ಶಿಬಿರವನ್ನು ಕೂಡಿಕೊಂಡಿಲ್ಲ.

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.