ಕಡಲು ನದಿಯ ನಡುವಿನ ಹಾದಿಯಲ್ಲಿ  ಇದೀಗ ಜನಜಂಗುಳಿ

Team Udayavani, May 21, 2018, 6:35 PM IST

2105mle1b.jpg

ಮಲ್ಪೆ: ಮಲ್ಪೆ ಮೀನುಗಾರಿಕಾಬಂದರಿನ ಪಶ್ವಿ‌ಮ ದಿಕ್ಕಿನ (ಸೈಂಟ್‌ಮೇರಿ ದ್ವೀಪಯಾನದ ಸ್ಟಾರ್ಟಿಂಗ್‌ ಪಾಯಿಂಟ್‌) ಬ್ರೇಕ್‌ವಾಟರ್‌ ಮೇಲೆ ನಿರ್ಮಾಣಗೊಂಡ ಕರ್ನಾಟಕದ ಮೊಟ್ಟ ಮೊದಲ ಎಂಬ ಹೆಗ್ಗಳಿಕೆಗೆ ಪಾತ್ರವಾದ ಸೀ ವಾಕ್‌ವೇ ಸ್ಥಳೀಯರೂ ಸೇರಿದಂತೆ ರಾಜ್ಯ, ದೇಶ ಹಾಗೂ ವಿದೇಶದ ಪ್ರವಾಸಿಗರ ನೆಚ್ಚಿನ ತಾಣವಾಗುತ್ತಿದೆ.

ರಜಾದಿನ ಫುಲ್‌ ರಶ್‌
ಸೀ-ವಾಕ್‌ ಆರಂಭಗೊಂಡ ದಿನದಿಂದಲೂ ನೋಡಲು ಜನಸಾಗರವೇ ಇಲ್ಲಿಗೆ ಹರಿದು ಬರುತ್ತಿತ್ತು. ಇದೀಗ ಎಪ್ರಿಲ್‌ ಮೇ ತಿಂಗಳ ರಜಾ ದಿನದಲ್ಲಿ ಮತ್ತಷ್ಟು ಹೆಚ್ಚಾಗಿದೆ. ರಜಾ ದಿನಗಳಲ್ಲಿ ಸಂಜೆ ವೇಳೆ ನೂಕು ನುಗ್ಗಲು ಶುರುವಾಗಿದೆ. ಇದೀಗ ಸೈಂಟ್‌ಮೇರೀಸ್‌ಗೆ ಬೋಟಿನ ಯಾನ ನಿಷೇಧವಾದ ಬಳಿಕ ಸೀವಾಕ್‌ ನೋಡಲು ಬರುವ ಪ್ರವಾಸಿಗರ ಸಂಖ್ಯೆ ಇನ್ನಷ್ಟು ಹೆಚ್ಚಳವಾಗಿದೆ. ಸೈಂಟ್‌ಮೇರೀಸ್‌ಗೆಂದು ಬಂದವರು ಈಗ ಸೀವಾಕ್‌ ನೋಡಿ ಹೋಗುತ್ತಾರೆ.

ಒಂದು ಸ್ಪಷ್ಟ ನಿದರ್ಶನ
ಜನ ಸಾಮಾನ್ಯರು ನಡೆದಾಡಲು ಭಯಪಡುತ್ತಿದ್ದ ತಾಣವನ್ನು ವ್ಯವಸ್ಥಿತವಾಗಿ ಅಭಿವೃದ್ದಿ ಪಡಿಸಿದ್ದರಿಂದ ಇಲ್ಲಿಗೆ ನಿತ್ಯ ಸಾವಿರಾರು ಪ್ರವಾಸಿಗರು ಭೇಟಿ ನೀಡುತ್ತಿದ್ದು ವಾಯು ವಿಹಾರದೊಂದಿಗೆ ಪ್ರಾಕೃತಿಕ ಸೌಂದರ್ಯವನ್ನು ಆಸ್ವಾದಿಸುವಂತಾಗಿದೆ. ಅಪಾಯಕಾರಿ ಪ್ರದೇಶವನ್ನು ಹೇಗೆ ಅಭಿವೃದ್ದಿ ಪಡಿಸಿ ಪ್ರವಾಸಿಕೇಂದ್ರವನ್ನಾಗಿ ರೂಪಿಸಬಹುದು ಎಂಬುವುದಕ್ಕೆ ಸೀವಾಕ್‌ ಒಂದು ಸ್ಪಷ್ಟ ನಿದರ್ಶನವಾಗಿದೆ ಎಂದು ಜನರಾಡಿಕೊಳ್ಳುತ್ತಿದ್ದಾರೆ.

ಸುಮಾರು 480 ಮೀ. ಉದ್ದ, 8.5 ಅಡಿ ಅಗಲದಲ್ಲಿ ಸಮುದ್ರಕ್ಕೆ ವಿಸ್ತರಿಸಿರುವ ಈ ವಾಕ್‌ವೇಯನ್ನು  ಬ್ರೇಕ್‌ವಾಟರ್‌ ಮೇಲೆ ಪ್ರವಾಸೋದ್ಯಮ ಇಲಾಖೆ ನಿರ್ಮಿತಿ ಕೇಂದ್ರ ನೇತೃತ್ವದಲ್ಲಿ  53.50 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ. ರಾತ್ರಿ ವೇಳೆಯಲ್ಲಿ ಇಲ್ಲಿನ ನಡೆದಾಡಲು ಹಾದಿ ಉದ್ದಕ್ಕೂ ಅಲಂಕಾರಿಕಾ ದೀಪಗಳನ್ನು ಅಳವಡಿಸಲಾಗಿದೆ.

ಆಕರ್ಷಕ ಶಿಲ್ಪ ಕಾಲಾಕೃತಿ
ಸುಮಾರು 380 ಮೀಟರ್‌ ಹಾದಿಯ ಮಧ್ಯೆ ಮೀನುಗಾರ ಮೀನುಗಾರಿಕೆಗೆ ತೆರಳಲೆಂದು ಕಡಲಿನತ್ತ ಮುಖ ಮಾಡಿದರೆ, ಮಡದಿ ಬುಟ್ಟಿಯಲ್ಲಿ ಮೀನುಹೋತ್ತು ಮಾರಾಟ ಮಾಡಲು ನಗರದತ್ತ ಮುಖ ಮಾಡಿದ್ದಾಳೆ ಅವಳ ಹಿಂದೆ ಪಾಠಿಯ ಚೀಲವನ್ನು ಹೆಗಲಿಗೇರಿಕೊಂಡು ಅಮ್ಮನ ಸೆರಗು ಹಿಡಿದು ಶಾಲೆಯತ್ತ ಹೊರಟ ಮಗ ಗಚ್ಚುಗಾರೆಯಿಂದ ತಯಾರಿಸಿದ ಆಕರ್ಷಣೀಯ ಶಿಲ್ಪ ಕಲಾಕೃತಿಯನ್ನು ಇಲ್ಲಿನ ಕಾಣಬಹುದಾಗಿದ್ದು, ಸೆಲ್ಫಿ ತೆಗಿಸಿಕೊಳ್ಳುವ ದೃಶ್ಯಗಳು ಇಲ್ಲಿ ಮಾಮೂಲಾಗಿದೆ.

ಮೂರು ದ್ವೀಪಗಳ ವೀಕ್ಷಣೆ
ವಾಕ್‌ ವೇ ನಲ್ಲಿ ಸಂಚರಿಸುವ ಪ್ರವಾಸಿಗರಿಗೆ ಸಮುದ್ರದ ವಿಹಂಗಮ ನೋಟ ಕಾಣಸಿಗುತ್ತದೆ. ಇಲ್ಲಿನ ತುತ್ತ ತುದಿಯಲ್ಲಿ ನಿಂತರೆ ಸೈಂಟ್‌ಮೇರಿ, ದರಿಯಗಡ್‌ ಮತ್ತು ಲೈಟ್‌ಹೌಸ್‌ ಈ ಮೂರು ದ್ವೀಪವನ್ನು ಏಕಕಾಲದಲ್ಲಿ ವೀಕ್ಷಿಸಬಹುದಾಗಿದೆ.  ಮೀನುಗಾರಿಕಾ ದೋಣಿಗಳ ಸಂಚಾರ, ಸಮುದ್ರದ ಅಲೆಗಳ ಅಪ್ಪಳಿಸುವಿಕೆ, ಸಂಜೆಯ ಸೂರ್ಯಾಸ್ತ, ಬಾನಿನಲ್ಲಿ ಮೂಡುವ ಬಣ್ಣದ ಚಿತ್ತಾರಗಳನ್ನು ಸವಿಯಬಹುದು. ಮಲ್ಪೆ ಕಡಲತೀರ ಭಾರತದಲ್ಲೇ ಹೆಚ್ಚು ಸುರಕ್ಷಿತ ಎನ್ನಲಾಗಿದ್ದು, ಇಲ್ಲಿನ ಸೌಂದರ್ಯವನ್ನು ಸವಿಯಲು ದೇಶದ ಉದ್ದಗಲದ ಜನ ಇಲ್ಲಿಗೆ ಬರುತ್ತಿದ್ದಾರೆ.

– ನಟರಾಜ ಮಲ್ಪೆ
ಚಿತ್ರ: ಪ್ರೇಮ್‌ ಕಲ್ಮಾಡಿ

ಟಾಪ್ ನ್ಯೂಸ್

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.