ಬೈಕ್ಗೆ ಪಿಕಪ್ ಢಿಕ್ಕಿ : ಮಹಿಳೆ ಸಾವು, ಪತಿ ಗಂಭೀರ
Team Udayavani, May 22, 2018, 8:44 AM IST
ಕುಂದಾಪುರ: ಆಲೂರು ಪೇಟೆಯಲ್ಲಿ ಮೇ 20ರಂದು ರಸ್ತೆ ಬದಿ ನಿಲ್ಲಿಸಿದ್ದ ಬೈಕ್ಗೆ ಪಿಕಪ್ ಢಿಕ್ಕಿ ಹೊಡೆದು ಮಹಿಳೆ ಸಾವನ್ನಪ್ಪಿದ್ದಾರೆ.
ಉಡುಪಿ ಅಂಬಾಗಿಲಿನ ಕಮಲಾಕ್ಷ ಶೇಟ್ ಅವರ ಪತ್ನಿ ರೇಶ್ಮಾ ಶೇಟ್ (42) ಮೃತರು.
ಕಮಲಾಕ್ಷ ಶೇಟ್ ಬೈಕ್ನಲ್ಲಿ ಪತ್ನಿ ರೇಶ್ಮಾ ಶೇಟ್ ಹಾಗೂ ಮಗನನ್ನು ಕುಳ್ಳಿರಿಸಿಕೊಂಡು ಚಿತ್ತೂರು ಕಡೆಯಿಂದ ಮುಳ್ಳಕಟ್ಟೆ ಕಡೆಗೆ ಹೋಗಲು ಆಲೂರು ಪೇಟೆಯಲ್ಲಿ ಸೂಯೇìದಯ ಜನರಲ್ ಸ್ಟೋರ್ ಬಳಿ ರಸ್ತೆಯ ಬದಿಯಲ್ಲಿ ನಿಲ್ಲಿಸಿದ್ದಾಗ ಪಿಕಪ್ ವಾಹನ ಕಮಲಾಕ್ಷ ಅವರ ಸುಜುಕಿ ಬೈಕ್ಗೆ ಹಿಂದಿನಿಂದ ಢಿಕ್ಕಿ ಹೊಡೆದಿದೆ. ಪರಿಣಾಮ ದಂಪತಿ ಗಾಯಗೊಂಡಿದ್ದು, ಕಮಲಾಕ್ಷ (46) ಅವರನ್ನು ಮಣಿಪಾಲದ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ರೇಶ್ಮಾ ಶೇಟ್ ಅವರನ್ನು ಕುಂದಾಪುರ ಸರಕಾರಿ ಆಸ್ಪತ್ರೆಗೆ ಕರೆತರುವಷ್ಟರಲ್ಲೇ ಅವರು ಮೃತಪಟ್ಟಿದ್ದರು.
ಪಿಕಪ್ ಚಾಲಕ ಸತ್ಯಪ್ರಸಾದ್ ವಿರುದ್ಧ ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್ ಹೊಂದಿರುವ ಕ್ಯಾನ್ಸರ್ ಚಿಕಿತ್ಸೆ ಕ್ರಮ
Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್
Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್ ಯಂತ್ರ ಕೊಡುಗೆ
ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್ ಅಡಿಕೆ ತೋಟಕ್ಕೆ ಹಾನಿ
MUST WATCH
ಹೊಸ ಸೇರ್ಪಡೆ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ