ಬದಿಯಡ್ಕಕ್ಕೂ ಹರಡಿದ ಡೆಂಗ್ಯೂ ಜ್ವರ

Team Udayavani, May 22, 2018, 10:45 AM IST

dengue.jpg

ಬದಿಯಡ್ಕ: ಬದಿಯಡ್ಕ ಪಂಚಾಯತ್‌ ವ್ಯಾಪ್ತಿಯಲ್ಲಿ ಡೆಂಗ್ಯೂ ವ್ಯಾಪಕ ಗೊಂಡಿದ್ದು, ಪೆರಡಾಲ ಬಳಿಯ ಪಟ್ಟಾಜೆಯಲ್ಲಿ ಇಬ್ಬರಿಗೆ ಡೆಂಗ್ಯೂ ಜ್ವರ ಖಚಿತಪಡಿಸಲಾಗಿದೆ. ನಾಲ್ಕು ಮಂದಿ ಜ್ವರದಿಂದ ಬಳಲುತ್ತಿದ್ದು, ಅವರಿಗೂ ಡೆಂಗ್ಯೂ ಬಾಧಿಸಿದೆ ಎಂದು ಶಂಕಿಸಲಾಗಿದೆ.

ಪಟ್ಟಾಜೆಯ ಮಧು (48) ಮತ್ತು ಬಾಲಕೃಷ್ಣ (51) ಅವರಿಗೆ ಡೆಂಗ್ಯೂ ಜ್ವರ ಖಚಿತ ಪಡಿಸ ಲಾಗಿದ್ದು, ಮಂಗಳೂರಿನ ಆಸ್ಪತ್ರೆಗೆ ದಾಖ ಲಾಗಿದ್ದಾರೆ. ಈ ಪೈಕಿ ಮಧು ಮರಳಿದ್ದಾರೆ, ಬಾಲಕೃಷ್ಣ ಆಸ್ಪತ್ರೆಯಲ್ಲಿದ್ದಾರೆ. ಇದೇ ಪರಿಸರದ ಮಹಾಲಿಂಗ (48), ನಾರಾಯಣ ಮಣಿಯಾಣಿ (48), ಪ್ರದೀಪ (18), ಚಂದ್ರಾವತಿ (33) ಅವರಿಗೆ ಜ್ವರ ಬಾಧಿಸಿದೆ. ಇವರು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ವಿಷಯ ತಿಳಿದು ಆರೋಗ್ಯ ಅಧಿಕಾರಿಗಳು ಮೇ 20ರಂದು ರಾತ್ರಿ ಪಟ್ಟಾಜೆಗೆ ತಲುಪಿದ್ದು, ಸೊಳ್ಳೆಗಳ ನಾಶಕ್ಕೆ ಫಾಗಿಂಗ್‌ ನಡೆಸಿದ್ದಾರೆ.

ಕಡಬದಲ್ಲಿ ಶಂಕಿತ ಡೆಂಗ್ಯೂ ಆತಂಕ
ಕಡಬ: ಕಡಬ ವ್ಯಾಪ್ತಿಯ ಕೋಡಿಂಬಾಳದ ಮಜ್ಜಾರು, ಮಡ್ಯಡ್ಕ ಪ್ರದೇಶಗಳಲ್ಲಿ ಒಂದು ತಿಂಗಳಿನಿಂದ 45ರಿಂದ 50 ಜನರು ಜ್ವರ ಪೀಡಿತರಾಗಿ ಆಸ್ಪತ್ರೆ ಸೇರಿದ್ದು, ಡೆಂಗ್ಯೂ ಜ್ವರದ ಶಂಕೆ ವ್ಯಕ್ತವಾಗಿದೆ.

ಎಲ್ಲರೂ ಚಿಕಿತ್ಸೆಗೆ ಸ್ಪಂದಿಸಿ ಗುಣಮುಖರಾಗಿದ್ದು, ಎಂಟು ರೋಗಿಗಳ ರಕ್ತದ ಮಾದರಿಯನ್ನು ಜಿಲ್ಲಾ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಆದರೆ ಅದರಲ್ಲಿ ಡೆಂಗ್ಯೂ ದೃಢಪಟ್ಟಿಲ್ಲ. ಜನರು ಆತಂಕಪಡಬೇಕಿಲ್ಲ ಎಂದು ಕಡಬ ಸರಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಡಾ| ಸುಚಿತ್ರಾ ರಾವ್‌ ತಿಳಿಸಿದ್ದಾರೆ. ಜ್ವರಪೀಡಿತ ಪ್ರದೇಶಗಳಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಸಂಘ-ಸಂಸ್ಥೆಗಳ ನೆರವು ಪಡೆಯಲಾಗುತ್ತಿದೆ. ಡೆಂಗ್ಯೂ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಸಂಪೂರ್ಣ ಸನ್ನದ್ಧವಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ| ರಾಮಕೃಷ್ಣ ರಾವ್‌ ಹೇಳಿದ್ದಾರೆ.

ದ.ಕ. ಜಿಲ್ಲೆಯಲ್ಲಿ 40 ಪ್ರಕರಣಗಳು ದೃಢ
ದ.ಕ. ಜಿಲ್ಲೆಯಲ್ಲಿ ಜನವರಿ ತಿಂಗಳಿ ನಿಂದ ಇದುವರೆಗೆ ಮಂಗಳೂರು ತಾಲೂಕು- 18, ಬಂಟ್ವಾಳ ತಾಲೂಕು-5, ಪುತ್ತೂರು ತಾಲೂಕು- 5, ಬೆಳ್ತಂಗಡಿ ತಾಲೂಕು-6 ಮತ್ತು ಸುಳ್ಯ ತಾಲೂಕು-6 ಹೀಗೆ ಒಟ್ಟು 40 ಡೆಂಗ್ಯೂ ಪ್ರಕರಣಗಳು ಜಿಲ್ಲಾ ಪ್ರಯೋ ಗಾ ಲಯದಲ್ಲಿ ದೃಢಪಟ್ಟಿವೆ ಎಂದು ಆರೋಗ್ಯ ಇಲಾಖಾ ಮೂಲಗಳು ಮಾಹಿತಿ ನೀಡಿವೆ.

ಟಾಪ್ ನ್ಯೂಸ್

Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ

Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ

mangalore international airport

Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ

Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ

Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

nosthush-kenjige

T20 World Cup; ಅಮೆರಿಕ ತಂಡದಲ್ಲಿ ಮೂಡಿಗೆರೆಯ ನಾಸ್ತುಷ್‌ ಕೆಂಜಿಗೆಗೆ ಸ್ಥಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mangalore international airport

Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ

Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ

Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ

Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ

mangalore international airport

Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ

Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ

Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ

Desi Swara: ವಸಂತನಾಗಮನ- ಇಂಗ್ಲೆಂಡಿನಲ್ಲಿ ಹರುಷದಿ ಸಂಭ್ರಮಿಸಿದ ಕನ್ನಡ ಜನ

Desi Swara: ವಸಂತನಾಗಮನ- ಇಂಗ್ಲೆಂಡಿನಲ್ಲಿ ಹರುಷದಿ ಸಂಭ್ರಮಿಸಿದ ಕನ್ನಡ ಜನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.