ಅಧಿಕಾರಕ್ಕಾಗಿ ರಾಜಿಯ ಮಾತೇ ಇಲ್ಲ 

Team Udayavani, May 25, 2018, 6:25 AM IST

180524kpn96.jpg

ತುಮಕೂರು: “12 ವರ್ಷಗಳ ಹಿಂದೆ ಮುಖ್ಯಮಂತ್ರಿಯಾಗಿ ನಡೆಸಿದ್ದ 20 ತಿಂಗಳ ಆಡಳಿತದಿಂದ ರಾಜ್ಯದಲ್ಲಿ ಇನ್ನೂ ನಾನು ಹಾಗೂ ನನ್ನ ಪಕ್ಷ ಉಳಿದಿದೆ. ರಾಜ್ಯದ ಅಭಿವೃದ್ಧಿಗಾಗಿ ಹಾಗೂ ಕಾಂಗ್ರೆಸ್‌ ಮುಖಂಡರ ಒತ್ತಾಯದಿಂದ ಮೈತ್ರಿಗೆ ಒಪ್ಪಿಕೊಂಡಿದ್ದೇನೆಯೇ ಹೊರತು ಅಧಿಕಾರದ ಆಸೆಯಿಂದ ಅಲ್ಲ. ಅಧಿಕಾರಕ್ಕಾಗಿ ಯಾವುದೇ ರಾಜಿಯ ಮಾತೇ ಇಲ್ಲ’ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ಸಿದ್ಧಗಂಗಾ ಮಠಕ್ಕೆ ಗುರುವಾರ ಭೇಟಿ ನೀಡಿದ ಸಿಎಂ, ಡಾ.ಶ್ರೀ ಶಿವಕುಮಾರ ಸ್ವಾಮೀಜಿಯವರ ಆಶೀರ್ವಾದ ಪಡೆದರು. ಬಳಿಕ ಸುದ್ದಿಗಾರರ ಜತೆ ಮಾತನಾಡಿ, “ಮುಖ್ಯಮಂತ್ರಿ ಪದವಿಯ ಸಂಪೂರ್ಣ ಜವಾಬ್ದಾರಿಯನ್ನು ನಿಭಾಯಿಸುವುದು ಸುಲಭದ ಕೆಲಸವಲ್ಲ. ಹೆಜ್ಜೆ, ಹೆಜ್ಜೆಗೆ ತೊಂದರೆ ಎದುರಾಗಲಿದೆ ಎನ್ನುವುದೂ ಗೊತ್ತಿದೆ. ಆದರೂ, ಹೊಗಳಿಕೆ-ತೆಗಳಿಕೆಯನ್ನು ಸಮಚಿತ್ತದಲ್ಲಿ ತೆಗೆದುಕೊಂಡು ರಾಜ್ಯದ ಅಭಿವೃದ್ಧಿಗೆ ಪೂರಕವಾದ ಆಡಳಿತ ನೀಡುತ್ತೇನೆ. ಐದು ವರ್ಷಗಳ ಕಾಲ ಸುಭದ್ರ ಸರ್ಕಾರದ ಆಡಳಿತ ನೀಡಬೇಕು ಎಂದುಕೊಂಡಿದ್ದೇನೆ. ಆದರೆ, ಕಾಂಗ್ರೆಸ್‌ ನಾಯಕರ ನಿಲುವು ಹಾಗೂ ನಡೆಗಳ ಮೇಲೆ ಸಮ್ಮಿಶ್ರ ಸರಕಾರದ ಭವಿಷ್ಯ ನಿರ್ಧಾರವಾಗಲಿದೆ’ ಎಂದು ಹೇಳಿದರು.

ರಾಜಿ ಸರ್ಕಾರವಲ್ಲ:
ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದಿರುವ ಸಮ್ಮಿಶ್ರ ಸರಕಾರ ರಾಜಿ ಸರಕಾರವಾಗುವುದಿಲ್ಲ. ಶುಕ್ರವಾರದ ವಿಶ್ವಾಸ ಮತಯಾಚನೆ ವೇಳೆಯಲ್ಲಿ ಕಾಂಗ್ರೆಸ್‌, ಬಿಜೆಪಿ ಹಾಗೂ ರಾಜ್ಯದ ಎಲ್ಲ ಪ್ರಜೆಗಳಿಗೆ ಸ್ಪಷ್ಟವಾಗಿ ಅರ್ಥವಾಗುವಂತೆ ಸರಕಾರದ ಕಾರ್ಯದ ಬಗ್ಗೆ ಉತ್ತರಿಸುತ್ತೇನೆ. ಕಳೆದ ಚುನಾವಣೆ ವೇಳೆ ನಾನು ಯಾವುದೇ ಭ್ರಷ್ಟಾಚಾರದ ಬಗ್ಗೆ ಮಾತನಾಡಿಲ್ಲ. ನಾನು ಮಾತನಾಡಿರುವುದು ಕೇವಲ ರಾಜ್ಯದ ಅಭಿವೃದ್ಧಿಯ ಬಗ್ಗೆ. ಎತ್ತಿನಹೊಳೆ ಸೇರಿ ಇನ್ನುಳಿದ ಯೋಜನೆಗಳಲ್ಲಿ ಅಕ್ರಮಗಳಾಗಿದ್ದರೆ ನಿಲ್ಲಿಸುತ್ತೇನೆ ಎಂದು ಹೇಳಿದ್ದೆ. ಅದಕ್ಕೆ ಈಗಲೂ ಬದ್ಧನಾಗಿದ್ದೇನೆ ಎಂದರು.

ಚುನಾವಣಾಪೂರ್ವ ಹೇಳಿಕೆಗೆ ಮಹತ್ವ ಬೇಡ:
ಅವರಪ್ಪನಾಣೆ ಕುಮಾರಸ್ವಾಮಿ ಮುಖ್ಯಮಂತ್ರಿಯಾಗುವುದಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಚುನಾವಣಾ ಪೂರ್ವದಲ್ಲಿ ಆಡಿದ ಮಾತುಗಳಿಗೆ ಮಹತ್ವ ನೀಡುವ ಅಗತ್ಯವಿಲ್ಲ. ಚುನಾವಣೆ ವೇಳೆಯಲ್ಲಿ ಈ ರೀತಿಯ ಪರ ವಿರೋಧಗಳು ಬರುತ್ತವೆ. ನಾನು ಅನಿವಾರ್ಯ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿಯಾಗಿದ್ದೇನೆ. ಅಟ್ಟಹಾಸದಿಂದ ಮೆರೆಯಲು ಮುಖ್ಯಮಂತ್ರಿಯಾಗಿಲ್ಲ. ನನ್ನ ಕಾಲಾವಧಿಯಲ್ಲಿ ಜನರಿಗೆ ಉತ್ತಮ ಸೇವೆ ಮಾಡಲು ಮುಖ್ಯಮಂತ್ರಿಯಾಗಿದ್ದೇನೆ ಎಂದರು.

ಶ್ರೀಗಳ ಜೊತೆ ಚರ್ಚೆ:
ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ಕುಮಾರಸ್ವಾಮಿ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದರು. ಮಧ್ಯಾಹ್ನ 1.05ಕ್ಕೆ ವಿಧಾನ ಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ, ಶಾಸಕ ಡಿ.ಸಿ.ಗೌರಿಶಂಕರ್‌ ಮತ್ತು ಮಾಜಿ ಶಾಸಕರೊಂದಿಗೆ ಆಗಮಿಸಿದ ಕುಮಾರಸ್ವಾಮಿ, ಶ್ರೀಗಳಿಗೆ ಶಾಲು, ಹಾರ ಹಾಕಿ, ಫ‌ಲ ನೀಡಿ ಗೌರವಿಸಿ, ಶ್ರೀಗಳ ಪಾದಕ್ಕೆ ನಮಸ್ಕರಿಸಿದರು. ಶ್ರೀಗಳು ಮಠದಿಂದ ಸಿಎಂಗೆ ಶಾಲು, ಹಾರ ಹಾಕಿ, ತಲೆಯ ಮೇಲೆ ಮಂತ್ರಾಕ್ಷತೆ ಹಾಕಿ ಆಶೀರ್ವಾದ ಮಾಡಿದರು.

ಶ್ರೀಗಳ ಆರೋಗ್ಯ ವಿಚಾರಿಸಿದ ಸಿಎಂ, ಸ್ವಾಮೀಜಿ ಜತೆ ಕೆಲಹೊತ್ತು ಮಾತುಕತೆ ನಡೆಸಿದರು. ಈ ವೇಳೆ, ಸಿದ್ಧಗಂಗಾ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿ ಸೇರಿದಂತೆ ವಿವಿಧ ಮಠಗಳ ಮಠಾಧೀಶರು ಹಾಜರಿದ್ದರು. ಬಳಿಕ, ಸಿದ್ದಲಿಂಗ ಸ್ವಾಮೀಜಿ ಕಚೇರಿಗೆ ತೆರಳಿ ಅವರಿಂದಲೂ ಆಶೀರ್ವಾದ ಪಡೆದು, ಕೆಲಕಾಲ ಮಾತುಕತೆ ನಡೆಸಿದರು.

ಟಾಪ್ ನ್ಯೂಸ್

ದೇವೇಗೌಡರಿಗೆ ನೋವಾಗಿದ್ದರೆ ಏನೂ ಮಾಡಲಾಗದು: ಚೆಲುವರಾಯಸ್ವಾಮಿ

ದೇವೇಗೌಡರಿಗೆ ನೋವಾಗಿದ್ದರೆ ಏನೂ ಮಾಡಲಾಗದು: ಚೆಲುವರಾಯಸ್ವಾಮಿ

NEET Exam; ರಾಜ್ಯದಲ್ಲಿ ಸುಗಮವಾಗಿ ನಡೆದ ನೀಟ್‌ ಪರೀಕ್ಷೆ

NEET Exam; ರಾಜ್ಯದಲ್ಲಿ ಸುಗಮವಾಗಿ ನಡೆದ ನೀಟ್‌ ಪರೀಕ್ಷೆ

1-wqeqwewq-ew

IPL ; ಲಕ್ನೋ ವಿರುದ್ಧ ಕೆಕೆಆರ್ ಗೆ 98 ರನ್ ಜಯ; ಅಂಕಪಟ್ಟಿಯಲ್ಲಿ ಅಗ್ರ ಸ್ಥಾನ

Ullal ತೊಕ್ಕೊಟ್ಟು; ಕಾರು ಅಪಘಾತ: ವಿದ್ಯಾರ್ಥಿಗಳು ಪಾರು

Ullal ತೊಕ್ಕೊಟ್ಟು; ಕಾರು ಅಪಘಾತ: ವಿದ್ಯಾರ್ಥಿಗಳು ಪಾರು

accident

Davanagere; ಟೈರ್ ಸಿಡಿದು ಸೇತುವೆ ಮೇಲಿಂದ ಉರುಳಿದ ಕಾರು:ಇಬ್ಬರು ಮೃತ್ಯು

Ullal Beach ಸಮುದ್ರ ಪಾಲಾಗುತ್ತಿದ್ದ ವಿದ್ಯಾರ್ಥಿಯ ರಕ್ಷಣೆ

Ullal Beach ಸಮುದ್ರ ಪಾಲಾಗುತ್ತಿದ್ದ ವಿದ್ಯಾರ್ಥಿಯ ರಕ್ಷಣೆ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

NEET Exam; ರಾಜ್ಯದಲ್ಲಿ ಸುಗಮವಾಗಿ ನಡೆದ ನೀಟ್‌ ಪರೀಕ್ಷೆ

NEET Exam; ರಾಜ್ಯದಲ್ಲಿ ಸುಗಮವಾಗಿ ನಡೆದ ನೀಟ್‌ ಪರೀಕ್ಷೆ

Revanna 2

H.D. Revanna;ಇನ್ನಷ್ಟು ವಿಚಾರಣೆಗೆ 4 ದಿನ ಎಸ್ ಐಟಿ ಕಸ್ಟಡಿಗೆ

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

1-aaa

Pen drive case; ಇಂದೇ ಪ್ರಜ್ವಲ್‌ ರೇವಣ್ಣ ಎಸ್‌ಐಟಿ ಮುಂದೆ ಶರಣು?

ಸಿ.ಟಿ. ರವಿ

Pen drive Case; ಹಾಲಿ ಮಹಿಳಾ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು: ಸಿ.ಟಿ. ರವಿ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

ದೇವೇಗೌಡರಿಗೆ ನೋವಾಗಿದ್ದರೆ ಏನೂ ಮಾಡಲಾಗದು: ಚೆಲುವರಾಯಸ್ವಾಮಿ

ದೇವೇಗೌಡರಿಗೆ ನೋವಾಗಿದ್ದರೆ ಏನೂ ಮಾಡಲಾಗದು: ಚೆಲುವರಾಯಸ್ವಾಮಿ

NEET Exam; ರಾಜ್ಯದಲ್ಲಿ ಸುಗಮವಾಗಿ ನಡೆದ ನೀಟ್‌ ಪರೀಕ್ಷೆ

NEET Exam; ರಾಜ್ಯದಲ್ಲಿ ಸುಗಮವಾಗಿ ನಡೆದ ನೀಟ್‌ ಪರೀಕ್ಷೆ

1-wqeqwewq-ew

IPL ; ಲಕ್ನೋ ವಿರುದ್ಧ ಕೆಕೆಆರ್ ಗೆ 98 ರನ್ ಜಯ; ಅಂಕಪಟ್ಟಿಯಲ್ಲಿ ಅಗ್ರ ಸ್ಥಾನ

Ullal ತೊಕ್ಕೊಟ್ಟು; ಕಾರು ಅಪಘಾತ: ವಿದ್ಯಾರ್ಥಿಗಳು ಪಾರು

Ullal ತೊಕ್ಕೊಟ್ಟು; ಕಾರು ಅಪಘಾತ: ವಿದ್ಯಾರ್ಥಿಗಳು ಪಾರು

accident

Davanagere; ಟೈರ್ ಸಿಡಿದು ಸೇತುವೆ ಮೇಲಿಂದ ಉರುಳಿದ ಕಾರು:ಇಬ್ಬರು ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.