ಮತದಾನ ಕೇಂದ್ರದ ಸೌಲಭ್ಯ ವರದಿ ಸಲ್ಲಿಸಿ


Team Udayavani, May 27, 2018, 12:46 PM IST

gul-1.jpg

ಕಲಬುರಗಿ: ಜಿಲ್ಲೆಯಲ್ಲಿ 15 ಗ್ರಾಪಂಗಳಿಗೆ ಸಾರ್ವತ್ರಿಕ ಚುನಾವಣೆ ನಡೆಯುತ್ತಿದ್ದು, ಮೇ 28 ರೊಳಗಾಗಿ ವಿಧಾನಸಭಾ ಮತಕ್ಷೇತ್ರದ ಡಾಟಾ ಬೇಸ್‌ಗೆ ಅನುಗುಣವಾಗಿ ಮತದಾರರ ಪಟ್ಟಿ ಸಿದ್ಧಪಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಆರ್‌. ವೆಂಕಟೇಶಕುಮಾರ ತಹಶೀಲ್ದಾರರಿಗೆ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಈಶಾನ್ಯ ಪದವೀಧರ ಮತಕ್ಷೇತ್ರದ ಹಾಗೂ ಗ್ರಾಪಂ ಚುನಾವಣೆಗೆ ಸಂಬಂಧಿಸಿದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಗ್ರಾಪಂ ಚುನಾವಣೆಯಲ್ಲಿ ಪ್ರಪ್ರಥಮ ಬಾರಿಗೆ ಬಹು ಆಯ್ಕೆ ಎಲೆಕ್ಟ್ರಾನಿಕ್‌ ಮತಯಂತ್ರಗಳನ್ನು ಬಳಸಲಾಗುತ್ತಿದೆ.

ಒಂದು ಮತಯಂತ್ರದಲ್ಲಿ ಮತದಾರರು ನಾಲ್ಕು ಅಭ್ಯರ್ಥಿಗಳಿಗೆ ಮತ ಚಲಾಯಿಸಬಹುದು. ಚುನಾವಣೆ
ನಡೆಯುವ ಎಲ್ಲ ಮತಗಟ್ಟೆಗಳಲ್ಲಿ ಮತದಾರರಿಗೆ ಎಲೆಕ್ಟ್ರಾನಿಕ್‌ ಮತಯಂತ್ರದ ಪ್ರಾತ್ಯಕ್ಷಿಕೆಯ ಮೂಲಕ ಮಾಹಿತಿ ನೀಡಬೇಕೆಂದು ತಿಳಿಸಿದರು. 

ಕಲಬುರಗಿ ತಾಲೂಕಿನಲ್ಲಿ-7, ಆಳಂದ-42, ಜೇವರ್ಗಿ-19, ಚಿತ್ತಾಪುರ-13 ಹಾಗೂ ಚಿಂಚೋಳಿ-10 ಸೇರಿದಂತೆ ಒಟ್ಟು 91 ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತಿದೆ. ಗ್ರಾಪಂ ಸಾರ್ವತ್ರಿಕ ಚುನಾವಣೆಯ ಮತದಾನವು ಜೂ. 14ರಂದು ಬೆಳಗ್ಗೆ 7ರಿಂದ ಸಂಜೆ 5ರ ವರೆಗೆ ನಡೆಯಲಿದೆ.

ಚುನಾವಣೆಗಾಗಿ ಮೇ 30ರಂದು ಅಧಿಸೂಚನೆ ಹೊರಡಿಸಲಾಗುವುದು. ನಾಮಪತ್ರ ಸಲ್ಲಿಕೆಗೆ ಜೂ. 2 ಕೊನೆಯ ದಿನವಾಗಿದ್ದು, ಕೇವಲ 3 ದಿನಗಳ ಕಾಲಾವಕಾಶ ಮಾತ್ರ ನೀಡಲಾಗಿದೆ. ತಹಶೀಲ್ದಾರರು ತಾಲೂಕಾ
ಮಟ್ಟದಲ್ಲಿಯೇ ಮತಪತ್ರವನ್ನು ತಯಾರಿಸಿಕೊಂಡು ಎಲೆಕ್ಟ್ರಾನಿಕ್‌ ಮತಯಂತ್ರಗಳಿಗೆ ಅಳವಡಿಸಬೇಕು.
 
ಇದರಲ್ಲಿ ಯಾವುದೇ ಗೊಂದಲ ಸೃಷ್ಟಿಯಾಗಬಾರದು ಎಂದರು. ಕಲಬುರಗಿ ತಾಲೂಕಿನ ಮರಗುತ್ತಿ, ಆಳಂದ ತಾಲೂಕಿನ ಮಡಕಿ, ದಣ್ಣೂರ, ನಿರಗುಡಿ, ಭೂಸನೂರ, ಹಿತ್ತಲಶಿರೂರ, ಧುತ್ತರಗಾಂವ, ಚಿಂಚೋಳಿ ತಾಲೂಕಿನ
ಕರ್ಚಖೇಡ, ಗರಗಪಳ್ಳಿ, ಚಿತ್ತಾಪುರ ತಾಲೂಕಿನ ಶಳ್ಳಗಿ, ಕೊಲ್ಲೂರ, ರಾಂಪುರಹಳ್ಳಿ, ಜೇವರ್ಗಿ ತಾಲೂಕಿನ
ಮದರಿ, ಕರಕಿಹಳ್ಳಿ, ರಂಜಣಗಿ ಗ್ರಾಪಂಗಳಿಗಾಗಿ ಸಾರ್ವತ್ರಿಕ ಚುನಾವಣೆ ನಡೆಯಲಿದೆ.

ಇದೇ ಅವಧಿಯಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ಒಟ್ಟು 13 ಗ್ರಾಪಂ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ನಡೆಯಲಿದೆ. ಈ ಚುನಾವಣೆ ಮತಪತ್ರದ ಮುಖಾಂತರ ನಡೆಯುವುದು ಎಂದರು. 

ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ: ನಗರ ಸ್ಥಳೀಯ ಸಂಸ್ಥೆಗಳ ಸಾರ್ವತ್ರಿಕ ಚುನಾವಣೆಗಾಗಿ ಆಯಾ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ತಹಶೀಲ್ದಾರರು ಕರಡು ಮತದಾರರ ಪಟ್ಟಿ ಸಿದ್ಧಪಡಿಸಿಕೊಳ್ಳಬೇಕು. ಈಗಾಗಲೇ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ವಾರ್ಡಗಳ ವಿಂಗಡಣೆ ಕೈಗೊಂಡು ಅಧಿಸೂಚನೆ ಹೊರಡಿಸಲಾಗಿದೆ.

ನೂತನವಾಗಿ ಗುರುತಿಸಲಾಗಿರುವ ವಾರ್ಡುಗಳ ವ್ಯಾಪ್ತಿಯಲ್ಲಿ ಮತದಾರರನ್ನು ಗುರುತಿಸಬೇಕು. ಮನೆ ಮನೆಗೆ ಭೇಟಿ ನೀಡಿ ಮತದಾರರನ್ನು ವಿಂಗಡಿಸಬೇಕು. ಯಾವುದೇ ಕಾರಣಕ್ಕೂ ಮತದಾರರು ಒಂದು ವಾರ್ಡ್‌ದಿಂದ ಇನ್ನೊಂದು ವಾರ್ಡಗೆ ಸೇರ್ಪಡೆಯಾಗದಂತೆ ಹಾಗೂ ಬಿಟ್ಟು ಹೋಗದಂತೆ ಎಚ್ಚರಿಕೆ ವಹಿಸಬೇಕು.

ಜೂ. 11ರಂದು ಕರಡು ಮತದಾರರ ಪಟ್ಟಿ ಪ್ರಕಟಿಸಬೇಕು. ಜೂ. 17ರೊಳಗಾಗಿ ಆಕ್ಷೇಪನೆಗಳನ್ನು ಸ್ವೀಕರಿಸಿ ಜೂ. 22ರೊಳಗಾಗಿ ಆಕ್ಷೇಪಣೆಗಳನ್ನು ಇತ್ಯರ್ಥಪಡಿಸುವ ಮೂಲಕ ಜೂ. 27ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಬೇಕೆಂದು ಸೂಚಿಸಿದರು.

ಟಾಪ್ ನ್ಯೂಸ್

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.