ಶಾಸಕ ಮುದ್ನಾಳ-ಗ್ರಾಹಕರ ನಡುವೆ ವಾಗ್ವಾದ

Team Udayavani, May 29, 2018, 5:29 PM IST

yad-1.jpg

ಯಾದಗಿರಿ: ರೈತರ ಸಾಲ ಮನ್ನಾಕ್ಕೆ ಆಗ್ರಹಿಸಿ ಭಾರತೀಯ ಜನತಾ ಪಕ್ಷ ಸೋಮವಾರ ಕರೆ ನೀಡಿದ್ದ ಕರ್ನಾಟಕ
ಬಂದ್‌ಗೆ ಜಿಲ್ಲೆಯಾದ್ಯಂತ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಕರ್ನಾಟಕ ಬಂದ್‌ ಕರೆ ಹಿನ್ನೆಲೆಯಲ್ಲಿ ಯಾದಗಿರಿ ನಗರದಲ್ಲಿ ಬಿಜೆಪಿ ಶಾಸಕ ವೆಂಕಟರೆಡ್ಡಿ ಮುದ್ನಾಳ ಅವರು ಸ್ವತಃ
ತಾವೇ ಅಂಗಡಿ ಮುಂಗಟ್ಟುಗಳನ್ನು ಬಂದ್‌ ಮಾಡಿಸುವಲ್ಲಿ ನಿರತರಾಗಿದ್ದು ಕಂಡು ಬಂತು.

ಬೆಳಗ್ಗೆಯಿಂದಲೇ ಕಾರ್ಯಕರ್ತರೊಂದಿಗೆ ಸೇರಿ ನಗರದಲ್ಲಿರುವ ಅಂಗಡಿಗಳನ್ನು ಬಲವಂತವಾಗಿ ಬಂದ್‌ ಮಾಡಿಸಿದರು. ನಗರದ ಖಾಸಗಿ ಹೊಟೇಲ್‌ನಲ್ಲಿ ಬಾಗಿಲು ಹಾಕಿಕೊಂಡು ಒಳಗೆ ಗ್ರಾಹಕರಿಗೆ ತಿಂಡಿ ನೀಡಲಾಗುತ್ತಿತ್ತು. ಈ ವಿಚಾರ ಅರಿತ ಶಾಸಕರು ಹೊಟೇಲ್‌ ಬಾಗಿಲು ತೆಗೆಸಿ ಒಳಗೆ ಹೋಗಿ ಗ್ರಾಹಕರನ್ನು ಹೊರಗೆ ಕಳುಹಿಸಿ ಬಂದ್‌ ಮಾಡುವಂತೆ ಹೊಟೇಲ್‌ ಮಾಲೀಕರನ್ನು ತರಾಟೆಗೆ ತೆಗೆದುಕೊಂಡರು. 

ಈ ಸಂದರ್ಭದಲ್ಲಿ ಗ್ರಾಹಕರೊಬ್ಬರು ಬಂದ್‌ ಮಾಡಲು ನೀವು ಯಾರು ಎಂದಾಗ ನಾನು ಶಾಸಕನಾಗಿದ್ದು, ಬಂದ್‌ ಮಾಡಬೇಕು ಎಂದು ವಾಗ್ವಾದ ನಡೆಸಿದ ಘಟನೆಯೂ ನಡೆಯಿತು. ನೂರಾರು ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಬೈಕ್‌ ರ್ಯಾಲಿ ನಡೆಸಿ ಅಂಗಡಿಗಳನ್ನು ಬಂದ್‌ ಮಾಡುವಲ್ಲಿ ನಿರತರಾಗಿದ್ದರು. ಒಟ್ಟಾರೆಯಾಗಿ ಜಿಲ್ಲೆಯಾದ್ಯಂತ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಬೆಳಗ್ಗೆ ಕೆಲವರು ಸ್ವಯಂ ಪ್ರೇರಿತವಾಗಿ ಅಂಗಡಿ ಮುಂಗಟ್ಟುಗಳು ಬಂದ್‌ ಮಾಡಿದರೆ, ಇನ್ನೂ ಬಿಜೆಪಿ ಮುಖಂಡರು, ಕಾರ್ಯಕರ್ತರು ಒತ್ತಾಯ ಪೂರ್ವಕವಾಗಿ ಅಂಗಡಿ ಮುಂಗಟ್ಟುಗಳನ್ನು ಬಂದ್‌ ಮಾಡುತ್ತಿರುವುದು ಕಂಡು ಬಂದಿತು. ಎಂದಿನಂತೆ ಆಟೋ ಸೇರಿದಂತೆ ಖಾಸಗಿ ವಾಹನಗಳ ಸಂಚಾರಕ್ಕೆ ಯಾವುದೇ ತೊಂದರೆ ಆಗಲಿಲ್ಲ. 

ಇದರಿಂದ ಪ್ರಯಾಣಿಕರಿಗೆ ಯಾವುದೇ ಸಮಸ್ಯೆ ಎದುರಾಗಲಿಲ್ಲ. ಆಸ್ಪತ್ರೆಗಳು, ಮೆಡಿಕಲ್‌ ಶಾಪ್‌ಗ್ಳು ಶಾಲಾ
ಕಾಲೇಜುಗಳು, ಬ್ಯಾಂಕ್‌ಗಳು ಹಾಗೂ ಸರಕಾರಿ ಕಚೇರಿಗಳು ಎಂದಿನಂತೆ ಕಾರ್ಯ ನಿರ್ವಹಿಸಿದ್ದರಿಂದ ಜನರಿಗೆ ಬಂದ್‌ನ ಯಾವುದೇ ಪರಿಣಾಮ ಬೀರಲಿಲ್ಲ. ಬಿಜೆಪಿ ಕರ್ನಾಟಕ ಬಂದ್‌ಗೆ ಕರವೇ ಹಾಗೂ ರೈತ ಸಂಘಗಳು ಬೆಂಬಲ ನೀಡಿರಲಿಲ್ಲ.

ಕೆಎಸ್‌ಆರ್‌ಟಿಸಿ ಬಸ್‌ ಸಂಚಾರ ಸ್ಥಗಿತಗೊಂಡಿದ್ದರಿಂದ ತಮ್ಮ ಊರುಗಳಿಗೆ ಹೋಗಬೇಕಾಗಿದ್ದ ಪ್ರಯಾಣಿಕರು ಪರದಾಡಿದರು. ಯಾದಗಿರಿ, ಶಹಾಪುರ, ಸುರಪುರ, ಗುರುಮಠಕಲ್‌, ವಡಗೇರಾ, ಹುಣಸಗಿ ತಾಲೂಕುಗಳಲ್ಲಿ ಸಹ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು.

ಟಾಪ್ ನ್ಯೂಸ್

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.