ಮಂಗಳೂರಿನ ಹೆಬ್ಬಾಗಿಲು ಬಂದ್‌

Team Udayavani, May 30, 2018, 10:45 AM IST

30-may-3.jpg

ಮಹಾನಗರ : ಮೊದಲ ಮಳೆಗೆ ನಗರವು ಪ್ರಮುಖ ರಾಷ್ಟ್ರೀಯ ಹೆದ್ದಾರಿಗಳಿಂದ ಸಂಪರ್ಕ ಕಡಿದುಕೊಂಡು ಹೆಬ್ಟಾಗಿಲು ಬಂದ್‌ ಆದ ಘಟನೆ ಮಂಗಳವಾರ ಸಂಭವಿಸಿದ್ದು, ಇದು ಇತ್ತೀಚಿನ ವರ್ಷಗಳಲ್ಲಿಯೇ ಪ್ರಥಮ.

ರಾ.ಹೆ. 66ರ ಪಂಪ್‌ವೆಲ್‌ ಜಂಕ್ಷನ್‌ ನಲ್ಲಿ ಮತ್ತು ರಾ.ಹೆ. 75ರ ಪಡೀಲ್‌ ರೈಲ್ವೇ ಅಂಡರ್‌ ಪಾಸ್‌ನಲ್ಲಿ ಹಾಗೂ ಕೊಟ್ಟಾರ ಚೌಕಿಯಲ್ಲಿ ಓವರ್‌ ಬ್ರಿಜ್‌ ಬಳಿ ರಸ್ತೆಗೆ ನೆರೆ ನೀರು ಬಿದ್ದ ಕಾರಣ ಮಂಗಳೂರು ನಗರ ಪ್ರವೇಶಿಸುವ ಮತ್ತು ನಗರದಿಂದ ಹೊರ ಹೋಗುವ ವಾಹನಗಳು ಸಂಚರಿಸಲಾಗದೆ ನಗರದ ಸಂಪರ್ಕ ಕಡಿತಗೊಂಡಿತ್ತು. ಬಸ್‌ ಮತ್ತು ಇತರ ವಾಹನಗಳಲ್ಲಿ ಹೊರಟವರು ಮುಂದಕ್ಕೆ ಹೋಗಲೂ ಆಗದೆ, ವಾಪಸ್‌ ಬರಲೂ ಆಗದೆ ಗಂಟೆ ಗಟ್ಟಲೆ ವಾಹನಗಳಲ್ಲಿ ಸಿಲುಕಿ ಪರದಾಡಬೇಕಾಯಿತು.

ರಾಷ್ಟ್ರೀಯ ಹೆದ್ದಾರಿಗಳಲ್ಲಿ ನಡೆಯುತ್ತಿರುವ ಫ್ಲೈಓವರ್‌, ರೈಲ್ವೇ ಓವರ್‌ ಬ್ರಿಜ್‌ ಮತ್ತು ಇತರ ಕಾಮಗಾರಿಗಳು ಪೂರ್ಣಗೊಳ್ಳದಿರುವುದು ಹಾಗೂ ಅವೈಜ್ಞಾನಿಕವಾಗಿ ಕೆಲಸ ನಡೆಸಿರುವುದು ಇದಕ್ಕೆಲ್ಲ ಮುಖ್ಯ ಕಾರಣ.

ಸಂಚಾರ ಸಂಪೂರ್ಣ ಅಸ್ತವ್ಯಸ್ತ
ಪಂಪ್‌ವೆಲ್‌ ಜಂಕ್ಷನ್‌ನಲ್ಲಿ ಓವರ್‌ ಬ್ರಿಜ್‌ ನಿರ್ಮಾಣ ಕಾಮಗಾರಿ ನಡೆಯುತ್ತಿರುವುದರಿಂದ ನೀರು ಹರಿದು ಹೋಗಲು ಸ್ಥಳಾವಕಾಶ ಇಲ್ಲದ ಕಾರಣ ರಸ್ತೆ ಮತ್ತು ಓವರ್‌ ಬ್ರಿಜ್‌ನ ರ್‍ಯಾಂಪ್‌ ನಿರ್ಮಾಣಕ್ಕಾಗಿ ಅಗೆದ ಜಾಗದಲ್ಲಿ ನೀರು ನಿಂತು ಸಂಪೂರ್ಣ ಜಲಾವೃತಗೊಂಡಿದ್ದರಿಂದ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿತ್ತು.

ರಾ.ಹೆ. 66ರಲ್ಲಿ ಪಂಪ್‌ವೆಲ್‌ನಿಂದ ಎಕ್ಕೂರು ಹಾಗೂ ಉತ್ತರ ದಿಕ್ಕಿನಲ್ಲಿ ನಂತೂರು, ಪಡೀಲ್‌ ರಸ್ತೆಯಲ್ಲಿ ನಾಗುರಿವರೆಗೆ ಮತ್ತು ಕಂಕನಾಡಿ ಬೈಪಾಸ್‌ ರಸ್ತೆಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದವು. ತೊಕ್ಕೊಟ್ಟು ಕಡೆಯಿಂದ ಬರುವ ಬಸ್‌ಗಳು ಎಕ್ಕೂರಿನಲ್ಲಿಯೇ ಸಂಚಾರವನ್ನು ಮೊಟಕುಗೊಳಿಸಿ ಅಲ್ಲಿಂದಲೇ ವಾಪಸಾದವು. ಮಂಗಳೂರು- ಕಾಸರಗೋಡು ಅಂತಾರಾಜ್ಯ ಬಸ್‌ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿತ್ತು.

ಪಡೀಲ್‌ ರೈಲ್ವೇ ಅಂಡರ್‌ ಪಾಸ್‌ ಬಳಿ ರಸ್ತೆ ಮೇಲೆ ನೀರು ಬಿದ್ದ ಕಾರಣ ಸಂಚಾರ ಅಸ್ತವ್ಯಸ್ತಗೊಂಡು ಕಣ್ಣೂರು ಅಡ್ಯಾರ್‌ ತನಕವೂ ವಾಹನಗಳು ಸಾಲು ಗಟ್ಟಿ ನಿಂತಿದ್ದವು. ಕೊಟ್ಟಾರ ಚೌಕಿ ಜಂಕ್ಷನ್‌ನಲ್ಲಿ ರಸ್ತೆ ಮೇಲೆ ನೀರು ಬಿದ್ದ ಕಾರಣ ಉತ್ತರ ದಿಕ್ಕಿನಲ್ಲಿ ಕೂಳೂರು ತನಕ ಹಾಗೂ ದಕ್ಷಿಣ ಭಾಗದಲ್ಲಿ ಉರ್ವಸ್ಟೋರ್‌ ತನಕ ವಾಹನಗಳು ಕ್ಯೂನಲ್ಲಿ ನಿಂತಿದ್ದವು. ಬಸ್‌ ಸಂಚಾರ ಅಸ್ತವ್ಯಸ್ತಗೊಡಿದ್ದು, ಕೆಲವು ಸಿಟಿ ಬಸ್‌ನವರು ಅರ್ಧದಲ್ಲಿ ಟ್ರಿಪ್‌ ಕಟ್‌ ಮಾಡಿ ವಾಪಸಾದರು.

ಮಧ್ಯಾಹ್ನ 2 ಗಂಟೆ ತನಕವೂ ಪರಿಸ್ಥಿತಿ ಇದೇ ರೀತಿ ಇದ್ದು, ಕ್ರಮೇಣ ನೀರಿನ ಪ್ರಮಾಣ ಕಡಿಮೆಯಾದ ಹಿನ್ನೆಲೆಯಲ್ಲಿ ಕೆಲವು ಬಸ್‌ಗಳು ಓಡಾಟ ಪುನರಾರಂಭಿಸಿದವು. 

ಟಾಪ್ ನ್ಯೂಸ್

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.