ತೈಲೋತ್ಪನ್ನ ಶೀಘ್ರ 5 ಇಳಿಕೆ?
Team Udayavani, Jun 1, 2018, 3:50 AM IST
ಹೊಸದಿಲ್ಲಿ: ಪೆಟ್ರೋಲ್, ಡೀಸೆಲ್ ದರ ಏರಿಕೆಯಿಂದ ಕಂಗೆಟ್ಟಿದ್ದೀರಾ? ಹಾಗಿದ್ದರೆ ಇನ್ನು ಕೆಲವೇ ದಿನಗಳಲ್ಲಿ ರೂ.4 ರಿಂದ ರೂ.5ರ ವರೆಗೆ ಇಳಿಕೆಯಾಗುವ ಸಾಧ್ಯತೆ ಇದೆ. ಅಬಕಾರಿ ಸುಂಕ, ಮೌಲ್ಯ ವರ್ಧಿತ ತೆರಿಗೆ (ವ್ಯಾಟ್), ತೈಲ ಕಂಪೆನಿಗಳಿಗೆ ನೀಡಲಾಗುವ ಕಮಿಷನ್ ಪ್ರಮಾಣದಲ್ಲಿ ತಗ್ಗಿಸುವ ಇರಾದೆಯನ್ನು ಕೇಂದ್ರ ಸರಕಾರ ಹೊಂದಿದೆ. ಈ ಬಗ್ಗೆ ‘ದ ಹಿಂದುಸ್ತಾನ್ ಟೈಮ್ಸ್’ ವರದಿ ಮಾಡಿದ್ದು, ದಿನದಿಂದ ದಿನಕ್ಕೆ ತುಟ್ಟಿಯಾಗುತ್ತಿರುವ ತೈಲ ಬೆಲೆಯಿಂದಾಗಿ ಕೇಂದ್ರ ಸರಕಾರವೂ ಕಳವಳಗೊಂಡಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಕೇಂದ್ರ ಸರಕಾರದ ಜತೆಗೆ ರಾಜ್ಯ ಸರಕಾರಗಳು ಮತ್ತು ತೈಲೋತ್ಪನ್ನಗಳನ್ನು ಮಾರುಕಟ್ಟೆಗೆ ವಿತರಿಸುವವರೂ ತಮ್ಮ ಹೊಣೆ ನಿಭಾಯಿಸಬೇಕು ಎಂದಿದ್ದಾರೆ. ಉದಾಹರಣೆಗೆ ಹೇಳುವುದಿದ್ದರೆ ಪ್ರತಿಯೊಂದು ರಾಜ್ಯದಲ್ಲಿಯೂ ಭಿನ್ನ ರೀತಿಯ ತೆರಿಗೆ ವ್ಯವಸ್ಥೆ ಇದೆ. ದಿಲ್ಲಿಯಲ್ಲಿ ಪೆಟ್ರೋಲ್ ಮೇಲೆ ಕೇಂದ್ರ ತೆರಿಗೆ ಪ್ರಮಾಣ ಶೇ.25, ರಾಜ್ಯ ತೆರಿಗೆ ಪ್ರಮಾಣ ಶೇ.21.2 ಮತ್ತು ಡೀಲರ್ ಮಾರ್ಜಿನ್ ಶೇ.4.7 ಇದೆ.
ಪೆಟ್ರೋಲ್ 7 ಪೈಸೆ ಇಳಿಕೆ: ಈ ನಡುವೆ, ಬುಧವಾರ 1 ಪೈಸೆ ಇಳಿಕೆಯಾಗಿದ್ದ ಪ್ರತಿ ಲೀಟರ್ ಪೆಟ್ರೋಲ್ ದರ ಗುರುವಾರ 7 ಪೈಸೆ ಇಳಿಕೆಯಾಗಿದೆ. ಪ್ರತಿ ಲೀಟರ್ ಡೀಸೆಲ್ ಮೇಲೆ 5 ಪೈಸೆ ಇಳಿಕೆಯಾಗಿದೆ. ಈ ನಡುವೆ ಕೇರಳದಲ್ಲಿ ಶುಕ್ರವಾರ (ಜೂ.1)ದಿಂದ ಪತ್ರಿ ಲೀಟರ್ ಪೆಟ್ರೋಲ್, ಡೀಸೆಲ್ ದರದಲ್ಲಿ 1 ರೂ. ಕಡಿಮೆಯಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
MUST WATCH
ಹೊಸ ಸೇರ್ಪಡೆ
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು
ಈ ಪೆನ್ಡ್ರೈವ್ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್