ನೈಋತ್ಯ ಶಿಕ್ಷಕರ, ಪದವೀಧರರ ಕ್ಷೇತ್ರ: 3 ಪಕ್ಷಗಳಿಗೂ ಪ್ರತಿಷ್ಠೆ ಕಣ


Team Udayavani, Jun 5, 2018, 4:40 AM IST

vidhana-saudha-3-600.jpg

ಮಂಗಳೂರು: ವಿಧಾನ ಪರಿಷತ್‌ನ ನೈಋತ್ಯ ಶಿಕ್ಷಕರ ಹಾಗೂ ನೈಋತ್ಯ ಪದವೀಧರರ ಕ್ಷೇತ್ರಗಳಿಗೆ ಜೂ. 8ರಂದು ಚುನಾವಣೆ ನಡೆಯಲಿದ್ದು, ಕೇವಲ ನಾಲ್ಕು ದಿನಗಳು ಮಾತ್ರ ಬಾಕಿಯುಳಿದಿವೆ. ರಾಜ್ಯದಲ್ಲಿ ಬದಲಾಗಿರುವ ರಾಜಕೀಯ ಪರಿಸ್ಥಿತಿಯಲ್ಲಿ ಈ ಎರಡೂ ಕ್ಷೇತ್ರಗಳು ಬಿಜೆಪಿ, ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಗೆ ಹಿಂದೆಂದಿಗಿಂತಲೂ ಹೆಚ್ಚು ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿವೆ. ಪದವೀಧರರ ಕ್ಷೇತ್ರ ದಲ್ಲಿ ಒಟ್ಟು 8 ಮಂದಿ ಹಾಗೂ ಶಿಕ್ಷಕರ ಕ್ಷೇತ್ರದಲ್ಲಿ ಒಟ್ಟು 12 ಮಂದಿ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಪ್ರಸ್ತುತ ನೈಋತ್ಯ ಶಿಕ್ಷಕರ ಹಾಗೂ ನೈಋತ್ಯ ಪದವೀಧರರ ಕ್ಷೇತ್ರ ಬಿಜೆಪಿ ವಶದಲ್ಲಿದ್ದು, ಶಿಕ್ಷಕರ ಕ್ಷೇತ್ರವನ್ನು ಕ್ಯಾ| ಗಣೇಶ್‌ ಕಾರ್ಣಿಕ್‌ ಹಾಗೂ ಪದವೀಧರರ ಕ್ಷೇತ್ರವನ್ನು ವಿಧಾನಪರಿಷತ್‌ ಸಭಾಪತಿ ಡಿ.ಎಚ್‌. ಶಂಕರಮೂರ್ತಿ ಪ್ರತಿನಿಧಿಸುತ್ತಿದ್ದಾರೆ. ಇವೆರಡೂ ಬಹಳ ವರ್ಷಗಳಿಂದ ಬಿಜೆಪಿ ವಶದಲ್ಲಿವೆ. ಈ ಬಾರಿ ಡಿ.ಎಚ್‌. ಶಂಕರಮೂರ್ತಿ ಸ್ಪರ್ಧಿಸದಿರಲು ನಿರ್ಧರಿಸಿರುವ ಹಿನ್ನೆಲೆಯಲ್ಲಿ ಮಾಜಿ ಸಂಸದ ಆಯನೂರು ಮಂಜುನಾಥ್‌ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ. ಶಿಕ್ಷಕರ ಕ್ಷೇತ್ರದಿಂದ ಮೂರನೇ ಬಾರಿಗೆ ಕ್ಯಾ| ಗಣೇಶ್‌ ಕಾರ್ಣಿಕ್‌ ಸ್ಪರ್ಧಿಸುತ್ತಿದ್ದಾರೆ.

ಬಿಜೆಪಿಗೆ ಕಾಂಗ್ರೆಸ್‌ ಹಾಗೂ ಜೆಡಿಎಸ್‌ನಿಂದ ಪ್ರಬಲ ಸ್ಪರ್ಧೆ ಎದುರಾಗಿದ್ದು, ಕ್ಷೇತ್ರವನ್ನು ಉಳಿಸಿಕೊಳ್ಳುವ ಸವಾಲು ಉಂಟಾಗಿದೆ. ವಿಧಾನಸಭೆಯಲ್ಲಿ ಜೆಡಿಎಸ್‌ ಹಾಗೂ ಕಾಂಗ್ರೆಸ್‌ ಮೈತ್ರಿ ಮಾಡಿಕೊಂಡಿದ್ದರೂ ವಿಧಾನ ಪರಿಷತ್‌ ಚುನಾವಣೆಯಲ್ಲಿ ಪ್ರತ್ಯೇಕವಾಗಿ ಸ್ಪರ್ಧಿಸುತ್ತಿವೆ. ಕಾಂಗ್ರೆಸ್‌ ವರ್ಷದ ಹಿಂದೆಯೇ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಪ್ರಚಾರ ಆರಂಭಿಸಿತ್ತು. ಶಿಕ್ಷಕರ ಕ್ಷೇತ್ರದಲ್ಲಿ ಕಳೆದ ಬಾರಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಅಲ್ಪಮತಗಳಿಂದ ಪರಾಜಿತರಾಗಿದ್ದ ಕುಶಾಲನಗರದ ಕೆ.ಕೆ. ಮಂಜುನಾಥ್‌ ಕಾಂಗ್ರೆಸ್‌ ನಿಂದ ಸ್ಪರ್ಧಿಸುತ್ತಿದ್ದಾರೆ. ಈ ಕ್ಷೇತ್ರವನ್ನು ಗೆಲ್ಲಲೇಬೇಕು ಎಂದು ಪಣ ತೊಟ್ಟಿರುವ ಕಾಂಗ್ರೆಸ್‌ ಈ ನಿಟ್ಟಿನಲ್ಲಿ ತೀವ್ರ ಪ್ರಚಾರದಲ್ಲಿ ನಿರತವಾಗಿದೆ. 

ಜೆಡಿಎಸ್‌ ನಿಂದ ಪ್ರಭಾವಿ ನಾಯಕ ಎಸ್‌.ಎಲ್‌. ಭೋಜೆಗೌಡ ಸ್ಪರ್ಧಿಸುತ್ತಿದ್ದಾರೆ. ರಾಜ್ಯದಲ್ಲಿ ಅಧಿಕಾರಕ್ಕೇರಿರುವ ಜೆಡಿಎಸ್‌ ಕೂಡ ಗೆಲ್ಲಲು ತೀವ್ರ ಪ್ರಯತ್ನ ನಡೆಸುತ್ತಿದೆ. ಇದಲ್ಲದೆ ಶಿಕ್ಷಕರ ಕ್ಷೇತ್ರದಲ್ಲಿ 9 ಮಂದಿ ಪಕ್ಷೇತರ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಪದವೀಧರರ ಕ್ಷೇತ್ರದಲ್ಲಿ ಒಟ್ಟು 8 ಮಂದಿ ಸ್ಪರ್ಧಿಗಳಿದ್ದಾರೆ. 2012ರ ಚುನಾವಣೆಯಲ್ಲಿ ಡಿ.ಎಚ್‌. ಶಂಕರಮೂರ್ತಿಯವರಿಗೆ ಪ್ರಬಲ ಸ್ಪರ್ಧೆ ನೀಡಿದ್ದ ಕಾಂಗ್ರೆಸ್‌ ಅಭ್ಯರ್ಥಿ ಎಸ್‌.ಪಿ. ದಿನೇಶ್‌ ಈ ಬಾರಿಯೂ ಸ್ಪರ್ಧಾಕಣದಲ್ಲಿದ್ದು, ತೀವ್ರ ಹಣಾಹಣಿ ನಿರೀಕ್ಷಿಸಲಾಗಿದೆ. ದಿನೇಶ್‌ ಹಾಗೂ ಬಿಜೆಪಿ ಅಭ್ಯರ್ಥಿ ಮಾಜಿ ಸಂಸದ ಆಯನೂರು ಮಂಜುನಾಥ್‌ ಇಬ್ಬರೂ ಲಿಂಗಾಯತ ಸಮುದಾಯಕ್ಕೆ ಸೇರಿರುವುದು ಕುತೂಹಲವನ್ನು ಇನ್ನಷ್ಟು ಹೆಚ್ಚಿಸಿದೆ. ಜೆಡಿಎಸ್‌ ನಿಂದ ಅರುಣ್‌ ಕುಮಾರ್‌ ಸ್ಪರ್ಧಿಸುತ್ತಿದ್ದಾರೆ. ಇದಲ್ಲದೆ 5 ಮಂದಿ ಪಕ್ಷೇತರರು ಕಣದಲ್ಲಿದ್ದಾರೆ.

30 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿ
ಸುಪ್ರೀಂಕೋರ್ಟ್‌ನ ಆದೇಶದಂತೆ ಚುನಾವಣಾ ಆಯೋಗ ಕಳೆದ ಬಾರಿಯ ಮತದಾರರ ಪಟ್ಟಿಯನ್ನು ರದ್ದು ಮಾಡಿರುವ ಹಿನ್ನೆಲೆಯಲ್ಲಿ ಈ ಬಾರಿ ಹೊಸದಾಗಿ ಮತದಾರರ ಪಟ್ಟಿ ಸಿದ್ಧಪಡಿಸಲಾಗಿದೆ. ನೈಋತ್ಯ ಪದವೀಧರರ ಹಾಗೂ ಶಿಕ್ಷಕರ ಕ್ಷೇತ್ರಗಳು ದ.ಕ., ಉಡುಪಿ, ಕೊಡಗು, ಶಿವಮೊಗ್ಗ, ಚಿಕ್ಕ ಮಗಳೂರು, ದಾವಣಗೆರೆ ಜಿಲ್ಲೆಯ ಚನ್ನಗಿರಿ ಹಾಗೂ ಹೊನ್ನಾಳಿ ತಾಲೂಕುಗಳು ಒಳಗೊಂಡಿದ್ದು, ಒಟ್ಟು 30 ವಿಧಾನಸಭಾ ಕ್ಷೇತ್ರಗಳು ಇದರ ವ್ಯಾಪ್ತಿಗೆ ಬರುತ್ತವೆ. 1988ರಲ್ಲಿ ನೈಋತ್ಯ ಪದವೀಧರರ ಕ್ಷೇತ್ರ ರಚನೆಯಾದಾಗ ಇಲ್ಲಿ 7,000 ಮತದಾರರಿದ್ದು 2018ರಲ್ಲಿ 67,185ಕ್ಕೆ ಏರಿಕೆಯಾಗಿದೆ. 27,044 ಮತದಾರರನ್ನು ಹೊಂದಿರುವ ಶಿವಮೊಗ್ಗ ಪ್ರಥಮ ಸ್ಥಾನದಲ್ಲಿದೆ. ಶಿಕ್ಷಕರ ಕ್ಷೇತ್ರದಲ್ಲಿ 20,481 ಮತದಾರರಿದ್ದು, 7,140 ಮತದಾರರನ್ನು ಹೊಂದಿರುವ ದಕ್ಷಿಣ ಕನ್ನಡ ಪ್ರಥಮ ಸ್ಥಾನದಲ್ಲಿದೆ.

ಕಣದಲ್ಲಿರುವ ಅಭ್ಯರ್ಥಿಗಳು
ನೈಋತ್ಯ ಶಿಕ್ಷಕರ ಕ್ಷೇತ್ರ: ಕ್ಯಾ
| ಗಣೇಶ್‌ ಕಾರ್ಣಿಕ್‌ ( ಬಿಜೆಪಿ), ಎಸ್‌.ಎಲ್‌. ಭೋಜೆಗೌಡ ( ಜೆಡಿಎಸ್‌), ಕೆ.ಕೆ. ಮಂಜುನಾಥ್‌ ಕುಮಾರ್‌ (ಕಾಂಗ್ರೆಸ್‌), ಡಾ| ಅರುಣ್‌ ಹೊಸಕೊಪ್ಪ, ಅಲೋಶಿಯಸ್‌ ಡಿ’ಸೋಜಾ, ಕೆ.ಬಿ. ಚಂದ್ರೋಜಿ ರಾವ್‌, ಡಿ.ಕೆ. ತುಳಸಪ್ಪ, ಅಂಪಾರು ನಿತ್ಯಾನಂದ ಶೆಟ್ಟಿ, ಪ್ರಭುಲಿಂಗ ಬಿ.ಆರ್‌., ಬಸವರಾಜಪ್ಪ ಕೆ.ಸಿ., ಎಂ. ರಮೇಶ್‌, ರಾಜೇಂದ್ರ ಕುಮಾರ್‌ ಕೆ.ಪಿ. (ಪಕ್ಷೇತರರು).

ನೈಋತ್ಯ ಪದವೀಧರರ ಕ್ಷೇತ್ರ: ಆಯನೂರು ಮಂಜುನಾಥ್‌ (ಬಿಜೆಪಿ),  ಎಸ್‌.ಪಿ. ದಿನೇಶ್‌ (ಕಾಂಗ್ರೆಸ್‌), ಅರುಣ್‌ ಕುಮಾರ್‌ (ಜೆಡಿಎಸ್‌), ಜಿ.ಸಿ. ಪಟೇಲ್‌ (ಸರ್ವ ಜನತಾ ಪಕ್ಷ), ಜಫಾರುಲ್ಲಾ ಸತ್ತರ್‌ ಖಾನ್‌, ಜೆ.ಎಂ. ಜಯ ಕುಮಾರ್‌, ಪ್ರಭುಲಿಂಗ ಬಿ.ಆರ್‌., ಬಿ.ಕೆ. ಮಂಜುನಾಥ (ಪಕ್ಷೇತರರು).

ಪರಿಷತ್‌ ನಲ್ಲಿ ಅವಿಭಜಿತ ದ.ಕ.ದ 6 ಸದಸ್ಯರು
ಮಂಗಳೂರು:
ವಿಧಾನಸಭೆಯಿಂದ ವಿಧಾನ ಪರಿಷತ್‌ ಗೆ ನಿಗದಿಯಾಗಿದ್ದ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಹರೀಶ್‌ ಕುಮಾರ್‌ ಹಾಗೂ ಬಿ.ಎಂ. ಫಾರೂಕ್‌ ಅವರು ಅವಿರೋಧವಾಗಿ ಆಯ್ಕೆಯಾಗುವುದರೊಂದಿಗೆ ಪರಿಷತ್‌  ನಲ್ಲಿ ಅವಿಭಜಿತ ದ.ಕ. ಜಿಲ್ಲೆಯ ಸದಸ್ಯ ಬಲ ಆರಕ್ಕೇರಿದೆ.
ವಿಧಾನಸಭೆಯಿಂದ ವಿಧಾನಪರಿಷತ್‌ಗೆ ಒಟ್ಟು 11 ಸ್ಥಾನಗಳಿಗೆ ಜೂ. 11ರಂದು ಚುನಾವಣೆ ನಿಗದಿಯಾಗಿತ್ತು. ಸದಸ್ಯ ಬಲದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಗೆ 4, ಬಿಜೆಪಿಗೆ 5 ಹಾಗೂ ಜೆಡಿಎಸ್‌ಗೆ 2 ಸ್ಥಾನಗಳನ್ನು ಗೆಲ್ಲುವ ಅವಕಾಶವಿತ್ತು. 11 ಸ್ಥಾನಗಳಿಗೆ ಮೂರು ಪಕ್ಷಗಳಿಂದ ಒಟ್ಟು 11 ನಾಮಪತ್ರಗಳು ಮಾತ್ರ ಸಲ್ಲಿಕೆಯಾಗಿದ್ದು, ಎಲ್ಲ ಸ್ಥಾನಗಳಿಗೂ ಅವಿರೋಧ ಆಯ್ಕೆ ನಡೆದಿದೆ. ಹರೀಶ್‌ ಕುಮಾರ್‌ ಕಾಂಗ್ರೆಸ್‌ನಿಂದ ಹಾಗೂ ಬಿ.ಎಂ. ಫಾರೂಕ್‌ ಜೆಡಿಎಸ್‌ ನಿಂದ ಆಯ್ಕೆಯಾಗಿದ್ದಾರೆ. ಪ್ರಸ್ತುತ ಹರೀಶ್‌ ಕುಮಾರ್‌ ದ.ಕ. ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷರಾಗಿ ಹಾಗೂ ಬಿ.ಎಂ. ಫಾರೂಕ್‌ ಜೆಡಿಎಸ್‌ ಮಹಾ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ದ.ಕ.ದಿಂದ ಬಿಜೆಪಿಯ ಕ್ಯಾ| ಗಣೇಶ್‌ ಕಾರ್ಣಿಕ್‌, ಕಾಂಗ್ರೆಸ್‌ನಿಂದ ಐವನ್‌ ಡಿ’ಸೋಜಾ, ಉಡುಪಿ ಜಿಲ್ಲೆಯಿಂದ ಕಾಂಗ್ರೆಸ್‌ನ ಪ್ರತಾಪಚಂದ್ರ ಶೆಟ್ಟಿ, ಬಿಜೆಪಿಯಿಂದ ಕೋಟ ಶ್ರೀನಿವಾಸ ಪೂಜಾರಿ ವಿಧಾನಪರಿಷತ್‌ ಸದಸ್ಯರಾಗಿದ್ದಾರೆ. ಕ್ಯಾ| ಕಾರ್ಣಿಕ್‌ ಸದಸ್ಯತ್ವ ಅವಧಿ ಜೂ. 8ಕ್ಕೆ ಮುಕ್ತಾಯವಾಗಲಿದ್ದು, ನೈಋತ್ಯ ಶಿಕ್ಷಕರ ಕ್ಷೇತ್ರದಿಂದ ಮರಳಿ ಸ್ಪರ್ಧಿಸುತ್ತಿದ್ದಾರೆ. ವಿಧಾನಪರಿಷತ್‌ನಲ್ಲಿ ಪ್ರತಾಪಚಂದ್ರ ಶೆಟ್ಟಿ ಹಾಗೂ ಕೋಟ ಶ್ರೀನಿವಾಸ ಪೂಜಾರಿ ಅವರು ಸ್ಥಳೀಯಾಡಳಿತ ಸಂಸ್ಥೆಗಳಿಂದ, ಕ್ಯಾ| ಗಣೇಶ್‌ ಕಾರ್ಣಿಕ್‌ ಅವರು ನೈಋತ್ಯ ಶಿಕ್ಷಕರ ಕ್ಷೇತ್ರ, ಹರೀಶ್‌ ಕುಮಾರ್‌ ಹಾಗೂ ಬಿ.ಎಂ. ಫಾರೂಕ್‌ ಅವರು ವಿಧಾನಸಭೆಯಿಂದ ಪ್ರತಿನಿಧಿಸುತ್ತಿದ್ದಾರೆ. ಐವನ್‌ ಡಿ’ಸೋಜಾ ಸರಕಾರದಿಂದ ನಾಮಕರಣಗೊಂಡ ಸದಸ್ಯರು. ಐವನ್‌ ವಿಧಾನಪರಿಷತ್‌ ಮುಖ್ಯ ಸಚೇತಕರಾಗಿ ಹಾಗೂ ಕ್ಯಾ| ಕಾರ್ಣಿಕ್‌ ವಿಧಾನ ಪರಿಷತ್‌ ವಿಪಕ್ಷ ಮುಖ್ಯ ಸಚೇತಕರಾಗಿ ಕಾರ್ಯ ನಿರ್ವಹಿಸಿದ್ದರು. ಕೋಟ ಶ್ರೀನಿವಾಸ ಪೂಜಾರಿ ಬಿಜೆಪಿ ಸರಕಾರದ ಅವಧಿಯಲ್ಲಿ ಸಚಿವರಾಗಿದ್ದರು.

ಡಿಸಿಸಿ ಕಚೇರಿಗೆ ಹರೀಶ್‌ ಕುಮಾರ್‌ ಭೇಟಿ
ಆಯ್ಕೆಯಾದ ಬಳಿಕ ಹರೀಶ್‌ ಕುಮಾರ್‌ ಅವರು ಜೂ. 5ರಂದು ಪ್ರಥಮ ಬಾರಿಗೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್‌ ಕಚೇರಿಗೆ ಆಗಮಿಸಲಿದ್ದಾರೆ. ಬೆಳಗ್ಗೆ 10.30ಕ್ಕೆ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ  ಪಕ್ಷದ ಪ್ರಮುಖರ ಸಭೆಯನ್ನುದ್ದೇಶಿಸಿ ಅವರು ಮಾತನಾಡಲಿದ್ದು, ಬಳಿಕ 3 ಗಂಟೆಗೆ ಬೆಳ್ತಂಗಡಿ ಬ್ಲಾಕ್‌ ಕಾಂಗ್ರೆಸ್‌ ಕಚೇರಿಗೆ ಭೇಟಿ ನೀಡುವರು.

— ಕೇಶವ ಕುಂದರ್‌

ಟಾಪ್ ನ್ಯೂಸ್

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.