ಒಂದು ವಜ್ರದ ಸುತ್ತ 


Team Udayavani, Jun 8, 2018, 6:00 AM IST

cc-32.jpg

ನಟಿ ರೂಪಿಕಾ ಚಿತ್ರರಂಗಕ್ಕೆ ಬಂದು 10 ವರ್ಷ ಆಗಿದೆ. ಈ ಹತ್ತು ವರ್ಷದಲ್ಲಿ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ದಾರೆ. ಇಂತಿಪ್ಪ ರೂಪಿಕಾ ಈಗ ಸದ್ದಿಲ್ಲದೇ ಹೊಸ ಸಿನಿಮಾವೊಂದರಲ್ಲಿ ನಟಿಸಿದ್ದಾರೆ. ಅದು “ರುದ್ರಾಕ್ಷಿಪುರ’. ಹೌದು, “ರುದ್ರಾಕ್ಷಿಪುರ’ ಎಂಬ ಸಿನಿಮಾವೊಂದು ತಯಾರಾಗಿದ್ದು ಈ ಚಿತ್ರದಲ್ಲಿ ರೂಪಿಕಾ ನಾಯಕಿ. ಅರ್ಜುನ್‌ ಚೌಹಾಣ್‌ ನಾಯಕ. ಈಶ್ವರ್‌ ಪೊಲಂಕಿ ಈ ಚಿತ್ರದ ನಿರ್ದೇಶಕರು. 

ಎಲ್ಲಾ ಓಕೆ, “ರುದ್ರಾಕ್ಷಿಪುರ’ದಲ್ಲಿ ನಿರ್ದೇಶಕರು ಏನು ಹೇಳಲು ಹೊರಟಿದ್ದಾರೆಂದು ನೀವು ಕೇಳಬಹುದು. ನಿರ್ದೇಶಕ ಈಶ್ವರ್‌ ಹೇಳುವಂತೆ, ಇದೊಂದು ಸಸ್ಪೆನ್ಸ್‌ ಥ್ರಿಲ್ಲರ್‌ ಸಿನಿಮಾ. ಒಂದು  ವಜ್ರವನ್ನು ಹುಡುಕಲು ಹೋದಾಗ ಏನೇನು ಅವಘಡಗಳಾಗುತ್ತವೆ ಎಂಬ ಅಂಶದೊಂದಿಗೆ ಸಿನಿಮಾ ಸಾಗುತ್ತದೆಯಂತೆ. ರುದ್ರಾಕ್ಷಿಪುರ ಎಂಬುದು ಕಾಲ್ಪನಿಕ ಊರಿನ ಹೆಸರಾಗಿದ್ದು, ಕಥೆ ಈ ಊರಿನಲ್ಲಿ ನಡೆಯಲಿದೆಯಂತೆ. ನಾಯಕ ಕಳ್ಳರ ಗುಂಪೊಂದಕ್ಕೆ ಸೇರಿಕೊಳ್ಳುವ ಮೂಲಕ ಕಥೆ ತೆರೆದುಕೊಳ್ಳುತ್ತದೆಯಂತೆ. ತನ್ನ ಗುರಿ ಸಾಧನೆಗಾಗಿ ಕಳ್ಳರ ಗುಂಪಿಗೆ ಸೇರಿಕೊಳ್ಳುವ ನಾಯಕ, ಮುಂದೆ ಏನೆಲ್ಲಾ ಬದಲಾವಣೆಗೆ ಕಾರಣವಾಗುತ್ತಾನೆ, ಜೊತೆಗೆ ನಾಯಕಿಗೂ ವಜ್ರಕ್ಕೂ ಏನು ಸಂಬಂಧ, ಅದರ ಹಿನ್ನೆಲೆಯಲ್ಲಿ ಕಥೆ ಸಾಗುತ್ತದೆಯಂತೆ. 

ವಜ್ರವನ್ನು ಹುಡುಕುತ್ತಾ ಹೋಗುವ ಪಾತ್ರದಲ್ಲಿ ರೂಪಿಕಾ ಕಾಣಿಸಿಕೊಂಡಿದ್ದಾರಂತೆ. ಮೂಲತ: ಡ್ಯಾನ್ಸರ್‌ ಆಗಿರುವ ರೂಪಿಕಾ ಅವರ ಪಾತ್ರದ ಪರಿಚಯವನ್ನು ಭರತನಾಟ್ಯದ ಮೂಲಕ ಮಾಡಿರುವುದು ಅವರಿಗೆ ಖುಷಿಕೊಟ್ಟಿದೆಯಂತೆ. ಚಿತ್ರದಲ್ಲಿ ರವಿಚೇತನ್‌ ವಿಲನ್‌ ಆಗಿ ನಟಿಸಿದ್ದಾರೆ. ಚಿತ್ರವನ್ನು ನಾಗರಾಜ್‌ ಮುರುಡೇಶ್ವರ ನಿರ್ಮಿಸಿದ್ದಾರೆ. ಚಿತ್ರಕ್ಕೆ ಪವನ್‌ ಪಾರ್ಥ ಸಂಗೀತ ನೀಡಿದ್ದಾರೆ. ಜೊತೆಗೆ ಎರಡು ಹಾಡುಗಳನ್ನು ಕೂಡಾ ಬರೆದಿದ್ದಾಗಿ ಹೇಳಿಕೊಂಡರು. 

ಇತ್ತೀಚೆಗೆ ಚಿತ್ರದ ಆಡಿಯೋ ಬಿಡುಗಡೆಯಾಯಿತು. ಮಂಡಳಿ ಉಪಾಧ್ಯಕ್ಷ ಉಮೇಶ್‌ ಬಣಕಾರ್‌ ಆಡಿಯೋ ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭಕೋರಿದರು. ಚಿತ್ರ ಜುಲೈನಲ್ಲಿ ತೆರೆಕಾಣಲಿದೆ.

ಟಾಪ್ ನ್ಯೂಸ್

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.