“ಯೋಗ’ ಭಾರತದ ಕೊಡುಗೆ

Team Udayavani, Jun 11, 2018, 10:06 AM IST

bid-2.jpg

ಬೀದರ: ವಿಶ್ವದಲ್ಲಿ ಭಾರತವು ಅತ್ಯಂತ ಶಕ್ತಿಶಾಲಿಯಾಗಿ ಬೆಳೆಯುತ್ತಿದೆ. ಯೋಗ, ಧ್ಯಾನ ಮತ್ತು ಪ್ರಾಣಾಯಾಮದಂತಹ ಅಮೂಲ್ಯ ಕೊಡುಗೆಗಳನ್ನು ವಿಶ್ವಕ್ಕೆ ನೀಡಿದ ಕೀರ್ತಿ ಭಾರತಕ್ಕೆ ಸಲ್ಲುತ್ತದೆ ಎಂದು ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಿಜಲಿಂಗಪ್ಪ ತಗಾರೆ ಹೇಳಿದರು.

ಇಲ್ಲಿನ ಶಿವಾಜಿ ನಗರದಲ್ಲಿ ಆಯುಷ್‌ ಇಲಾಖೆ ನವದೆಹಲಿ, ಕೇಂದ್ರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಸಂಶೋಧನ ಕೇಂದ್ರ ನವದೆಹಲಿ, ಕರುಣಾಮಯ ಯುವಕ ಸಂಘ ಬೀದರ ಮತ್ತು ಕರ್ನಾಟಕ ಜಾನಪದ ಪರಿಷತ್ತು ಬೀದರ ಸಂಯುಕ್ತ ಆಶ್ರಯದಲ್ಲಿ ಜೂ.21ರಂದು ನಡೆಯಲಿರುವ ವಿಶ್ವ ಯೋಗ ದಿನದ ಪ್ರಯುಕ್ತ ಹಮ್ಮಿಕೊಂಡಿದ್ದ ಉಚಿತ ಯೋಗ ತರಬೇತಿ ಶಿಬಿರದ ಉದ್ಘಾಟಿಸಿ ಅವರು ಮಾತನಾಡಿದರು.

ಯೋಗದಿಂದ ಮನುಷ್ಯ ರೋಗಮುಕ್ತನಾಗುತ್ತಾನೆ. ಅಲ್ಲದೆ ಜೀವನದಲ್ಲಿ ಉಲ್ಲಾಸ ಉತ್ಸಾಹ ಇಮ್ಮಡಿಗೊಳ್ಳುತ್ತದೆ. ಒತ್ತಡ ಜೀವನದ ಆಯಾಸ ದೂರ ಮಾಡಿ ಪರಸ್ಪರ ಸೇವಾಭಾವ ಮತ್ತು ರಾಷ್ಟ್ರಪ್ರೇಮದ ಕೆಚ್ಚು ಯೋಗದಿಂದ ಸಿಗುತ್ತದೆ ಎಂದರು. 

ಶಿವಕುಮಾರ ಬಾವಗೆ ಮಾತನಾಡಿ, ಯೋಗ ದಿನ ಭಾರತದ ಹೆಮ್ಮೆ. ಇಂತಹ ಶಾಂತಿಪ್ರಿಯ ಭಾರತ ದೇಶದಲ್ಲಿ ಬುದ್ಧ, ಬಸವ, ಅಂಬೇಡ್ಕರ್‌, ಮೀರಾಬಾಯಿ ಮುಂತಾದವರು ಯೋಗಿಗಳೇ ಆಗಿದ್ದಾರೆ. ಬದುಕು ಮತ್ತು ಬದುಕಲು ಬಿಡು ಎಂಬುದು ಭಾರತದ ಧ್ಯೇಯವಾಕ್ಯವಾಗಿದೆ. ಇಂತಹ ಉನ್ನತ ಆತ್ಮಬಲ ಮನುಷ್ಯನಲ್ಲಿ ಬರಬೇಕಾದರೆ ಅದು ಯೋಗದಿಂದ ಮಾತ್ರ ಸಾಧ್ಯ ಎಂದರು.

ಶಿಬಿರದ ಸಂಯೋಜಕ ಹಾಗೂ ರಾಷ್ಟ್ರೀಯ ಬುಡಕಟ್ಟು ಜನಪದ ಕಲಾ ಪರಿಷತ್ತಿನ ಕಾರ್ಯದರ್ಶಿ ರಾಜಕುಮಾರ ಹೆಬ್ಟಾಳೆ ಮಾತನಾಡಿ, ನಮ್ಮ ನೆಲಮೂಲದ ಸಂಸ್ಕೃತಿ ಉಳಿಸಿ ಬೆಳೆಸುವ ಕಾರ್ಯವನ್ನು ಕರ್ನಾಟಕ ಜಾನಪದ ಪರಿಷತ್ತು ಸುಮಾರು 18 ವರ್ಷಗಳಿಂದ ಮಾಡಿಕೊಂಡು ಬರುತ್ತಿದೆ. ನಮ್ಮ ದೇಶದ ಭವ್ಯ ಸಂಸ್ಕೃತಿಯಲ್ಲಿ ಯೋಗವೂ ಒಂದು. ಈ ಯೋಗ ತರಬೇತಿ ಶಿಬಿರದಿಂದ ಅನೇಕ ಜನರಿಗೆ ಉಪಯೋಗವಾಗುತ್ತಿದೆ. ಆರೋಗ್ಯವೇ ಭಾಗ್ಯ ಎಂಬಂತೆ ಮನುಷ್ಯ ಆರೋಗ್ಯವಾಗಿದ್ದರೆ ಮಾತ್ರ ಜೀವನದಲ್ಲಿ ಏನನ್ನಾದರೂ ಸಾಧಿಸಲು ಸಾಧ್ಯ ಎಂದು ಯೋಗ ಕುರಿತು ವಿವರಿಸಿದರು.

ಸಿದ್ರಾಮಪ್ಪ ಕನೇರಿ, ಸುಭಾಷ ಗಜರೆ, ವೈಜಿನಾಥ ಚಿಮಕೂರೆ, ಎಸ್‌.ಬಿ. ಕುಚಬಾಳ, ಲಕ್ಷ್ಮಣರಾವ್‌ ಕಾಂಚೆ,
ಪ್ರಕಾಶ ಕನ್ನಾಳೆ, ಮಹಾರುದ್ರ ಡಾಕುಳಗಿ, ಸಂಜುಕುಮಾರ ಸ್ವಾಮಿ, ಮೀನಾಕ್ಷಿ ತಗಾರೆ, ರಘುನಾಥರಾವ್‌ ಪಾಂಚಾಳ, ರಾಜಕುಮಾರ ಹೆಬ್ಟಾಳೆ, ವೈಜಿನಾಥರಾವ್‌ ದದ್ದಾಪುರ, ಮಂಗಲಾ ಕನ್ನಾಳೆ, ಸುವರ್ಣಾಬಾಯಿ, ಡಾ| ನೀಲಕಂಠ, ಬಿ.ಕೆ. ಚೌಧರಿ, ಸಂತೋಷ ಇಂಜಿನಿಯರ್‌, ಬಕ್ಕಪ್ಪ ಪಾಪಗೊಂಡ, ಶರಣಪ್ಪ ಕಮಠಾಣೆ, ಸಂಜು ಪಾಟೀಲ, ನಿರಂಕಾರ ಬಂಡಿ, ಚನ್ನಪ್ಪ ಸಂಗೋಳಗಿ ಇದ್ದರು.

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.