ಲಾಲು ಕುಟುಂಬದವರ ನಿರ್ಮಾಣ ಹಂತದ ಮಾಲ್ ಇಡಿ ವಶಕ್ಕೆ
Team Udayavani, Jun 12, 2018, 7:35 PM IST
ಪಟ್ನಾ : ಬಹುಕೋಟಿ ಮೇವು ಹಗರಣದಲ್ಲಿ ಜೈಲು ಪಾಲಾಗಿರುವ ಆರ್ಜೆಡಿ ಮುಖ್ಯಸ್ಥ, ಮಾಜಿ ಬಿಹಾರ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಅವರ ಕುಟುಂಬದವರಿಗೆ ಸೇರಿದ, ನಿರ್ಮಾಣ ಹಂತದಲ್ಲಿರುವ ಮಾಲ್ ಕಟ್ಟಡವೊಂದನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಇಂದು ತಮ್ಮ ವಶಕ್ಕೆ ತೆಗೆದುಕೊಂಡಿರುವುದಾಗಿ ಮಾಧ್ಯಮ ವರದಿಗಳು ತಿಳಿಸಿವೆ.
ಲಾಲು ಮತ್ತು ಅವರ ಕುಟುಂಬದವರಿಗೆ ಸೇರಿದ ಬೇನಾಮಿ ಆಸ್ತಿ ಇದಾಗಿದ್ದು ಇದರ ನಿರ್ಮಾಣ ಕಾರ್ಯವನ್ನು ನಿಲ್ಲಿಸುವಂತೆ ಕೇಂದ್ರ ಸರಕಾರ ವರ್ಷದ ಹಿಂದೆ ಬಿಹಾರ ಸರಕಾರಕ್ಕೆ ನೊಟೀಸ್ ಜಾರಿ ಮಾಡಿತ್ತು.
ಲಾಲು ಪುತ್ರ ಹಾಗೂ ಆರ್ಜೆಡಿ ನಾಯಕನಾಗಿರುವ ತೇಜಸ್ವಿ ಯಾದವ್ ಮಾಲ್ ಉದ್ದೇಶದ ಈ ಕಟ್ಟಡದ ನೀಲಿ ನಕ್ಷೆಗೆ ಸಂಬಂಧಿಸಿದ ಇಲಾಖೆಯಿಂದ ಅನುಮತಿ ಕೂಡ ಪಡೆದುಕೊಂಡಿಲ್ಲ ಎಂದು ಉಪ ಮುಖ್ಯಮಂತ್ರಿಯಾಗಿರುವ ಬಿಜೆಪಿಯ ಸುಶೀಲ್ ಕುಮಾರ್ ಮೋದಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ
Mumbai Airport ; 12.74 ಕೆಜಿ ಚಿನ್ನಾಭರಣ ಜಪ್ತಿ, ಐವರು ಪ್ರಯಾಣಿಕರ ಬಂಧನ
Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ
POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್ ದಾಖಲು
ರಾಹುಲ್ ಸಾಮಾನ್ಯ ಜನರ ಕಷ್ಟ ಕೇಳಿದ್ದಾರೆ, ಆದರೆ ಮೋದಿ ಅರಮನೆಯಲ್ಲಿ ಕುಳಿತಿದ್ದಾರೆ:ಪ್ರಿಯಾಂಕಾ
MUST WATCH
ಹೊಸ ಸೇರ್ಪಡೆ
IPL; ಗುಜರಾತ್ ವಿರುದ್ಧ ಭರ್ಜರಿ ಜಯ: ಆರ್ ಸಿಬಿ ಪ್ಲೇ ಆಫ್ ಕನಸು ಜೀವಂತ
Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು
H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ
BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್
Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ