ಲಿಂಗಸುಗೂರು ಕ್ಷೇತ್ರ ಅಭಿವೃದ್ಧಿಗೆ ಸಹಕಾರ: ಬಯ್ನಾಪುರ

Team Udayavani, Jun 18, 2018, 12:11 PM IST

raichuru-1.jpg

ಲಿಂಗಸುಗೂರು: ನಾನು ಲಿಂಗಸುಗೂರು ಕ್ಷೇತ್ರದಲ್ಲಿ ಮೂರು ಬಾರಿ ಶಾಸಕನಾಗಿ ಆಯ್ಕೆಯಾಗಿದ್ದೇನೆ. ಇಲ್ಲಿನ ಜನತೆಯ ಋಣ ನನ್ನ ಮೇಲಿದೆ. ಕ್ಷೇತ್ರದ ಅಭಿವೃದ್ಧಿಗೆ ಇಲ್ಲಿನ ಶಾಸಕ ಡಿ.ಎಸ್‌.ಹೂಲಗೇರಿ ಅವರಿಗೆ ಸಂಪೂರ್ಣ ಸಹಕಾರ ನೀಡುತ್ತೇನೆ ಎಂದು ಕುಷ್ಟಗಿ ಶಾಸಕ ಅಮರೇಗೌಡ ಬಯ್ನಾಪುರ ಹೇಳಿದರು.

ಪಟ್ಟಣದ ಈಶ್ವರ ದೇವಸ್ಥಾನ ಸಮಿತಿ ವತಿಯಿಂದ ರವಿವಾರ ಈಶ್ವರ ದೇವಸ್ಥಾನದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. 1994ರ ಚುನಾವಣೆಗೂ 2018ರ ಚುನಾವಣೆಗೂ ಅಜಗಜಾಂತರ ವ್ಯತ್ಯಾಸವಾಗಿದೆ. ಜನರ ಭಾವನೆ ಬದಲಾವಣೆಯಾಗಿದೆ. ಚುನಾವಣೆ ಪೂರ್ವ ಪಕ್ಷ, ಚುನಾವಣೆಯಲ್ಲಿ ಗೆದ್ದ ನಂತರ ಅಭ್ಯರ್ಥಿ ಇಡೀ ಕ್ಷೇತ್ರದ ಶಾಸಕರಾಗುತ್ತಾರೆ. ಯಾರೊಂದಿಗೆ ಹಗೆತನ ಸಾಧಿಸಬಾರದು ಎಂದರು.

ಲಿಂಗಸುಗೂರು ಕ್ಷೇತ್ರದಲ್ಲಿ ಮೊದಲ ಬಾರಿಗೆ ಶಾಸಕರಾಗಿದ್ದ ವೇಳೆಯಲ್ಲಿ ನಾರಾಯಣಪುರ ಬಲದಂಡೆ ನಾಲೆ, ರಾಂಪುರ ಏತ ನೀರಾವರಿ ಹಾಗೂ ಮಸ್ಕಿ ನಾಲಾ ಯೋಜನೆಗಳ ಜಾರಿಗೆ ಅಂದಿನ ಮುಖ್ಯಮಂತ್ರಿ ಎಚ್‌.ಡಿ.ದೇವೇಗೌಡರು ನೀಡಿದ ಸಹಕಾರ ಮರೆಯುವಂತಿಲ್ಲ ಎಂದರು.

ಶಾಸಕ ಡಿ.ಎಸ್‌.ಹೂಲಗೇರಿ ಅವರಿಗೆ ಲಿಂಗಸುಗೂರು ತಾಲೂಕು ಅಭಿವೃದ್ಧಿಗೆ ಸಂಪೂರ್ಣ ಸಹಕಾರ ನೀಡುತ್ತೇನೆ.
ಪಟ್ಟಣಕ್ಕೆ ಒಳಚರಂಡಿ ಯೋಜನೆಗೆ 85 ಕೋಟಿ ರೂ.ವೆಚ್ಚಕ್ಕೆ ಅಂದಾಜು ವೆಚ್ಚ ಸಿದ್ಧಪಡಿಸಲಾಗಿದೆ. ಆದರೆ ಮಂಜೂರಾತಿ ದೊರೆಯಲಿಲ್ಲ. ಮಂಜೂರಾತಿಗೆ ಮತ್ತೂಮ್ಮೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದರು.

ಈಶ್ವರ ದೇವಸ್ಥಾನ ಸಮಿತಿ ಅಧ್ಯಕ್ಷ ಡಾ| ಎನ್‌.ಎಲ್‌.ನಡುವಿನಮನಿ ಮಾತನಾಡಿ, ಜನಪ್ರತಿನಿಧಿಗಳು ಜನರ ಕಷ್ಟ-ಸುಖಗಳಿಗೆ ಸ್ಪಂದಿಸಿದರೆ ಅವರ ಹೃದಯದಲ್ಲಿ ಶಾಶ್ವತ ಸ್ಥಾನ ಪಡೆಯುತ್ತಾರೆ ಎನ್ನುವುದಕ್ಕೆ ಅಮರೇಗೌಡ ಬಯ್ನಾಪುರ ಅವರೇ ಸಾಕ್ಷಿಯಾಗಿದ್ದಾರೆ.

 ದಿನದ 24 ಗಂಟೆಯೂ ನಿರಂತರ ಜನ ಸೇವೆಯೇ ಅವರ ಮೂಲ ಉದ್ದೇಶವಾಗಿದೆ. ಪಟ್ಟಣದ ಕರಡಕಲ್‌ ಕೆರೆಗೆ ಬಿಲ್ಲಮರಾಯನ ಕೆರೆ ಎಂದು ನಾಮಕರಣ ಮಾಡಿ ಅದನ್ನು ಅಭಿವೃದ್ಧಿಗೊಳಿಸಬೇಕು ಹಾಗೂ ಒಳಚರಂಡಿ ಯೋಜನೆ ಜಾರಿಗೆ ಲಿಂಗಸುಗೂರು ಶಾಸಕರಿಗೆ ಸಹಕಾರ ನೀಡಬೇಕು ಎಂದು ಕೋರಿದರು.

ಸಂತೆಕೆಲ್ಲೂರು ಶ್ರೀ ಗುರುಬಸವ ಸ್ವಾಮೀಜಿ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಶರಣಪ್ಪ ಮೇಟಿ, ಅಮರಗುಂಡಪ್ಪ ಮೇಟಿ, ಭೂಪನಗೌಡ ಕರಡಕಲ್‌, ಪುರಸಭೆ ಅಧ್ಯಕ್ಷ ಖಾದರ ಪಾಷಾ, ದೇವಸ್ಥಾನ ಸಮಿತಿ ಪದಾಧಿಕಾರಿಗಳಾದ ಡಾ| ಶರಣಗೌಡ, ಮಲ್ಲಿಕಾರ್ಜುನ ವಾರದ, ವೀರೇಶ ಐದನಾಳ, ಮಳೆಪ್ಪ ಉಮ್ಮಗೋಳ ಇತರರು ಇದ್ದರು.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.