ಶಿಕ್ಷಕರ ವರ್ಗಾವಣೆಗೆ ಹೈಕೋರ್ಟ್ ಮಧ್ಯಂತರ ತಡೆ
Team Udayavani, Jun 19, 2018, 6:00 AM IST
ಬೆಂಗಳೂರು: ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗೆ ಹೈಕೋರ್ಟ್ ಸೋಮವಾರ ಮಧ್ಯಂತರ ತಡೆಯಾಜ್ಞೆ ನೀಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಸಿದ್ಧಪಡಿಸಿರುವ ವರ್ಗಾವಣಾ ಪರಿಷ್ಕೃತ ವೇಳಾಪಟ್ಟಿ ಪ್ರಕಟಗೊಂಡಿಲ್ಲ.
ವಿಧಾನಸಭಾ ಚುನಾವಣಾ ನೀತಿ ಸಂಹಿತೆಯಿಂದ ಸ್ಥಗಿತಗೊಂಡಿದ್ದ ವರ್ಗಾವಣೆ ಪ್ರಕ್ರಿಯೆಗೆ ಮರು ಚಾಲನೆ ನೀಡುವಂತೆ ಶಿಕ್ಷಣ ಸಚಿವರು ಸೂಚಿಸಿದ್ದರು. ಅದರಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಜೂ.18ರಿಂದ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್ ನಡೆಸಲು ಬೇಕಾದ ವೇಳಾಪಟ್ಟಿಯನ್ನು ಪ್ರಕಟಿಸಲು ಸಿದ್ಧತೆ ಮಾಡಿಕೊಂಡಿದ್ದರು. ಈ ಮಧ್ಯೆ, ಕೆಲ ಶಿಕ್ಷಕರು ವರ್ಗಾವಣೆ ಪ್ರಕ್ರಿಯೆಯನ್ನು ನಡೆಸದಂತೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ಶಿಕ್ಷಕರ ವರ್ಗಾವಣೆಗೆ ಮಧ್ಯಂತರ ತಡೆಯಾಜ್ಞೆ ನೀಡಿದೆ.
ನ್ಯಾಯಾಲಯ ತಡೆಯಾಜ್ಞೆ ನೀಡಿರುವ ಹಿನ್ನೆಲೆಯಲ್ಲಿ ಶಿಕ್ಷಕರ ವರ್ಗಾವಣೆಯ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಿಲ್ಲ ಎಂದು ಶಿಕ್ಷಣ ಇಲಾಖೆಯ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್ ತೀರ್ಪು
MUST WATCH
ಹೊಸ ಸೇರ್ಪಡೆ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ