ಯಾರು ನೋಡಲಿಯೆಂದು ನಾನು ಹಾಡುವುದಿಲ್ಲ…

Team Udayavani, Jun 20, 2018, 6:00 AM IST

l-13.jpg

ಈಕೆ ಹಾಡುತ್ತಾಳೆಂದರೆ, ಆ ದೇವರು ತನ್ಮಯದಿಂದ ಕೇಳುತ್ತಾ ಹೋಗುತ್ತಾನೆ. ಈ ಯುವತಿ ಹಾಡುವ ಸೋಬಾನೆ ಪದಗಳು ಆತನಿಗೂ ಪ್ರೀತಿ. ಸುಮಾರು 200ಕ್ಕೂ ಹೆಚ್ಚು ಗೀತೆಗಳನ್ನು ತನ್ನ ನೆನಪಿನ ಗಂಟಿನಲ್ಲಿ ಇಟ್ಟುಕೊಂಡಿರುವ ಈಕೆಯನ್ನು ಕಂಡರೆ ಊರಿನವರಿಗೂ ಅಷ್ಟೇ ಪ್ರೀತಿ.

   ಎಲ್ಲ ಹಾಡುಗಾರ್ತಿಯರಂತೆ ಈಕೆಯೂ ಹಾಡಬಲ್ಲಳಷ್ಟೇ ಎಂದರೆ, ಆ ವ್ಯಾಖ್ಯಾನ ಶುದ್ಧ ತಪ್ಪಾದೀತು. ಕಾರಣ, ಈಕೆ ಅಂಧ ಯುವತಿ. ತಾನು ಹಾಡುವ ಹಾಡು ಯಾರನ್ನು ತಲುಪುತ್ತದೋ, ಇಲ್ಲವೋ ಎಂಬುದರ ಬಗ್ಗೆ ಈಕೆ ತಲೆ ಕೆಡಿಸಿಕೊಳ್ಳುವುದೇ ಇಲ್ಲ. ಹಾಗಾಗಿ, ಬಳ್ಳಾರಿ ಜಿಲ್ಲೆಯ ಕೊಟ್ಟೂರು ಸಮೀಪದ ಕೆ. ಅಯ್ಯನಹಳ್ಳಿ ಗ್ರಾಮದಲ್ಲಿ ಪಾರ್ವತಿ ಅಂದ್ರೆ ಎಲ್ಲರಿಗೂ ವಿಶೇಷ ಪ್ರೀತಿ. ಅಲ್ಲಿ ಈಕೆಯ ಹಾಡಿಗೆ ಅಪಾರ ಅಭಿಮಾನಿಗಳೂ ಇದ್ದಾರೆ. ಗ್ರಾಮದಲ್ಲಿ ಜರುಗುವ ಪ್ರತಿ ಶುಭ ಸಮಾರಂಭಗಳಲ್ಲೂ ಅಂಧ ಗಾಯಕಿ ಪಾರ್ವತಿ ಸುಮಧುರವಾಗಿ ಸೋಬಾನೆ ಪದಗಳನ್ನು ಹಾಡುತ್ತಾರೆ. ಮದುವೆ, ನಾಮಕರಣದಂಥ ಶುಭ ಸಮಾರಂಭಗಳಲ್ಲಿ ಈಕೆಯ ಹಾಡುಗಳೇ ಹೈಲೈಟ್‌.

  ಈಕೆ ಭಕ್ತಿಗೀತೆ ಹಾಡುತ್ತಾಳೆಂದರೆ, ಆ ಹಾಡಿಗೆ ದೇವರೂ ಸಂಪ್ರೀತಗೊಳ್ಳುತ್ತಾನೆಂಬ ನಂಬಿಕೆ ಊರಿನವರಲ್ಲಿದೆ. ಭಕ್ತಿಗೀತೆಗಳಲ್ಲಿ ಪ್ರಸ್ತಾಪಗೊಳ್ಳುವ ದೇವರ ಹೆಸರಿನ ಬಗ್ಗೆಯೂ ಇವರು ಆಳವಾಗಿ ಮಾತಾಡಬಲ್ಲರು. ಗ್ರಾಮದಲ್ಲಿ ನಿತ್ಯವೂ ಒಂದೊಂದು ದೇಗುಲಕ್ಕೆ ಹೋಗುತ್ತಾರೆ. ಅಲ್ಲಿ ಭಕ್ತಿಯಿಂದ ದೇವರನ್ನು ಮನಸಾರೆಯಾಗಿ ತನ್ನ ಹಾಡುಗಳ ಮುಖೇನ ಭಜಿಸಿ ಆನಂದಿಸುತ್ತಾರೆ. ಶಿವ ಇವರ ನೆಚ್ಚಿನ ದೇವರಂತೆ.

  “ಸದೃಢ ದೇಹದಲ್ಲಿ ಸದೃಢ ಮನಸ್ಸು’ ಎಂಬ ಮಾತು ಈಕೆಯನ್ನು ನೋಡಿದಾಗ ಸುಳ್ಳಾಗುತ್ತದೆ. ದೈಹಿಕವಾಗಿ ಅನೇಕರು ಸದೃಢರಿದ್ರೂ ಅವರೆಲ್ಲ ಪಾರ್ವತಿಯಂಥ ಪ್ರತಿಭೆಗಳಾಗಿರುವುದಿಲ್ಲ. ಕೇವಲ ಹಾಡಿನ ವಿಚಾರಕ್ಕಷ್ಟೇ ಅಲ್ಲ, ಈಕೆಯ ಗುಣ ನಡತೆಗಳೂ ಎಲ್ಲರಿಗೂ ಪ್ರೇರಣೆ. ಈಕೆ ಯಾವ ಕೆಲಸಕ್ಕೂ ಪರರನ್ನು ಅವಲಂಬಿಸುವುದಿಲ್ಲ. ತನ್ನ ಕೆಲಸವನ್ನು ತಾನೇ ನಿಭಾಯಿಸುತ್ತಾಳೆ. ಅಡುಗೆ ಮನೆಯಲ್ಲಿ ತನ್ನ ತಾಯಿಗೂ ನೆರವಾಗುತ್ತಾಳೆ ಎಂಬುದೇ ಒಂದು ಹೆಮ್ಮೆಯ ಸಂಗತಿ.

  ಒಟ್ಟಿನಲ್ಲಿ ಈಕೆಯನ್ನು ನೋಡಿದರೆ, “ಸಾಧನೆ ಸಾಧಕನ ಸ್ವತ್ತೇ ಹೊರತು ಸೋಮಾರಿಯ ಸ್ವತ್ತಲ್ಲ’ ಎನ್ನುವ ಮಾತು ಸುಳ್ಳಲ್ಲ ಅಂತನ್ನಿಸುತ್ತೆ.

– ಪ್ರದೀಪ ಎಂ.ಬಿ., ಕೊಟ್ಟೂರು

ಟಾಪ್ ನ್ಯೂಸ್

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ

ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.