ಅರ್ಪಾಜೆ ಕೆರೆ ಒತ್ತುವರಿ ಆರೋಪ: ಗಡಿ ಗುರುತಿಗೆ ವಿಳಂಬ

Team Udayavani, Jun 26, 2018, 3:20 AM IST

kadaba-kere-25-6.jpg

ಕಡಬ: ಇಲ್ಲಿನ ಕೋಡಿಂಬಾಳ ಗ್ರಾಮದ ಅರ್ಪಾಜೆಯಲ್ಲಿ ಸರ್ವೆ ನಂ. 33/3ರಲ್ಲಿ  0.62 ಎಕರೆ ವಿಸ್ತೀರ್ಣದಲ್ಲಿರುವ ಸರಕಾರಿ ಕೆರೆಯನ್ನು ಒತ್ತುವರಿ ಮಾಡಿ, ಕೆರೆಯ ಜಮೀನಿನಲ್ಲಿ ಖಾಸಗಿ ವ್ಯಕ್ತಿಗಳು ರಸ್ತೆ ನಿರ್ಮಿಸಿರುವುದರ ವಿರುದ್ಧ ಸ್ಥಳೀಯರು ಜಿಲ್ಲಾಧಿಕಾರಿಗಳಿಗೆ ದೂರು ನೀಡಿ ಹಲವು ತಿಂಗಳು ಕಳೆದರೂ ಯಾವುದೇ ಪ್ರಯೋಜನವಾಗಿಲ್ಲ. ತಿಂಗಳ ಹಿಂದೆ ದೂರಿಗೆ ಸ್ಪಂದಿಸಿದ ಪುತ್ತೂರು ತಹಶೀಲ್ದಾರ್‌ ಅನಂತ ಶಂಕರ ಅವರು, ಕೆರೆಯನ್ನು ಅಳೆದು ಗಡಿ ಗುರುತು ಮಾಡಿ, ಅತಿಕ್ರಮಣ ನಡೆದಿದ್ದರೆ ಕೂಡಲೇ ತೆರವುಗೊಳಿಸುವಂತೆ ಕಡಬ ಕಂದಾಯ ನಿರೀಕ್ಷಕರಿಗೆ ಮೌಖಿಕ ಆದೇಶ ನೀಡಿದ್ದರು. ಅದರಂತೆ ಕಂದಾಯ ನಿರೀಕ್ಷಕರು ಕೆರೆಯನ್ನು ಅಳತೆ ಮಾಡಿ ಗಡಿ ಗುರುತು ಮಾಡಿಕೊಡಲು ಪತ್ರ ಬರೆದಿದ್ದರೂ ಭೂಮಾಪನ ಇಲಾಖೆ ಗಡಿ ಗುರುತು ಮಾಡಿಲ್ಲ. ಕೆರೆಯ ಜಮೀನಿನ ಗಡಿ ಗುರುತು ಮಾಡಲು ಭೂಮಾಪನ ಇಲಾಖೆ ಮುಂದಾಗದಿರುವುದು ಸ್ಥಳೀ ಯರ ಆಕ್ರೋಶಕ್ಕೆ ಕಾರಣವಾಗಿದೆ.

ಪರಿಸರಕ್ಕೆ ನೀರುಣಿಸುತ್ತಿದ್ದ ಕೆರೆ
ಅರ್ಪಾಜೆಯ ಸರಕಾರಿ ಕೆರೆ ಉದೇರಿ, ನಾಲ್ಗುತ್ತು ಹಾಗೂ ಅರ್ಪಾಜೆ ಪರಿಸರದ ಕೃಷಿ ತೋಟಗಳಿಗೆ ಹಾಗೂ ಭತ್ತದ ಗದ್ದೆಗಳಿಗೆ ನೀರುಣಿಸುತ್ತಿತ್ತು. ಪರಿಸರದಲ್ಲಿ ಅಂತರ್ಜಲಮಟ್ಟ ಏರಿಕೆಗೂ ಕಾರಣವಾಗಿತ್ತು. ಆದರೆ ಇದೀಗ ಸದ್ರಿ ಕೆರೆಯಲ್ಲಿ ಮಳೆಗಾಲದಲ್ಲಿಯೂ ನೀರು ನಿಲ್ಲಲು ಅವಕಾಶ ನೀಡುತ್ತಿಲ್ಲ. ಕಾಲುವೆಯನ್ನು 7ರಿಂದ 8 ಅಡಿ ಆಳಗೊಳಿಸಿರುವುದರಿಂದ ನಿರಂತರ ಮಳೆ ಸುರಿದರೂ ಕೆರೆಯಲ್ಲಿ ನೀರು ಸಂಗ್ರಹವಾಗುತ್ತಿಲ್ಲ. ಕೆರೆಯಲ್ಲಿ ನೀರು ನಿಲ್ಲದೇ ಇರುವುದರಿಂದ ಕೆರೆಯು ಬಯಲು ಪ್ರದೇಶದಂತಾಗಿದ್ದು, ಪರಿಸರ ದಲ್ಲಿ ಅಂತರ್ಜಲ ಮಟ್ಟವೂ ಕುಸಿದಿದೆ. ಆದುದರಿಂದ ಕೆರೆಯ ಒತ್ತುವರಿಯನ್ನು ತೆರವುಗೊಳಿಸಿ ಕೆರೆಯ ನೀರು ಹರಿದು ಹೋಗುವ ಕಾಲುವೆಯನ್ನು ಮುಚ್ಚಿಸಿ ಕೆರೆಯನ್ನು ಸಂರಕ್ಷಣೆ ಮಾಡಬೇಕೆಂದು ಡಿಸಿ ನೀಡಿದ ದೂರಿನಲ್ಲಿ ಮನವಿ ಮಾಡಿದ್ದರು.

ಕೃಷಿಕರ ಮನವಿ
ಕೆರೆಯ ಹೂಳೆತ್ತಿ ಅಭಿವೃದ್ಧಿಪಡಿಸಿದರೆ ಮಳೆ ನೀರು ಇಂಗಿ ಪರಿಸರದ ಕೃಷಿ ಚಟುವಟಿಕೆಗಳಿಗೆ ಅನುಕೂಲ. ಬಾವಿಗಳಲ್ಲಿ ನೀರಿನ ಮಟ್ಟ ಏರುತ್ತದೆ. ಅರ್ಪಾಜೆ ಕೆರೆಯನ್ನು ಸ್ವಂತ ಖರ್ಚಿನಲ್ಲಿ ಗ್ರಾಮಸ್ಥರ ನೆರವಿನೊಂದಿಗೆ ಅಭಿವೃದ್ಧಿಪಡಿಸಲು ತಾಂತ್ರಿಕ ಅನುಮತಿ ನೀಡುವಂತೆ ಕೃಷಿಕ ಚಾಕೋ ಫಿಲಿಪ್‌ ಕಡಬ ಗ್ರಾ.ಪಂ. ಹಾಗೂ ತಹಶೀಲ್ದಾರರಿಗೆ ಮನವಿ ಸಲ್ಲಿಸಿದ್ದರು. ಆದರೆ ಕೆರೆಯ ಗಡಿ ಗುರುತು ಆಗದೆ ಅವರ ಮನವಿಗೆ ಇಲಾಖೆಗಳಿಂದೂ ಯಾವುದೇ ಪೂರಕ ಸ್ಪಂದನೆ ಸಿಕ್ಕಿಲ್ಲ.

ಅಭಿವೃದ್ಧಿಗೆ ಉತ್ಸುಕ
ಕೆರೆಯನ್ನು ಅಭಿವೃದ್ಧಿಪಡಿಸಲು ಅನುಮತಿ ನೀಡುವಂತೆ ಕೃಷಿಕ ಚಾಕೋ ಫಿಲಿಪ್‌ ಅವರು ಪಂಚಾಯತ್‌ಗೆ ಮನವಿ ಸಲ್ಲಿಸಿದ್ದಾರೆ. ಕೆರೆಗಳನ್ನು ಅಭಿವೃದ್ಧಿಪಡಿಸಲು ಪಂಚಾಯತ್‌ ಉತ್ಸುಕವಾಗಿದೆ. ಆದರೆ ಕೆರೆಯ ಗಡಿ ಗುರುತು ಆದ ಬಳಿಕವಷ್ಟೇ ನಾವು ಮುಂದುವರಿಯಲು ಸಾಧ್ಯ. ಕಂದಾಯ ಇಲಾಖೆಯಿಂದ ಕೆರೆಯನ್ನು ಅಳೆದುಕೊಡುವಂತೆ ಭೂಮಾಪನ ಇಲಾಖೆಗೆ ಪತ್ರ ಬರೆಯಲಾಗಿದೆ. ನಾವೂ ಪ್ರತ್ಯೇಕ ಪತ್ರ ಬರೆದಿದ್ದೇವೆ.
– ಚೆನ್ನಪ್ಪ ಗೌಡ ಕಜೆಮೂಲೆ, ಕಡಬ ಪಿಡಿಒ

— ನಾಗರಾಜ್‌ ಎನ್‌.ಕೆ.

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.