ಐ ಲವ್‌ ಯೂ ಟೀಂಗೆ ಗುಳ್ಟು ಸೋನು


Team Udayavani, Jun 26, 2018, 11:14 AM IST

sonu-1.jpg

ನಟಿ ಸೋನು ಅವರ “ಗುಳ್ಟು’ ಚಿತ್ರ ಒಂದು ವಿಭಿನ್ನ ಪ್ರಯೋಗದ ಚಿತ್ರವಾಗಿ ಪ್ರೇಕ್ಷಕರ ಮೆಚ್ಚುಗೆ ಗಳಿಸಿತ್ತು. ಈ ಚಿತ್ರದಲ್ಲಿನ ಸೋನು ಅವರ ಪಾತ್ರವನ್ನೂ ಜನ ಇಷ್ಟಪಟ್ಟಿದ್ದರು. ಆ ಚಿತ್ರದ ನಂತರ ಸೋನುಗೆ ಸಾಕಷ್ಟು ಅವಕಾಶಗಳು ಹುಡುಕಿಕೊಂಡು ಬಂದುವು. ಆದರೆ, ಸೋನು ಮಾತ್ರ ವಿಭಿನ್ನ ಪಾತ್ರದ ನಿರೀಕ್ಷೆಯಲ್ಲಿದ್ದ ಕಾರಣ ಯಾವ ಸಿನಿಮಾವನ್ನು ಒಪ್ಪಿಕೊಂಡಿರಲಿಲ್ಲ. ಈಗ ಸೋನು ಸದ್ದಿಲ್ಲದೇ ಸಿನಿಮಾವೊಂದನ್ನು ಒಪ್ಪಿಕೊಂಡಿದ್ದಾರೆ.

ಅದು ಉಪೇಂದ್ರ ಅಭಿನಯದ “ಐ ಲವ್‌ ಯೂ’ ಚಿತ್ರ. “ಐ ಲವ್‌ ಯೂ’ ಚಿತ್ರದಲ್ಲಿ ರಚಿತಾ ರಾಮ್‌ ನಾಯಕಿಯಾಗಿರುವುದು ನಿಮಗೆ ಈಗಾಗಲೇ ಗೊತ್ತಿದೆ. ಹೀಗಿರುವಾಗ ಸೋನು ಗೌಡ ಅವರ ಪಾತ್ರವೇನು ಎಂದು ನೀವು ಕೇಳಬಹುದು. ಚಿತ್ರದಲ್ಲಿ ನಾಯಕಿಯ ಜೊತೆಗೆ ಮತ್ತೂಂದು ಪಾತ್ರ ಕೂಡಾ ಪ್ರಮುಖವಾಗಿದ್ದು, ಈಗ ಆ ಪಾತ್ರವನ್ನು ಸೋನು ಮಾಡುತ್ತಿದ್ದಾರೆ. ಹಾಗಾಗಿ ಸೋನು ಈ ಚಿತ್ರದ ಮತ್ತೂಬ್ಬ ನಾಯಕಿಯಾಗಿ ನಟಿಸುತ್ತಿದ್ದಾರೆ.

ಈಗಾಗಲೇ ಅವರ ಭಾಗದ ಚಿತ್ರೀಕರಣ ಸೋಮವಾರದಿಂದಲೇ ಆರಂಭವಾಗಿದ್ದು, ರುಪ್ಪೀಸ್‌ ರೆಸಾರ್ಟ್‌ನಲ್ಲಿ ಚಿತ್ರೀಕರಣ ನಡೆಯುತ್ತಿದೆ. ಸಿನಿಮಾದಲ್ಲಿ ಸೋನು ಹಾಗೂ ಉಪೇಂದ್ರ ಅವರ ಕಾಂಬಿನೇಶನ್‌ನಲ್ಲಿ ಸಾಕಷ್ಟು ದೃಶ್ಯಗಳಿದ್ದು, ಇದನ್ನು ಚಿತ್ರೀಕರಿಸಿಕೊಳ್ಳುತ್ತಿದ್ದಾರೆ ನಿರ್ದೇಶಕ ಆರ್‌.ಚಂದ್ರು. ಉಪೇಂದ್ರ ಅವರ ಇಂಟ್ರೋಡಕ್ಷನ್‌ನ ಆ್ಯಕ್ಷನ್‌ ದೃಶ್ಯಗಳೊಂದಿಗೆ ಉಪೇಂದ್ರ “ಐ ಲವ್‌ ಯೂ’ ಚಿತ್ರೀಕರಣ ಆರಂಭವಾಗಿದ್ದು, ಸಪೋಟ ಗಾರ್ಡನ್‌ ಹಾಗೂ ನೈಸ್‌ ರೋಡ್‌ ಸುತ್ತಮುತ್ತ ಚಿತ್ರೀಕರಣ ಮಾಡಲಾಗಿದೆ.

ಅಂದಹಾಗೆ, ನಿರ್ದೇಶಕ ಚಂದ್ರು ಈ ಚಿತ್ರದ ಮೂಲಕ ಪ್ರೀತಿಗೆ ಹೊಸ ವ್ಯಾಖ್ಯಾನ ನೀಡಲಿದ್ದಾರಂತೆ. ಇದು “ಎ’, “ಉಪೇಂದ್ರ’ ಹಾಗೂ “ಪ್ರೀತ್ಸೆ’ ಶೈಲಿಯ ಲವ್‌ಸ್ಟೋರಿಯಾಗಿದ್ದು, ಉಪೇಂದ್ರ ಅವರ ಪಾತ್ರ ಕೂಡಾ ವಿಭಿನ್ನವಾಗಿದೆಯಂತೆ. ಉಪೇಂದ್ರ ಈ ಹಿಂದೆ ತಮ್ಮ “ಎ’ ಸಿನಿಮಾದಲ್ಲಿ, “ಈ ಪ್ರೀತಿ ಪ್ರೇಮ ಎಲ್ಲಾ ಪುಸ್ತಕದ ಬದ್ನೇಕಾಯಿ’ ಎಂದಿದ್ದರು.

ಆದರೆ, ಈಗ 15 ವರ್ಷಗಳ ನಂತರ ಉಪೇಂದ್ರ ಅವರು, ಅದೇ ಪ್ರೀತಿ ಬಗ್ಗೆ ಹೊಸ ಅಂಶವನ್ನು ಹೇಳಲಿದ್ದಾರಂತೆ. ಬೆಂಗಳೂರು, ಮಂಗಳೂರು ಹಾಗೂ ಹೈದರಾಬಾದ್‌ನಲ್ಲಿ ಚಿತ್ರೀಕರಣ ನಡೆಯಲಿದ್ದು, ಹಾಡುಗಳಿಗೆ ಚಿತ್ರತಂಡ ವಿದೇಶಕ್ಕೆ ತೆರಳಲಿದೆ. ಚಿತ್ರದಲ್ಲಿ ಪ್ರದೀಪ್‌ ರಾವತ್‌, ಶಯ್ನಾಜಿ ಶಿಂಧೆ, ರವಿಕಾಳೆ, ರವಿಶಂಕರ್‌ ಸೇರಿದಂತೆ ಅನೇಕರು ನಟಿಸುತ್ತಿದ್ದಾರೆ. ಈ ಚಿತ್ರದ ನಿರ್ದೇಶನದ ಜೊತೆಗೆ ನಿರ್ಮಾಣ ಕೂಡಾ ಚಂದ್ರು ಅವರದ್ದೇ. 

ಟಾಪ್ ನ್ಯೂಸ್

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

1-lorry

West Bengal;ಝಾರ್ಖಂಡ್‌ನಿಂದ ಬರುವ ವಾಹನಕ್ಕೆ ನಿಷೇಧ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

1-uu

‘U-WIN’ ಪೋರ್ಟ್‌ಲ್‌ಗೆ ಅಕ್ಟೋಬರ್‌ನಲ್ಲಿ ಚಾಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Priya Shatamarshan spoke about her fame after Bheema movie

Priya Shatamarshan: ಇನ್ಸ್ ಪೆಕ್ಟರ್‌ ಗಿರಿಜಾ ರಿಪೋರ್ಟಿಂಗ್‌ ಸಾರ್‌..

Vijaya Bhaskar: ಹೊಸತನಕ್ಕೆ ಹಂಬಲಿಸಿದ ಸ್ವರ ಸಾಮ್ರಾಟ

Vijaya Bhaskar: ಹೊಸತನಕ್ಕೆ ಹಂಬಲಿಸಿದ ಸ್ವರ ಸಾಮ್ರಾಟ

Karki kananda movie

Karki Movie: ಹಳ್ಳಿ ಹುಡುಗನ ಹೋರಾಟದ ಹಾದಿ

Family drama ‘Langoti Man’ hits screens today

Langoti Man: ಫ್ಯಾಮಿಲಿ ಡ್ರಾಮಾ ʼಲಂಗೋಟಿ ಮ್ಯಾನ್‌ʼ ಇಂದು ತೆರೆಗೆ

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

1-lorry

West Bengal;ಝಾರ್ಖಂಡ್‌ನಿಂದ ಬರುವ ವಾಹನಕ್ಕೆ ನಿಷೇಧ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.