ಆರ್‌ಟಿಇ ವಿದ್ಯಾರ್ಥಿಗಳಿಂದ ಶುಲ್ಕ : ದೂರು


Team Udayavani, Jun 28, 2018, 11:11 AM IST

right-education-min.png

ಪುತ್ತೂರು: ಆರ್‌ಟಿಇ ಅಡಿ ಉಚಿತ ಶಿಕ್ಷಣಕ್ಕೆ ಆಯ್ಕೆ ಆಗಿರುವ ವಿದ್ಯಾರ್ಥಿಗಳಿಂದ ಕೆಲವು ಖಾಸಗಿ ಶಾಲೆಗಳು ಶುಲ್ಕ ವಸೂಲಿ ಮಾಡುತ್ತಿರುವುದು ಬೆಳಕಿಗೆ ಬಂದಿದೆ. 

ಜಿಲ್ಲೆಯ ಕೆಲವು ಶಾಲೆಗಳು ಶಿಕ್ಷಣ ಹಕ್ಕು ಕಾಯ್ದೆಯನ್ನು ಉಲ್ಲಂಘಿಸಿದ ಆರೋಪ ಕೇಳಿ ಬರುತ್ತಿದೆ. ಶಿಕ್ಷಣ ಹಕ್ಕು ಕಾಯ್ದೆ ಅಡಿ 6ರಿಂದ 14 ವರ್ಷದೊಳಗಿನ ಮಕ್ಕಳಿಗೆ ಶಿಕ್ಷಣ ಕಡ್ಡಾಯ. ಇದರಡಿ ಖಾಸಗಿ ಶಾಲೆಗಳು ಆಯಾ ಗ್ರಾಮ ಅಥವಾ ವಾರ್ಡ್‌ ವ್ಯಾಪ್ತಿಯ ಬಡ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿಕೊಂಡು, ಶಿಕ್ಷಣ ನೀಡಬೇಕು. ಇದರ ವೆಚ್ಚವನ್ನು ಸರಕಾರ ಭರಿಸುತ್ತದೆ. ಖಾಸಗಿ ಶಾಲೆಗಳು ಶೇ. 25ರಷ್ಟು ಸೀಟುಗಳನ್ನು ಇಂಥ ವಿದ್ಯಾರ್ಥಿಗಳಿಗಾಗಿ ಮೀಸಲಿಡಬೇಕು. ಇದಕ್ಕಾಗಿ ಈ ಬಾರಿ ರಾಜ್ಯ ಸರಕಾರ 500 ಕೋಟಿ ರೂ.ಗಳನ್ನು ಮೀಸಲಿಟ್ಟಿದ್ದು, ಓರ್ವ ವಿದ್ಯಾರ್ಥಿಗೆ ಹನ್ನೊಂದೂವರೆ ಸಾವಿರ ರೂ. ನಂತೆ ಪಾವತಿಸುತ್ತಿದೆ. ಇದಲ್ಲದೇ ವಿದ್ಯಾರ್ಥಿಗಳಿಂದ ಯಾವುದೇ ಹಣವನ್ನು ಪಡೆಯುವಂತಿಲ್ಲ.

ಆದರೆ ಕೆಲವು ಶಾಲೆಗಳು ಈ ನಿಯಮವನ್ನು ಉಲ್ಲಂಸಿ, ಬಡ ವಿದ್ಯಾರ್ಥಿಗಳ ಕುಟುಂಬಗಳಿಂದ 10 ಸಾವಿರ ರೂ.ಸಂಗ್ರಹಿಸುತ್ತಿರುವುದು ಬೆಳಕಿಗೆಬಂದಿದೆ.

 
ಬಿಳಿ ಚೀಟಿ ವ್ಯವಹಾರ
ದಾಖಲಾತಿ ವೇಳೆ 5,000  ರೂ. ನೀಡು ವಂತೆ ಬಿಳಿಚೀಟಿ ನೀಡಲಾಗಿದೆ. ಮುಗ್ಧ ಪೋಷಕರು ಪಾವತಿಸಿದ್ದಾರೆ. ಕೆಲವು ದಿನಗಳಲ್ಲಿ ವಿದ್ಯಾರ್ಥಿಗಳ ಮೂಲಕ ಮತ್ತೂಂದು ಚೀಟಿ ಕಳುಹಿಸಲಾಗಿದೆ. ಇದರಲ್ಲಿ 5,450 ರೂ. ಪಾವತಿಸುವಂತೆ ಸೂಚಿಸಿದ್ದು, ಇದು ಸ್ಟೇಷನರಿ, ಸಮವಸ್ತ್ರಗಳಿಗೆ ಎಂದು ನಮೂದಿಸಲಾಗಿದೆ. ಸಾಮಾನ್ಯ ದಾಖಲಾತಿಯಲ್ಲಿ ಆಯ್ಕೆಯಾದ ವಿದ್ಯಾರ್ಥಿಯಿಂದ ಒಟ್ಟೂ 16 ಸಾವಿರ ರೂ.ಗಳಷ್ಟು ಶುಲ್ಕವನ್ನು ಶಾಲೆಗಳು ಸಂಗ್ರಹಿಸುತ್ತಿವೆ. ಆರ್‌ಟಿಇ ವಿದ್ಯಾರ್ಥಿಗಳಿಗೆ ಈ ಹೆಚ್ಚುವರಿ ಶುಲ್ಕವನ್ನು ವಸೂಲು ಮಾಡುತ್ತಿರುವ ಬಗ್ಗೆ ಆಕ್ರೋಶ ವ್ಯಕ್ತವಾಗುತ್ತಿದೆ.
ಒಟ್ಟು 10 ವರ್ಷ ಆರ್‌ಟಿಇ ಅಡಿ ವಿದ್ಯಾರ್ಥಿ ಉಚಿತ ಶಿಕ್ಷಣ ಪಡೆಯಬಹುದು. ಓದುವ ಪುಸ್ತಕಗಳನ್ನು ಕೂಡ ಉಚಿತವಾಗಿಯೇ ನೀಡಲಾಗುತ್ತಿದೆ. ಮಧ್ಯಾಹ್ನ ನೀಡುವ ಊಟದ ಬಗ್ಗೆ ಒಂದಷ್ಟು ಹಣವನ್ನು ಮಾತ್ರ ಶಾಲೆಗಳು ವಸೂಲು ಮಾಡಬಹುದಾಗಿದ್ದು, ಇದು ಕಡ್ಡಾಯವಲ್ಲ.

ಶಾಲಾ- ಕಾಲೇಜುಗಳ ಡೊನೇಷನ್‌, ಶುಲ್ಕ ಪಾವತಿಗೆ ಕಂಪ್ಯೂಟರೀಕೃತ ಅಥವಾ ಮುದ್ರಿತ ರಶೀದಿ ನೀಡಲಾಗುತ್ತಿದೆ. ಆದರೆ ಆರ್‌ಟಿಇ ಅಡಿ ಸೇರಿದ ವಿದ್ಯಾರ್ಥಿಗಳಿಂದ ಸಂಗ್ರಹಿಸುತ್ತಿರುವ ಹೆಚ್ಚುವರಿ ಶುಲ್ಕಕ್ಕೆ ಇಂತಹ ರಶೀದಿ ನೀಡುತ್ತಿಲ್ಲ. ಬದಲಿಗೆ ಬಿಳಿಚೀಟಿಯಲ್ಲಿ ಸಹಿ, ಸೀಲ್‌ ಹಾಕಿ ನೀಡಲಾಗುತ್ತಿದೆ.

ಬಿಇಒಗೆ ದೂರು: ತಾಲೂಕಿನ ಶಾಲೆಯೊಂದರ ವಿರುದ್ಧ ಕ್ಷೇತ್ರ ಶಿಕ್ಷಣಾಧಿಕಾರಿಗೆ ದೂರು ನೀಡಲಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಕ್ಷೇತ್ರ ಶಿಕ್ಷಣಾಧಿಕಾರಿ, ದೂರು ಬಂದಿದೆ. ತತ್‌ಕ್ಷಣ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

ಆರ್‌ಟಿಇ ಅಡಿ ಆಯ್ಕೆಗೊಂಡ ವಿದ್ಯಾರ್ಥಿಯಿಂದ ಯಾವುದೇ ಶುಲ್ಕವನ್ನು ಖಾಸಗಿ ವಿದ್ಯಾಸಂಸ್ಥೆ ಪಡೆದುಕೊಳ್ಳುವಂತಿಲ್ಲ. ಆ ಹಣವನ್ನು ಸರಕಾರ ಪಾವತಿಸುತ್ತದೆ. ಪಠ್ಯಪುಸ್ತಕವನ್ನು ಉಚಿತವಾಗಿಯೇ ನೀಡಲಾಗುತ್ತದೆ. ಪ್ರಕರಣವಿದ್ದರೆ ತನಿಖೆ ನಡೆಸಲಾಗುವುದು.
-ವೈ. ಶಿವರಾಮಯ್ಯ,  ಡಿಡಿಪಿಐ

ಟಾಪ್ ನ್ಯೂಸ್

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

11-udupi

Udupi: ಬಸ್‌ ಢಿಕ್ಕಿ: ಮಹಿಳೆಗೆ ಗಾಯ

10-manipal

Manipal: ಕಾರು ಖರೀದಿಸಿ ಹಣ ನೀಡದೆ ವಂಚನೆ

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-

Charmadi ಘಾಟ್‌ನಲ್ಲಿ ಟಾಟಾ ಏಸ್‌ ಪಲ್ಟಿ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

11-udupi

Udupi: ಬಸ್‌ ಢಿಕ್ಕಿ: ಮಹಿಳೆಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.