ಅಧಿಕಾರ ಉಳಿಸಿಕೊಳ್ಳೋದು ಅನಿವಾರ್ಯ


Team Udayavani, Jun 29, 2018, 6:00 AM IST

parameshwar.gif

ಬೆಂಗಳೂರು: ಸಮ್ಮಿಶ್ರ ಸರ್ಕಾರದಲ್ಲಿ ಅಧಿಕಾರ ಉಳಿಸಿಕೊಳ್ಳುವುದು ಕಾಂಗ್ರೆಸ್‌ಗೆ ಅನಿವಾರ್ಯ ಎಂದು ಕೆಪಿಸಿಸಿ
ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಸಚಿವರಿಗೆ ಕಿವಿ ಮಾತು ಹೇಳಿದ್ದಾರೆ.

ಸಮ್ಮಿಶ್ರ ಸರ್ಕಾರದಲ್ಲಿ ನಡೆಯುತ್ತಿರುವ ಇತ್ತೀಚಿನ ಬೆಳವಣಿಗೆಗಳ ಕುರಿತು ಚರ್ಚಿಸಲು ಗುರುವಾರ ದಿಢೀರ್‌ ಸಭೆ ಕರೆದ ಅವರು, ಸಚಿವರು ಅನಗತ್ಯ ವಿಚಾರಗಳ ಬಗ್ಗೆ ತಲೆ ಕೆಡಿಸಿಕೊಂಡು ಮಾಧ್ಯಮಗಳ ಮುಂದೆ ಹೇಳಿಕೆಗಳನ್ನು ನೀಡದೆ, ತಮಗೆ ವಹಿಸಿರುವ ಇಲಾಖೆಗಳ ಬಗ್ಗೆ ಗಮನ ಹರಿಸುವಂತೆ ಸೂಚಿಸಿದರು.

ರಾಜ್ಯದ ಎಲ್ಲ ಬೆಳವಣಿಗೆಗಳನ್ನು ಹೈಕಮಾಂಡ್‌ ಗಮನಿಸುತ್ತಿದ್ದು, ಸಚಿವರು ಯಾರೂ ಸಿದ್ದರಾಮಯ್ಯನವರ ಹೇಳಿಕೆಗಳನ್ನು ಸಮರ್ಥಿಸದಂತೆ ಪರಮೇಶ್ವರ್‌ ತಾಕೀತು ಮಾಡಿದ್ದಾರೆಂದು ಹೇಳಲಾಗುತ್ತಿದೆ. ಲೋಕಸಭೆ ಚುನಾವಣೆ ಹತ್ತಿರ ಬರುತ್ತಿರುವುದರಿಂದ ಸಚಿವರು ತಮ್ಮ ಜಿಲ್ಲೆಗಳಲ್ಲಿ ಕಾರ್ಯಕರ್ತರು ಮತ್ತು ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡಬೇಕು.

ರಾಜಕೀಯ ಬೆಳವಣಿಗೆಗಳ ಬಗ್ಗೆ ಮಾಧ್ಯಮಗಳಲ್ಲಿ ಬರುವ ವರದಿಗಳಿಗೆ ಪ್ರತಿಕ್ರಿಯೆ ನೀಡಬಾರದು ಎಂದು ತಾಕೀತು ಮಾಡಿದ್ದಾರೆ ಎನ್ನಲಾಗಿದೆ.

ಹೈಕಮಾಂಡ್‌ ರಾಷ್ಟ್ರದ ಹಿತದೃಷ್ಟಿಯಿಂದ ಜೆಡಿಎಸ್‌ ಜತೆಗೆ ಹೊಂದಾಣಿಕೆ ಮಾಡಿಕೊಂಡಿದ್ದು, ರಾಜ್ಯದಲ್ಲಿ ಅಧಿಕಾರ ಉಳಿಸಿಕೊಳ್ಳುವುದು ಅನಿವಾರ್ಯವಾಗಿದೆ. ಜೆಡಿಎಸ್‌ಗಿಂತ ಕಾಂಗ್ರೆಸ್‌ಗೆ ಈ ಮೈತ್ರಿ ಅನಿವಾರ್ಯ.

ಬಿಜೆಪಿಯವರು ಈ ಸರ್ಕಾರ ಪತನಗೊಳ್ಳುವುದಕ್ಕಾಗಿ ಕಾದು ಕೂತಿದ್ದಾರೆ. ಆದರೂ ನಮ್ಮ ನಾಯಕರು ಹೇಳಿ 
ಕೆಗಳನ್ನು ನೀಡುವುದನ್ನು ಬಿಡುತ್ತಿಲ್ಲ ಎಂದು ಪರಮೇಶ್ವರ್‌ ಬೇಸರ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗಿದೆ.

ಮುಂದಿನವಾರ ವಿಧಾನಮಂಡಲ ಅಧಿವೇಶನ ಆರಂಭವಾಗುತ್ತಿದೆ. ಈ ಸಂದರ್ಭದಲ್ಲಿ ಎಲ್ಲ ಸಚಿವರೂ ಒಗ್ಗಟ್ಟು ಪ್ರದರ್ಶಿಸುವ ಅವಶ್ಯಕತೆಯಿದೆ. ಹೀಗಾಗಿ ಎಲ್ಲರೂ ಒಟ್ಟಾಗಿ ಇರುವಂತೆ ಸೂಚಿಸಿದ್ದಾರೆ.

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಪಕ್ಷದ ಹೈಕಮಾಂಡ್‌ ಒಂದು ದಿನವೂ ತೊಂದರೆ ಕೊಟ್ಟಿಲ್ಲ. ಈಗ
ಹೈಕಮಾಂಡ್‌ ಹಿನ್ನಡೆ ಅನುಭವಿಸುತ್ತಿದೆ. ಇಂತಹ ಸಂದರ್ಭದಲ್ಲಿ ಸಿದ್ದರಾಮಯ್ಯ ಈ ರೀತಿ ನಡೆದುಕೊಳ್ಳುವುದು ಸರಿಯಲ್ಲ ಎಂದು ಅಸಮಾಧಾನ ಹೊರ ಹಾಕಿದ್ದಾರೆ ಎಂದು ತಿಳಿದು ಬಂದಿದೆ.

ಕಾರ್ಯತಂತ್ರ: ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಪರಮೇಶ್ವರ್‌, ಲೋಕಸಭೆ ಚುನಾವಣೆ 
ಯಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಬಗ್ಗೆ ರಣತಂತ್ರ ರೂಪಿಸುವ ಕುರಿತು ಚರ್ಚಿಸಲು ಸಚಿವರ ಸಭೆ ಕರೆದಿದ್ದೆ. ಎಐಸಿಸಿ ನೀಡಿರುವ ಸೂಚನೆಗಳನ್ನು ಸಚಿವರಿಗೆ ನೀಡಲಾಗಿದೆ. ಮೈತ್ರಿ ಸರ್ಕಾರದಲ್ಲಿನ ಕೆಲವು ಗೊಂದಲಗಳ ಬಗ್ಗೆ ಸಚಿವರು ಹೇಳಿಕೊಂಡಿದ್ದು, ಮುಖ್ಯಮಂತ್ರಿ ಕುಮಾರಸ್ವಾಮಿ ಗಮನಕ್ಕೆ ತಂದು, ಜಿಲ್ಲಾ ಉಸ್ತುವಾರಿ ಸಚಿವರನ್ನು ಶೀಘ್ರವೇ ನೇಮಕ ಮಾಡಲಾಗುವುದು.

ಲೋಕಸಭೆ ಚುನಾವಣೆಗೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ. ಅಲ್ಲದೆ, ಸಿದ್ದರಾಮಯ್ಯ
ಅವರ ಹೇಳಿಕೆ ಬಗ್ಗೆ ಸಚಿವರು ಯಾರೂ ಹೇಳಿಕೆಗಳನ್ನು ನೀಡದಂತೆ ಸೂಚಿಸಲಾಗಿದೆ ಎಂದರು.

ಖಾಲಿ ಇರುವ ಆರು ಸ್ಥಾನಗಳನ್ನು ಭರ್ತಿ ಮಾಡಲು ಹೈಕಮಾಂಡ್‌ ಸೂಚನೆ ನೀಡಿದೆ. ಯಾವಾಗ ಬೇಕಾದರೂ
ಸಂಪುಟ ವಿಸ್ತರಣೆಯಾಗ ಬಹುದು. ಶೀಘ್ರವೇ ನಿಗಮ ಮಂಡಳಿ ಅಧ್ಯಕ್ಷರ ನೇಮಕ ಮಾಡುತ್ತೇವೆ ಎಂದರು.

1ರಂದು ಸಮನ್ವಯ ಸಮಿತಿ ಸಭೆ: ಸಮ್ಮಿಶ್ರ ಸರ್ಕಾರದಲ್ಲಿನ ಗೊಂದಲ, ಬಜೆಟ್‌ ಮಂಡನೆ ಬಗ್ಗೆ ಚರ್ಚಿಸಲು ಜುಲೈ 1 ರಂದು ಸಮನ್ವಯ ಸಮಿತಿ ಸಭೆ ನಡೆಸಲು ಆಲೋಚಿಸಲಾಗಿದೆ. ಸಮಯ ಇನ್ನೂ ನಿಗದಿಯಾಗಿಲ್ಲ. ಪಕ್ಷದ ರಾಜ್ಯಾಧ್ಯಕ್ಷರ ನೇಮಕ ವಿಚಾರದಲ್ಲಿ ಹೈಕಮಾಂಡ್‌ ತೀರ್ಮಾನ ತೆಗೆದುಕೊಳ್ಳಲಿದೆ. ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದ ದಿನೇಶ್‌ ಗುಂಡೂರಾವ್‌ ಬೇಸರಗೊಂಡು ವಿದೇಶಕ್ಕೆ ಹೋಗಿ ದ್ದಾರೆಂಬ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದರು.

ಮುಖ್ಯ ಕಾರ್ಯದರ್ಶಿ ರತ್ನಪ್ರಭಾ ಅವರ ಅವಧಿ ವಿಸ್ತರಣೆಗೆ ಮುಖ್ಯಮಂತ್ರಿ ಆಕ್ಷೇಪ ವ್ಯಕ್ತಪಡಿಸಿರುವ ಬಗ್ಗೆ ಮಾಹಿತಿ ಇಲ್ಲ. ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಲು ಸಂಪುಟ ಮುಖ್ಯಮಂತ್ರಿಗೆ ಅಧಿಕಾರ ನೀಡಿದೆ. ಅವರು ಯಾವ ಕಾರಣಕ್ಕೆ ರತ್ನಪ್ರಭಾ ಅವರ ಅಧಿಕಾರ ವಿಸ್ತರಣೆ ಮಾಡಲಿಲ್ಲ ಎನ್ನುವುದು ಗೊತ್ತಿಲ್ಲ.
– ಡಾ.ಜಿ. ಪರಮೇಶ್ವರ್‌, ಉಪ ಮುಖ್ಯಮಂತ್ರಿ

ಸಿದ್ದರಾಮಯ್ಯ ನಮ್ಮ ನಾಯಕ. ಅವರನ್ನು ನೋಡಲು ಹತ್ತಲ್ಲ, ಹದಿನೈದು ಜನ ಧರ್ಮಸ್ಥಳಕ್ಕೆ ಹೋಗಿದ್ದೆವು. ಪಕ್ಷದಲ್ಲಿ ಆಂತರಿಕ ಪ್ರಜಾಪ್ರಭುತ್ವ ಇದೆ. ನಮ್ಮ ನಾಯಕರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿದೆ?
– ರಮೇಶ್‌ ಜಾರಕಿಹೊಳಿ, ಪೌರಾಡಳಿತ ಸಚಿವ

ಮೈತ್ರಿ ಸರ್ಕಾರ ಸುಗಮವಾಗಿ ಸಾಗುವ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು. ಪಕ್ಷ ಬಲಪಡಿಸುವ ಬಗ್ಗೆ ಮಾತ್ರ ಚರ್ಚೆಯಾಗಿದೆ. ಸಿದ್ದರಾಮಯ್ಯ ವಿಚಾರವಾಗಿ ಏನೂ ಮಾತನಾಡಿಲ್ಲ.
– ಯು.ಟಿ ಖಾದರ್ ನಗರಾಭಿವೃದ್ಧಿ ಸಚಿವ

ಟಾಪ್ ನ್ಯೂಸ್

Lokayukta

Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

air india

Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta

Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

1-wewqewq

Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

1-xdx

Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Lokayukta

Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

1-wewqewq

Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.