ಕ್ವಿಂಟಲ್ ಭತ್ತಕ್ಕೆ ಬೆಂಬಲ ಬೆಲೆ 200 ಏರಿಕೆ?
Team Udayavani, Jul 2, 2018, 11:57 AM IST
ನವದೆಹಲಿ: ದೇಶದ ಪ್ರಮುಖ ಬೆಳೆಯಾಗಿರುವ ಭತ್ತಕ್ಕೆ ಕ್ವಿಂಟಲ್ಗೆ 200 ರೂ. ಕನಿಷ್ಠ ಬೆಂಬಲ ಬೆಲೆಯನ್ನು ಕೇಂದ್ರ ಸರ್ಕಾರ ಏರಿಸುವ ಸಾಧ್ಯತೆಯಿದೆ. ಜೊತೆಗೆ ಕಬ್ಬು ಮತ್ತಿತರ 13 ಮುಂಗಾರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸಲಿದೆ ಎಂದು ಮೂಲಗಳು ಖಚಿತಪಡಿಸಿವೆ.
ಪ್ರಸ್ತುತ ಕ್ವಿಂಟಲ್ ಭತ್ತಕ್ಕೆ ಕನಿಷ್ಠ ಬೆಂಬಲ ಬೆಲೆ 1,550 ರೂ. ಇದೆ. ಇದೀಗ ಶೇ.13 ರಷ್ಟು (200 ರೂ.)ಏರಿಸುವುದರೊಂದಿಗೆ ಕ್ವಿಂಟಲ್ ಗೆ 1,750 ರೂ. ನಿಗದಿಪಡಿಸುವ ಸಂಭವ ಇದೆ. ಕಳೆದ ವಾರ ಪ್ರಧಾನಿ ಮೋದಿ ಈ ನಿರ್ಧಾರ ಕೈಗೊಂಡಿದ್ದು, ಮುಂಬರುವ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಘೋಷಣೆ ಮಾಡುವ ಸಾಧ್ಯತೆ ಇದೆ.
ಬೆಳೆಗಳ ಉತ್ಪಾದನಾ ವೆಚ್ಚಕ್ಕಿಂತ ಒಂದೂವರೆ ಪಟ್ಟು ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸುವುದಾಗಿ ಸ್ವತಃ ಪ್ರಧಾನಿಯೇ ಹೇಳಿದ್ದರು. ಇತ್ತೀಚೆಗೆ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳ ರೈತ ಪ್ರತಿನಿಧಿಗಳು ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿ ಭತ್ತ, ಕಬ್ಬು ಮತ್ತಿತರ ಬೆಳೆಗಳಿಗೆ ಬೆಂಬಲ ಬೆಲೆ ಘೋಷಿಸುವಂತೆ ಮನವಿ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್ ಶಾ
1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್ಡಿಎ ಗ್ಯಾರಂಟಿ
Election; ಮೊಹಬ್ಬತ್ ಕೀ ದುಕಾನ್ನಲ್ಲಿ ಫೇಕ್ ವೀಡಿಯೋಗಳು ಮಾರಾಟ: ಮೋದಿ
Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್ ಗರಂ
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ