ಕರಾವಳಿ: ಈ ವಾರ ಭಾರೀ ಮಳೆ ಸಂಭವ
Team Udayavani, Jul 3, 2018, 6:00 AM IST
ಹೊಸದಿಲ್ಲಿ/ಬೆಂಗಳೂರು: ಜು. 4ರಿಂದ 7ರ ವರೆಗೆ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಭಾರೀ ಮಳೆಯಾಗುವ ಲಕ್ಷಣಗಳಿವೆ. ಅದೇ ರೀತಿ ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲವು ಪ್ರದೇಶಗಳಲ್ಲೂ ಉತ್ತಮ ಮಳೆಯಾಗಲಿದೆ. ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡು ಪ್ರದೇಶ ಸಹಿತ ದೇಶದ ಬಹುತೇಕ ಪ್ರದೇಶಗಳಲ್ಲಿ ಈ ವಾರ ಧಾರಾಕಾರ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಸೋಮವಾರ ಮುನ್ನೆಚ್ಚರಿಕೆ ನೀಡಿದೆ. ಅದರಲ್ಲೂ ಜು. 6 ಮತ್ತು 7ರಂದು ಉತ್ತರದ ಧಾರವಾಡ ಮತ್ತಿತರ ಭಾಗ ಹಾಗೂ ದಕ್ಷಿಣದ ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಮಡಿಕೇರಿಯಲ್ಲಿ ಧಾರಾಕಾರ ಮಳೆ ಆಗಲಿದೆ ಎಂದು ಇಲಾಖೆ ತಿಳಿಸಿದೆ.
ಜಮ್ಮು ಮತ್ತು ಕಾಶ್ಮೀರ, ತಮಿಳುನಾಡು, ಹಿಮಾಚಲ ಪ್ರದೇಶ, ಉತ್ತರಾ ಖಂಡ, ಪಂಜಾಬ್, ಹರಿಯಾಣದ ಉತ್ತರ ಭಾಗ, ಚಂಡೀಗಢ, ಪಶ್ಚಿಮ ಉತ್ತರ ಪ್ರದೇಶ, ಝಾರ್ಖಂಡ್ ಸಹಿತ ಹಲವು ಸ್ಥಳಗಳಲ್ಲಿ ಧಾರಾಕಾರ ಮಳೆಯಾಗಲಿದೆ. ಕೆಲವೆಡೆ ರಭಸವಾಗಿ ಗಾಳಿಯೂ ಬೀಸಲಿದೆ. ವಾರಾಂತ್ಯ ದವರೆಗೂ ಇದೇ ಸ್ಥಿತಿ ಮುಂದುವರಿಯಲಿದೆ ಎಂದು ಇಲಾಖೆ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jharkhand 32 ಕೋಟಿ ಪತ್ತೆ ಪ್ರಕರಣ: ಇಬ್ಬರ ಸೆರೆ
Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್
Loksabha election; ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ
CSIR: ಪ್ರತೀ ಸೋಮವಾರ ಇಸ್ತ್ರಿ ಹಾಕದ ವಸ್ತ್ರ ಧರಿಸಲು ಅವಕಾಶ!
West Bengal; ಶಿಕ್ಷಕರ ನೇಮಕ ಹಗರಣ: ಬಂಗಾಳ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ತರಾಟೆ