ನಮ್ಮ ದೇವರು ಅದೇನು ಕರ್ಮ ಮಾಡಿದ್ದಾರೋ ಗೊತ್ತಿಲ್ಲ!

Team Udayavani, Jul 12, 2018, 12:32 PM IST

blore-3.gif

ವಿಧಾನ ಪರಿಷತ್ತು: ಶ್ರೀಮಂತ ದೇವರ ದೇವಸ್ಥಾನಗಳಿಗೆ ಹೆಚ್ಚಿನ ಅನುದಾನ ನೀಡಲಾಗುತ್ತದೆ. ನಮ್ಮ ದೇವರುಗಳು ಏನು ಕರ್ಮ ಮಾಡಿದ್ದಾರೋ ಗೊತ್ತಿಲ್ಲ. ನಮ್ಮ ದೇವರುಗಳ ಬಗ್ಗೆ ಕಣ್ಣು ಬಿಡುತ್ತಿಲ್ಲ! -ಬಡಜನರು ಆರಾಧಿಸುವ ದೇವರುಗಳ ದೇವಾಲಯಗಳಿಗೆ ಮುಜರಾಯಿ ಇಲಾಖೆ ಅನುದಾನ ನೀಡುತ್ತಿಲ್ಲ ಎಂಬುದನ್ನು ಕಾಂಗ್ರೆಸ್‌ನ ಆರ್‌.ಧರ್ಮಸೇನ ಪ್ರಸ್ತಾಪಿಸಿದ ಬಗೆ ಇದು. 

ಮೇಲ್ಮನೆಯಲ್ಲಿ ಬುಧವಾರ ಪ್ರಶ್ನೋತ್ತರ ವೇಳೆ ಮಾತನಾಡಿದ ಅವರು, ವಿಧಾನ ಪರಿಷತ್‌ ಸದಸ್ಯರು ನೀಡುವ ಯಾವ ಪತ್ರಗಳನ್ನೂ ಇಲಾಖೆ ಪರಿಗಣಿಸಿ ಅನುದಾನ ನೀಡುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇದಕ್ಕೆ ಉತ್ತರಿಸಿದ ಸಚಿವ ರಾಜಶೇಖರ್‌ ಪಾಟೀಲ್‌, ರಾಜ್ಯದಲ್ಲಿ 34,556 ದೇವಸ್ಥಾನಗಳಿವೆ. ಇದರಲ್ಲಿ 25 ಲಕ್ಷ ರೂ.ಗಿಂತ ಹೆಚ್ಚು ಆದಾಯವಿರುವ “ಎ’ ದರ್ಜೆ ದೇವಸ್ಥಾನ 192, 5 ಲಕ್ಷ ರೂ.ನಿಂದ 25 ಲಕ್ಷ ರೂ.ವರೆಗಿನ ಆದಾಯವಿರುವ “ಬಿ’ ದರ್ಜೆ ದೇವಾಲಯ 151 ಹಾಗೂ 5 ಲಕ್ಷ ರೂ.ಗಿಂತ ಕಡಿಮೆ ಆದಾಯವಿರುವ “ಸಿ’ ದರ್ಜೆ ದೇವಾಲಯ 34,123 ಇವೆ. ಬಜೆಟ್‌ನಲ್ಲಿ 126 ಕೋಟಿ ರೂ. ಅನುದಾನ ಕಾಯ್ದಿರಿಸಿದ್ದು, ಲಭ್ಯವಿರುವ ಅನುದಾನದಲ್ಲಿ ಹಂಚಿಕೆ ಮಾಡಲಾಗುವುದು ಎಂದು ಹೇಳಿದರು.

ಆಗ ಬಿಜೆಪಿಯ ಕೆ.ಬಿ.ಶಾಣಪ್ಪ, ದೇವರುಗಳನ್ನೇ “ಎ’, “ಬಿ’ ಎಂದು ವರ್ಗೀಕರಿಸಿ ಶ್ರೀಮಂತ ದೇವರೆಂದು ಗುರುತಿಸಿದ್ದೇವೆ. ಆದರೆ ಬಡ ಜನರು ಪೂಜಿಸುವ 34,123 ದೇವಾಲಯಗಳನ್ನು ಕೇಳುವವರಿಲ್ಲದಂತಾಗಿದೆ. ಸಣ್ಣ ದೇವರ ಮೇಲೆ ಕರುಣೆ ಇರಲಿ ಎಂದು ಸಲಹೆ ನೀಡಿದರು.

ಜೆಡಿಎಸ್‌ನ ಸಂದೇಶ್‌ ನಾಗರಾಜ್‌, ಶ್ರೀಮಂತ ದೇವಸ್ಥಾನಗಳ ಬದಲಿಗೆ “ಸಿ’ ದೇವಾಲಯಗಳಿಗೆ ಹೆಚ್ಚಿನ ಅನುದಾನ ನೀಡಬೇಕು. ಮುಜರಾಯಿ ಖಾತೆ ತೆಗೆದುಕೊಂಡರೆ ಸಚಿವ ಸ್ಥಾನ ಹೋಗುತ್ತದೆ ಎಂಬ ಮಾತಿದೆ. ಹಾಗಾಗಿ ಸಣ್ಣ ದೇವಸ್ಥಾನಗಳಿಗೆ ಅನುದಾನ ಕೊಟ್ಟು ಕೃಪೆಗೆ ಪಾತ್ರರಾಗಿ ಎಂದು ಹೇಳಿದರು.

ಸಚಿವ ರಾಜಶೇಖರ್‌ ಪಾಟೀಲ್‌ ಪ್ರತಿಕ್ರಿಯಿಸಿ, ಸಚಿವ ಸ್ಥಾನ ಇರಲಿ, ಹೋಗಲಿ. ನನ್ನನ್ನು ಗೆಲ್ಲಿಸಿದ್ದು ಹುಮ್ನಾಬಾದ್‌ ಜನ. “ಸಿ’ ದರ್ಜೆ ದೇವಸ್ಥಾನಗಳಿಗೆ ಅನುದಾನ ಒದಗಿಸುವ ಭರವಸೆ ನೀಡಿದರು.
 
ರಾಜ್ಯ ಖಾದಿ ಮಂಡಳಿಯಿಂದ ಬಿಪಿಎಲ್‌ ಕುಟುಂಬಗಳು ಮರುಪಾವತಿಸಬೇಕಿರುವ ಬಾಕಿ ಸಾಲ ಮನ್ನಾ ಮಾಡಲಾಗುವುದು ಎಂದು 2018-19ನೇ ಸಾಲಿನ ಬಜೆಟ್‌ನಲ್ಲಿ ಘೋಷಣೆಯಾಗಿದ್ದು, ವಾಣಿಜ್ಯ ಮತ್ತು
ಕೈಗಾರಿಕಾ ಇಲಾಖೆಯಿಂದ ಈ ಸಾಲ ಮನ್ನಾಗೆ ಕ್ರಮ ಕೈಗೊಳ್ಳಲಾಗುವುದು.
  ಎಸ್‌.ಆರ್‌.ಶ್ರೀನಿವಾಸ್‌. ಸಣ್ಣ ಕೈಗಾರಿಕೆ ಸಚಿವ

ಅರಣ್ಯ ಭೂಮಿ ಸಕ್ರಮಕ್ಕೆ ಸಂಬಂಧಪಟ್ಟಂತೆ ಬಾಕಿಯಿರುವ ಅರ್ಜಿಗಳ ಶೀಘ್ರ ಇತ್ಯರ್ಥಕ್ಕೆ ಒತ್ತು ನೀಡಲಾಗುವುದು. ಅಧಿಕಾರಿಗಳು ಕಾನೂನು ಚೌಕಟ್ಟಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಕಿರುಕುಳ ನೀಡುವುದು ಕಂಡು ಬಂದರೆ ಪರಿಶೀಲಿಸಲಾಗುವುದು.
  ಆರ್‌.ಶಂಕರ್‌, ಅರಣ್ಯ ಸಚಿವ 

ಟಾಪ್ ನ್ಯೂಸ್

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.