ಕಣ್ಣೂರು ವಿ.ವಿ.ಯಲ್ಲಿ ಕಳರಿ,ಯೋಗ,ಈಜು ಕೋರ್ಸ್‌

Team Udayavani, Jul 14, 2018, 6:00 AM IST

13ksde10a.gif

ಕಾಸರಗೋಡು: ಕಣ್ಣೂರು ವಿಶ್ವವಿದ್ಯಾಲಯದಲ್ಲಿ ಇನ್ನು ಮುಂದೆ ಕೇವಲ ಪಠ್ಯ ಕಲಿಕೆ ಮತ್ತು ಸಂಶೋಧನೆ ಮಾತ್ರವಲ್ಲ. ಕಳರಿ, ಯೋಗ, ಈಜು ಮತ್ತು ಏರೋಬಿಕ್‌ ಡ್ಯಾನ್ಸ್‌ ಕೋರ್ಸ್‌ ಆರಂಭಗೊಳ್ಳಲಿದೆ.

ಕಣ್ಣೂರು ವಿ.ವಿ.ಯ ಕ್ರೀಡಾ ವಿಭಾಗ ಕಳರಿ, ಈಜು, ಯೋಗ ಮತ್ತು ಏರೋಬಿಕ್‌ ಡ್ಯಾನ್ಸ್‌ ಕೋರ್ಸ್‌ಗಳನ್ನು ಆರಂಭಿಸಲಿದೆ. ಅಲ್ಲದೆ ಫಿಟ್‌ನೆಸ್‌ ಕೋರ್ಸ್‌ಗಳನ್ನು ಆರಂಭಿಸಲಿದೆ. ಕಳರಿಯಲ್ಲಿ ಒಂದು  ವರ್ಷದ ಡಿಪ್ಲೋಮಾ ಕೋರ್ಸ್‌, ಯೋಗದಲ್ಲಿ ಒಂದು ವರ್ಷದ ಪಿ.ಜಿ. ಡಿಪ್ಲೋಮಾ ಕೋರ್ಸ್‌, ಈಜು ಮತ್ತು ಫಿಟ್‌ನೆಸ್‌ ಮೆನೇಜ್‌ಮೆಂಟ್‌ನಲ್ಲಿ ಮೂರು ತಿಂಗಳ ಸರ್ಟಿಫಿಕೇಟ್‌ ಕೋರ್ಸ್‌ಗಳನ್ನು ಪ್ರಸ್ತುತ ಅಧ್ಯಯನ  ವರ್ಷದಿಂದಲೇ ಆರಂಭಿಸಲು ತೀರ್ಮಾನಿಸಿದೆ. ವಿಶ್ವವಿದ್ಯಾಲಯದ ಮಾಂಗಾಟ್‌ಪರಂಬ ಕ್ಯಾಂಪಸ್‌ನಲ್ಲಿ ಈ ಕೋರ್ಸ್‌ಗಳನ್ನು ಆರಂಭಿಸಲು ನಿರ್ಧರಿಸಲಾಗಿದೆ.

ಈಜು,ಯೋಗ  
ಫಿಟ್‌ನೆಸ್‌ ಮ್ಯಾನೇಜ್‌ಮೆಂಟ್‌, ಯೋಗ ಮತ್ತು ಈಜು ಇವುಗಳನ್ನು ತರಬೇತು ದಾರರನ್ನು  ಕೇಂದ್ರೀಕರಿಸಿ ಕೋರ್ಸ್‌ ಗಳನ್ನು ಆರಂಭಿಸ ಲಾಗುವುದು. ಅತ್ಯುತ್ತಮ ಕ್ರೀಡಾ ತರಬೇತು ದಾರರನ್ನು ಸೃಷ್ಟಿಸುವುದು ಇದರ ಉದ್ದೇಶ ವಾಗಿದೆ. ಯೋಗದಲ್ಲಿ ಒಂದು ವರ್ಷದ ಪಿ.ಜಿ. ಡಿಪ್ಲೋಮಾ ಕೋರ್ಸ್‌ ನಡೆಯಲಿದ್ದು, ಈ ಕೋರ್ಸ್‌ಗೆ ಪದವಿ ಕನಿಷ್ಠ ಅರ್ಹತೆ ಯಾಗಿದೆ. ಪಿಟ್‌ನೆಸ್‌ ಮ್ಯಾನೇಜ್‌ಮೆಂಟ್‌ ಕೋರ್ಸ್‌ನಲ್ಲಿ  ಜಿಮ್ನಾಸ್ಟಿಕ್‌ ಮತ್ತು ಏರೋಬಿಕ್‌ ಡ್ಯಾನ್ಸ್‌, ಸ್ಕೂಬ್‌ ಡ್ಯಾನ್ಸ್‌ ಮೊದಲಾದವುಗಳನ್ನು ಸೇರ್ಪಡೆಗೊಳಿಸಲಾಗಿದೆ. ಇದು ಮೂರು ತಿಂಗಳ ಸರ್ಟಿಫಿಕೇಟ್‌ ಕೋರ್ಸ್‌ ಆಗಿದ್ದು, ಪ್ಲಸ್‌ ಟು ಕನಿಷ್ಠ ಅರ್ಹತೆಯಾಗಿದೆ.

ಈಜು 
ಶಾಸ್ತ್ರೀಯ ರೀತಿಯಲ್ಲಿ ಈಜು ಕಲಿಸಲಾಗುವುದು. ಅಲ್ಲದೆ ಈಜು ಪಟುಗಳಿಗೆ ತರಬೇತಿಯನ್ನು ನೀಡಲಾಗು ವುದು   ಮತ್ತು    ನೀರಿಗೆ ಬಿದ್ದವರನ್ನು ರಕ್ಷಿಸಲು ಅಗತ್ಯದ ತರಬೇತಿಯನ್ನು ಈಜು ಕೋರ್ಸ್‌ನಲ್ಲಿ ನೀಡಲಾಗುವುದು. ಮಾಂಗಾಟ್‌ಪರಂಬದ ಕ್ಯಾಂಪಸ್‌ನಲ್ಲಿರುವ ಈಜು ಕೊಳದಲ್ಲಿ ತರಬೇತಿ ನೀಡಲಾಗುವುದು. ಮೂರು ತಿಂಗಳ ಈ ಕೋರ್ಸ್‌ಗೆ ಪ್ಲಸ್‌ ಟು ಕನಿಷ್ಠ ಅರ್ಹತೆಯಾಗಿದೆ. ಜುಲೈ 30 ರಿಂದ ತರಗತಿಯನ್ನು ಆರಂಭಿಸಲು ತೀರ್ಮಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜುಲೈ 17. ಹೆಚ್ಚಿನ ವಿವರಗಳನ್ನು ಕಣ್ಣೂರು ವಿಶ್ವವಿದ್ಯಾಲಯದ ವೆಬ್‌ಸೈಟ್‌ನಿಂದ ಪಡೆಯಬಹುದು.

ಕಳರಿ ಜತೆ ಚಿಕಿತ್ಸೆ  
ಕಳರಿಯ ಜೊತೆಗೆ ಕಳರಿಯ ಮೂಲಕ ಚಿಕಿತ್ಸೆಯ ಕುರಿತಾಗಿ ಕಳರಿ ಡಿಪ್ಲೋಮಾ ಕೋರ್ಸ್‌ನಲ್ಲಿ ಸೇರ್ಪಡೆಗೊಳಿಸಲಾಗಿದೆ. ವಿಶ್ವವಿದ್ಯಾಲಯದ ಕ್ರೀಡಾಪಟುಗಳು ಇನ್ನಷ್ಟು ಸಾಧನೆ  ಸಾಧಿಸಲು ಕಳರಿಯನ್ನು ಸೇರ್ಪಡೆಗೊಳಿಸುವ ಕುರಿತಾಗಿ ಯೋಜಿಸಲಾಗಿದ್ದು, ಈ ಬಗ್ಗೆ ಚಿಂತನೆ ನಡೆಯುತ್ತಿದೆ. ತಜ್ಞ ಕಳರಿ ಗುರುಗಳು ವಿಶ್ವವಿದ್ಯಾಲಯದಲ್ಲಿ ಕಳರಿಯನ್ನು ಕಲಿಸಲಿದ್ದಾರೆ. ಕಳರಿ ಅಭ್ಯಾಸಕ್ಕೆ ಅಗತ್ಯವಾದ ಎಲ್ಲಾ ಸೌಕರ್ಯಗಳನ್ನು ಮಾಂಗಾಟ್‌ಪರಂಬದಲ್ಲಿ ಏರ್ಪಡಿಸಲಾಗುವುದು. ಪ್ರಥಮ ಬ್ಯಾಚ್‌ನಲ್ಲಿ 20 ಮಂದಿಗೆ ಮಾತ್ರವೇ ಪ್ರವೇಶ ನೀಡಲಾಗುವುದು. ಈ ಕೋರ್ಸ್‌ಗೆ ಸೇರ್ಪಡೆಗೊಳ್ಳಲು ಕನಿಷ್ಠ ಅರ್ಹತೆ ಪ್ಲಸ್‌ ಟು.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.