ಉದ್ಯಮಬಾಗದಲ್ಲಿ ಅನಧಿಕೃತ ಪಾರ್ಕಿಂಗ್‌ನಿಂದ ತೊಂದರೆ 


Team Udayavani, Jul 15, 2018, 4:42 PM IST

15-july-24.jpg

ಬೆಳಗಾವಿ: ನಗರದ ಮೂರನೇ ರೈಲ್ವೆ ಗೇಟ್‌ದಿಂದ ಪೀರನವಾಡಿ ಕ್ರಾಸ್‌ವರೆಗೆ ಹಲವಾರು ವಾಹನಗಳು ಅನಧಿಕೃತ ಪಾರ್ಕಿಂಗ್‌ ಮಾಡುತ್ತಿದ್ದು ಇದರಿಂದ ಬಹಳ ತೊಂದರೆಯಾಗುತ್ತಿದೆ ಎಂದು ಜಿಲ್ಲಾ ಸಣ್ಣ ಕೈಗಾರಿಕೆಗಳ ಸಂಘದ ಪದಾಧಿಕಾರಿಗಳು ದೂರಿದ್ದಾರೆ. ರಸ್ತೆಗಳ ಮೇಲೆ ವಾಹನಗಳ ಅನಧಿಕೃತ ನಿಲುಗಡೆ ಸಂಬಂಧ ಪೊಲೀಸ್‌ ಇಲಾಖೆ ಹಾಗೂ ಜಿಲ್ಲಾಧಿಕಾರಿಗಳಿಗೆ ಸಾಕಷ್ಟು ಸಲ ಮನವಿ ಮಾಡಿಕೊಂಡು ಇದನ್ನು ತೆರವುಗೊಳಿಸಬೇಕು ಎಂದು ಒತ್ತಾಯ ಮಾಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ದೂರಿದರು. 

ಉದ್ಯಮಬಾಗ ಕೈಗಾರಿಕಾ ಪ್ರದೇಶದ ಮುಖ್ಯ ರಸ್ತೆಗಳ ಎರಡೂ ಬದಿಗೆ ಹಲವಾರು ವಾಹನಗಳು ಅನಧಿಕೃತವಾಗಿ ನಿಲುಗಡೆ ಮಾಡಲಾಗುತ್ತಿದೆ. ಬೆಮ್ಕೋ  ಕೈಗಾರಿಕೆಯ ಬಳಿ ಕ್ರೇನ್‌ ಮಾಲೀಕರು ಮಖ್ಯ ರಸ್ತೆಯ ಮೇಲೆ ನಿಲುಗಡೆ ಮಾಡುತ್ತಿರುವುದರಿಂದ ಈ ಮಾರ್ಗದಲ್ಲಿ ಸಂಚಾರ ದಟ್ಟಣೆಯಾಗಿ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಅದೇ ರೀತಿ ಇನ್ನೊಂದು ಕಡೆ ದ್ವಿಚಕ್ರ ವಾಹನ ಹಾಗೂ ಕಾರುಗಳ ಪಾರ್ಕಿಂಗ್‌ ಮಾಡಲಾಗುತ್ತಿದ್ದು ಇಲ್ಲಿಯೂ ಸಹ ಸುಗಮ ಸಂಚಾರಕ್ಕೆ ಅಡಚಣೆಯಾಗಿದೆ ಎಂದು ಸಣ್ಣ ಕೈಗಾರಿಕೆಗಳ ಸಂಘದ ಅಧ್ಯಕ್ಷ ಉಮೇಶ ಶರ್ಮಾ ದೂರಿದರು.

 ರಸ್ತೆಗಳ ಮೇಲೆ ಮನಸ್ಸಿಗೆ ಬಂದಂತೆ ವಾಹನಗಳ ನಿಲುಗಡೆ ಮಾಡಲಾಗುತ್ತಿದ್ದರೆ ಫುಟ್‌ಪಾತ್‌ಗಳನ್ನು ಬೀದಿ ವ್ಯಾಪಾರಿಗಳು ಅಕ್ರಮಿಸಿಕೊಂಡಿದ್ದಾರೆ. ಉದ್ಯಮಬಾಗದ ಅನೇಕ ಕೈಗಾರಿಕೆಗಳ ಮಾಲೀಕರು ಹಾಗೂ ಕಾರ್ಮಿಕರು ಮೇಲಿಂದ ಮೇಲೆ ಪಾರ್ಕಿಂಗ್‌ ಮತ್ತು ಸಂಚಾರ ದಟ್ಟಣೆ ಬಗ್ಗೆ ದೂರು ಸಲ್ಲಿಸುತ್ತಲೇ ಇದ್ದಾರೆ. ಆದರೂ ಜಿಲ್ಲಾಡಳಿತ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪ ಮಾಡಿದರು. ಇದಲ್ಲದೆ ಮೂರನೇ ಗೇಟ್‌ದಿಂದ ಪೀರನವಾಡಿವರೆಗೆ ಇನ್ನೂ ರಸ್ತೆ ಕಾಮಗಾರಿ ಪೂರ್ಣಗೊಂಡಿಲ್ಲ. ಆದರೆ ವರ್ಷದ ಹಿಂದಷ್ಟೆ ಮಾಡಿರುವ ರಸ್ತೆಗಳು ಈಗಾಗಲೇ ಹಾಳಾಗಿವೆ. ಎಲ್ಲಿಯೂ ಗುಣಮಟ್ಟ ಕಾಯ್ದುಕೊಂಡಿಲ್ಲ. ಸಾರ್ವಜನಿಕರ ತೆರಿಗೆ ಹಣ ದುರುಪಯೋಗವಾಗುತ್ತಿದೆ. ಆದ್ದರಿಂದ ಈ ಬಗ್ಗೆ ಕೂಡಲೇ ಪರಿಶೀಲನೆ ನಡೆಸಿ ಅನಧಿಕೃತ ವಾಹನಗಳ ಪಾರ್ಕಿಂಗ್‌ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಟಾಪ್ ನ್ಯೂಸ್

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.