HIV ಸೋಂಕಿತರು ಸೌಲಭ್ಯಗಳಿಗೆ ART ಸೆಂಟರ್‌ ಮೂಲಕ ಅರ್ಜಿ ಸಲ್ಲಿಸಿ : DC


Team Udayavani, Jul 17, 2018, 6:10 AM IST

hiv-symbolic-16-7.jpg

ಉಡುಪಿ: HIV ಪೀಡಿತರು ಸರಕಾರದ ಸೌಲಭ್ಯಗಳಿಗಾಗಿ ಇಲಾಖೆಗಳಿಗೆ ಅಲೆಯುವ ಬದಲು ತಾವು ಚಿಕಿತ್ಸೆ ಪಡೆಯುವ ART ಸೆಂಟರ್‌ಗಳಲ್ಲಿ ಅರ್ಜಿ ಸಲ್ಲಿಸಿದಲ್ಲಿ ಸಂಬಂಧಪಟ್ಟ ಇಲಾಖೆಗಳಿಗೆ ಕಳುಹಿಸಿ, ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಏಡ್ಸ್‌ ನಿಯಂತ್ರಣ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್‌ ಸೂಚಿಸಿದರು. ಅವರು ಸೋಮವಾರ ಜಿಲ್ಲೆಯ HIV ಸೋಂಕು ಪೀಡಿತರ ಕುಂದುಕೊರತೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. HIV ಪೀಡಿತರು ಸರಕಾರಿ ಸೌಲಭ್ಯಗಳಿಗೆ ಕಚೇರಿಗಳಿಗೆ ತೆರಳಿದಾಗ ಸೋಂಕು ಬಹಿರಂಗವಾಗುವ ಸಾಧ್ಯತೆ ಇದೆ. ಅವರು ಕಚೇರಿಗೆ ಅಲೆದಾಡುವುದು ತ್ರಾಸದಾಯಕವಾಗಿದ್ದು, ಇದನ್ನು ತಪ್ಪಿಸಲು ART ಸೆಂಟರ್‌ ಗಳಲ್ಲಿ ಹಾಗೂ ಜಿಲ್ಲಾ ಏಡ್ಸ್‌ ನಿಯಂತ್ರಣಾಧಿಕಾರಿಗಳ ಕಚೇರಿಯಲ್ಲಿ ಅಗತ್ಯ ಸೌಲಭ್ಯಗಳ ಮಂಜೂರು ಕೋರಿ ಅರ್ಜಿ ಸಲ್ಲಿಸುವಂತೆ ತಿಳಿಸಿದರು.

ಸಾಲ ಮನ್ನಾ ಕೋರಿಕೆ: ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದದಿಂದ ಧನಶ್ರೀ ಯೋಜನೆಯಡಿ 2016- 17ರಲ್ಲಿ 26 ಮಂದಿಗೆ ಮತ್ತು 2017- 18ರಲ್ಲಿ ಅರ್ಜಿ ಸಲ್ಲಿಸಿರುವ 38 ಮಂದಿಗೆ ಸಾಲ ಮಂಜೂರು ಆಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಗ್ರೇಸಿ ಗೊನ್ಸಾಲ್ವಿಸ್‌ ತಿಳಿಸಿದರು. ಹೆಚ್ಚಿನ ಸೋಂಕು ಪೀಡಿತರು ಅನಾರೋಗ್ಯ ಕಾರಣದಿಂದ ಸಾಲ ಮರುಪಾವತಿ ಮಾಡಲು ಶಕ್ತರಿಲ್ಲ. ಹೀಗಾಗಿ ಕೃಷಿ ಸಾಲ ಮನ್ನಾ ರೀತಿ ತಮ್ಮ ಸಾಲವನ್ನೂ ಮನ್ನಾ ಮಾಡುವಂತೆ ಸೋಂಕು ಪೀಡಿತರು ಜಿಲ್ಲಾಧಿಕಾರಿಗಳನ್ನು ಕೋರಿದರು. ಈ ಕುರಿತಂತೆ ನಿಗಮಕ್ಕೆ ಪತ್ರ ಬರೆಯುವಂತೆ ಡಿಸಿ ಸೂಚಿಸಿದರು.

ವಸತಿ ಸೌಲಭ್ಯ: ವಿಶೇಷ ವರ್ಗ ಯೋಜನೆಯಡಿ HIV ಪೀಡಿತ ಕುಟುಂಬದವರಿಗೆ ಜಿಲ್ಲಾಡಳಿತ ಮತ್ತು ರಾಜೀವ್‌ ಗಾಂಧಿ ಗ್ರಾಮೀಣ ವಸತಿ ನಿಗಮದ ಸಹಯೋಗದಲ್ಲಿ, 2014-15ರಲ್ಲಿ 36 ಮಂದಿಗೆ  2016-17ರಲ್ಲಿ 63 ಮಂದಿಗೆ, 2017-18ರಲ್ಲಿ 33 ಮಂದಿಗೆ ವಸತಿ ಸೌಲಭ್ಯ ನೀಡಲಾಗಿದೆ. ಅರ್ಹರಿಗೆ ನಿವೇಶನ ಗುರುತಿಸುವ ಕುರಿತಂತೆ ಹಾಗೂ RTCಗೆ ಸಂಬಂಧಪಟ್ಟ ಸಮಸ್ಯೆಗಳನ್ನು ಶೀಘ್ರದಲ್ಲಿ ಬಗೆಹರಿಸುವಂತೆ ಎಲ್ಲ ತಹಶೀಲ್ದಾರ್‌ಗಳಿಗೆ ಸೂಚಿಸಿದರು. ಜಿಲ್ಲೆಯಲ್ಲಿ ನಿವೇಶನರಹಿತರು ಮತ್ತು ವಸತಿ ರಹಿತರ ಸಮೀಕ್ಷೆ ನಡೆಯುತ್ತಿದ್ದು, ನಿವೇಶನ ಮತ್ತು ವಸತಿ ರಹಿತ ಎಲ್ಲ HIV ಸೋಂಕಿತರು ಸಂಬಂಧಪಟ್ಟ ಗ್ರಾ.ಪಂ. ವ್ಯಾಪ್ತಿಯಲ್ಲಿ ಹೆಸರು ಸೇರಿಸುವಂತೆ ತಿಳಿಸಿದರು. ಉಡುಪಿ ಹಾಗೂ ಕುಂದಾಪುರದ ART ಸೆಂಟರ್‌ ಗಳಲ್ಲಿ HIV ಸೋಂಕು ಪೀಡಿತರಿಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಮೂಲಕ ಉಚಿತ ಕಾನೂನು ನೆರವು ನೀಡಲಾಗುತ್ತಿದ್ದು, ಇದನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು.

ಜಿಲ್ಲೆಯ ಖಾಸಗಿ ಬಸ್‌ ಗಳಲ್ಲಿ ಸೋಂಕಿತರಿಗೆ ನೀಡುತ್ತಿರುವ ರಿಯಾಯಿತಿ ಬಸ್‌ ಪಾಸ್‌ನಲ್ಲಿ ಸೋಂಕಿನ ಕುರಿತು ಗೌಪ್ಯತೆ ಕಾಪಾಡುವಂತೆ RTA ಅಧಿಕಾರಿಗೆ ಸೂಚಿಸಿದರು. ಜಿಲ್ಲೆಯ ಇಲಾಖೆಗಳಲ್ಲಿ ಗುತ್ತಿಗೆ ಆಧಾರದಲ್ಲಿ ಡಿ ಗ್ರೂಪ್‌ ನೌಕರರ ನೇಮಕ ಸಂದರ್ಭ ಲಿಂಗತ್ವ ಅಲ್ಪಸಂಖ್ಯಾಕರಿಗೆ ಆದ್ಯತೆ ನೀಡುವಂತೆ ಇಲಾಖಾಧಿಕಾರಿಗಳಿಗೆ ಸೂಚಿಸಿದರು. ಅಪರ ಜಿಲ್ಲಾಧಿಕಾರಿ ಅನುರಾಧಾ, ಜಿ.ಪಂ. ಉಪಕಾರ್ಯದರ್ಶಿ ನಾಗೇಶ್‌ ರಾಯ್ಕರ್‌, ಜಿಲ್ಲಾ ಆರೋಗ್ಯ ಅಧಿಕಾರಿ ಡಾ| ರೋಹಿಣಿ, ಜಿಲ್ಲಾ ಏಡ್ಸ್‌ ನಿಯಂತ್ರಣಾಧಿಕಾರಿ ಡಾ| ಚಿದಾನಂದ ಸಂಜು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.