ಪೊಲೀಸರಿಗೆ ಇನ್ಫೋಸಿಸ್‌ ಫೌಂಡೇಷನ್‌ ನಿಂದ ಮನೆ

Team Udayavani, Jul 17, 2018, 11:36 AM IST

blore-5.jpg

ಬೆಂಗಳೂರು: ನಗರದ ವೈಟ್‌ಫೀಲ್ಡ್‌ನ ಕೋನಪ್ಪನ ಆಗ್ರಹಾರ ಬಳಿ ಮೆಟ್ರೋ ಸ್ಟೇಷನ್‌ ನಿರ್ಮಿಸಲು ಆರ್ಥಿಕ ನೆರವು ನೀಡಲು ಮುಂದಾಗಿರುವ ಇನ್ಫೋಸಿಸ್‌ ಫೌಂಡೇಶನ್‌, ಪೊಲೀಸರಿಗೆ ವಸತಿ ಕಟ್ಟಡ ನಿರ್ಮಿಸಿಕೊಡಲು ಸಹ ತೀರ್ಮಾನಿಸಿದೆ.

ವಿಧಾನಸೌಧದಲ್ಲಿ ಸೋಮವಾರ ಉಪ ಮುಖ್ಯಮಂತ್ರಿ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರನ್ನು ಭೇಟಿ ಮಾಡಿದ ಇನ್ಫೋಸಿಸ್‌ ಫೌಂಡೇಶನ್‌ ಅಧ್ಯಕ್ಷೆ ಸುಧಾ ಮೂರ್ತಿ ಅವರು, ಈ ಕುರಿತು ಮಾತುಕತೆ ನಡೆಸಿದರು. ರಾಜ್ಯದಲ್ಲಿ ಪೊಲೀಸರಿಗೆ ಮನೆಗಳು ಹಾಗೂ ಪೊಲೀಸ್‌ ಠಾಣೆಗಳ ಅಗತ್ಯವಿರುವ ಬಗ್ಗೆ ಡಾ.ಪರಮೇಶ್ವರ್‌ ತಿಳಿಸಿದ್ದು, ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಸುಧಾ ಮೂರ್ತಿ ಅವರು, ರಾಜ್ಯ ಸರ್ಕಾರ ಜಮೀನು ನೀಡಿದರೆ ಇನ್ಫೋಸಿಸ್‌ ವತಿಯಿಂದ ಪೊಲೀಸರಿಗೆ ಉಚಿತ ಮನೆಗಳನ್ನು ನಿರ್ಮಿಸಿಕೊಡಲಾಗುವುದು. ಬೆಂಗಳೂರಿನ ವೈಟ್‌ಫೀಲ್ಡ್‌ ಹಾಗೂ ಮೈಸೂರಿನಲ್ಲಿ ಸರ್ಕಾರ ಜಮೀನು ನೀಡಿದರೆ, ಪೊಲೀಸ್‌ ಕ್ವಾಟ್ರಸ್‌ಗಳನ್ನು ನಿರ್ಮಿಸಿ ಕೊಡಲಾಗುವುದು ಎಂದು ತಿಳಿಸಿದ್ದಾರೆ ಎನ್ನಲಾಗಿದೆ.

19ರಂದು ಒಪ್ಪಂದ: ಸಭೆ ನಂತರ ಸುದ್ದಿಗಾರರ ಜತೆ ಮಾತನಾಡಿದ ಸುಧಾ ಮೂರ್ತಿ, ವೈಟ್‌ಫೀಲ್ಡ್‌ನ ಕೋನಪ್ಪನ ಅಗ್ರಹಾರ ಬಳಿ ಮೆಟ್ರೋ ನಿಲ್ದಾಣ ನಿರ್ಮಿಸಲು ಇನ್ಫೋಸಿಸ್‌ 150 ಕೋಟಿ ರೂ. ದೇಣಿಗೆ ನೀಡಿದೆ. ಈ ಕುರಿತು ಬಿಎಂಆರ್‌ ಸಿಎಲ್‌ ಮತ್ತು ಇನ್ಫೋಸಿಸ್‌ ನಡುವೆ ಜು.19ರಂದು ಒಪ್ಪಂದ ಮಾಡಿಕೊಳ್ಳಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.

ಡಿಸಿಎಂ ಡಾ.ಜಿ.ಪರಮೇಶ್ವರ್‌ ಮಾತನಾಡಿ, ಮೆಟ್ರೊ ನಿಲ್ದಾಣ ನಿರ್ಮಿಸುವ ಕುರಿತ ಒಪ್ಪಂದದ ಜತೆಗೆ ಪೊಲೀಸರಿಗೆ ಮನೆಗಳನ್ನು ನಿರ್ಮಿಸಿಕೊಡುವಂತೆ ಸುಧಾ ಮೂರ್ತಿಯವರಿಗೆ ಮನವಿ ಮಾಡಿದ್ದೇವೆ. ಇದಕ್ಕೆ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ತಿಳಿಸಿದರು.

ಸಿಎಂ ಗೃಹ ಕಚೇರಿಗೆ ಗಾಲ್ಫ್ ಚೆಂಡು ಬಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಪರಮೇಶ್ವರ್‌, ಗಾಲ್ಫಕ್ಲಬ್ ನ ಕ್ಯಾಪ್ಟನ್‌ ಪ್ರದೀಪ್‌ ಅವರು ಗಾಲ್ಫ್ ಮೆಶ್‌ ಎತ್ತರಿಸುವುದಾಗಿ ತಿಳಿಸಿದ್ದಾರೆ. ಅಲ್ಲದೆ ಈ ರೀತಿ ಪ್ರಕರಣ ಮರುಕಳಿಸದಂತೆ ನೋಡಿಕೊಳ್ಳುವ ಭರವಸೆ ನೀಡಿದ್ದಾರೆ ಎಂದು ಹೇಳಿದರು.

ಟಾಪ್ ನ್ಯೂಸ್

Why Modi doesn’t talk about ladies now: Priyanka Gandhi

Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ

1-wewqewewq

H.D. Revanna ಎಸ್ ಐಟಿ ವಶಕ್ಕೆ ; ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್

1-qwweqwewq

Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

Priyanka Gandhi Slams PM Modi in Banaskantha Rally

ರಾಹುಲ್ ಸಾಮಾನ್ಯ ಜನರ ಕಷ್ಟ ಕೇಳಿದ್ದಾರೆ, ಆದರೆ ಮೋದಿ ಅರಮನೆಯಲ್ಲಿ ಕುಳಿತಿದ್ದಾರೆ:ಪ್ರಿಯಾಂಕಾ

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

1-wwqewqe

BJP ಕುರುಬ ಸಮುದಾಯಕ್ಕೆ ಒಂದೂ ಟಿಕೆಟ್ ಕೊಟ್ಟಿಲ್ಲ: ಸಿಎಂ ಸಿದ್ದರಾಮಯ್ಯ ಕಿಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚಿನ್ನದ ನಾಡಿನ ಕಲಾವಿದೆ ವಿದ್ಯಾಶ್ರೀ ಪ್ರತಿಭೆ ಅನಾವರಣ-ನೃತ್ಯಗಂಗಾ ಪ್ರದರ್ಶನ

ಚಿನ್ನದ ನಾಡಿನ ಕಲಾವಿದೆ ವಿದ್ಯಾಶ್ರೀ ಪ್ರತಿಭೆ ಅನಾವರಣ-ನೃತ್ಯಗಂಗಾ ಪ್ರದರ್ಶನ

Theft Case: ನಕಲಿ ಕೀ ಬಳಸಿ ಬ್ಯೂಟಿಷಿಯನ್‌ ಮನೆಗೆ ಕನ್ನ

Theft Case: ನಕಲಿ ಕೀ ಬಳಸಿ ಬ್ಯೂಟಿಷಿಯನ್‌ ಮನೆಗೆ ಕನ್ನ

Arrested: ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ 9 ವರ್ಷ ಬಳಿಕ ಬಂಧನ

Arrested: ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ 9 ವರ್ಷ ಬಳಿಕ ಬಂಧನ

Crime: ರೌಡಿಶೀಟರ್‌ನಿಂದ ಆಟೋ ಚಾಲಕನ ಹತ್ಯೆ

Crime: ರೌಡಿಶೀಟರ್‌ನಿಂದ ಆಟೋ ಚಾಲಕನ ಹತ್ಯೆ

Theft Case: ಕೆಲಸಕ್ಕಿದ್ದ ಮನೆಯಲ್ಲೇ 34 ಲಕ್ಷ ಒಡವೆ ಕದ್ದ ಕಳ್ಳಿ

Theft Case: ಕೆಲಸಕ್ಕಿದ್ದ ಮನೆಯಲ್ಲೇ 34 ಲಕ್ಷ ಒಡವೆ ಕದ್ದ ಕಳ್ಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Why Modi doesn’t talk about ladies now: Priyanka Gandhi

Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ

kejriwal 2

AAP ಚುನಾವಣ ಪ್ರಚಾರ ಹಾಡನ್ನು ಅನುಮೋದಿಸಿದ ಆಯೋಗ; ಕೆಲ ಮಾರ್ಪಾಡು

1-wewqewewq

H.D. Revanna ಎಸ್ ಐಟಿ ವಶಕ್ಕೆ ; ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್

1-qwweqwewq

Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.