ಶಿರೂರು ಮಠದ ಲಕ್ಷ್ಮೀವರ ತೀರ್ಥ ಶ್ರೀಪಾದರು ವಿಧಿವಶ Watch

Team Udayavani, Jul 19, 2018, 9:03 AM IST

sh.jpg

ಉಡುಪಿಯ ಅಷ್ಠಮಠಗಳಲ್ಲಿ ಒಂದಾಗಿರುವ ಶಿರೂರು ಮಠದ 30ನೇ ಯತಿವರ್ಯರಾದ ಶ್ರೀ ಶ್ರೀ ಲಕ್ಷ್ಮೀವರತೀರ್ಥ ಸ್ವಾಮೀಜಿಯವರು ತೀವ್ರ ಅನಾರೋಗ್ಯದಿಂದ ಇಂದು ಬೆಳಿಗ್ಗೆ ವಿಧಿವಶರಾದರು. ಅನಾರೋಗ್ಯದ ನಿಮಿತ್ತ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದ ಸ್ವಾಮೀಜಿಯವರು ಚಿಕಿತ್ಸೆಗೆ ಸ್ಪಂದಿಸದೆ ವಿಧಿವಶರಾದರು ಎಂದು ಆಸ್ಪತ್ರೆಯ ಮೂಲಗಳಿಂದ ತಿಳಿದುಬಂದಿದೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಸ್ವಾಮೀಜಿಯವರು ಮಂಗಳವಾರ ರಾತ್ರಿ ಫ‌ುಡ್‌ ಪಾಯ್ಸನ್‌ ಕಾರಣದಿಂದ ಮಣಿಪಾಲದ ಆಸ್ಪತ್ರೆಗೆ ದಾಖಲಾಗಿದ್ದರು.

ಶ್ರೀಗಳಿಗೆ ವಿಷಪ್ರಾಸನ ಮಾಡಲಾಯ್ತೇ…??
ಶಿರೂರು ಶ್ರೀಗಳ ದಿಢೀರ್ ಅನಾರೋಗ್ಯ ಮತ್ತು ನಿಧನ ಮಠದ ಭಕ್ತರಲ್ಲಿ ಹಾಗೂ ಜನಸಾಮಾನ್ಯರಲ್ಲಿ ಈ ಒಂದು ಶಂಕೆ ಇದೀಗ ವ್ಯಕ್ತವಾಗಿದೆ. ಇದಕ್ಕೆ ಪುಷ್ಠಿ ನೀಡಿದ್ದು ಕೆ.ಎಂ.ಸಿ. ಆಸ್ಪತ್ರೆ, ಮಣಿಪಾಲ ಇಲ್ಲಿನ ಅಧೀಕ್ಷಕ ಡಾ. ಅವಿನಾಶ್ ಶೆಟ್ಟಿ ಅವರ ಹೇಳಿಕೆ. ಮಾಧ್ಯಮದವರ ಜೊತೆಯಲ್ಲಿ ಮಾತನಾಡಿದ ಅವಿನಾಶ್ ಶೆಟ್ಟಿ ಅವರು, ಶಿರೂರು ಸ್ವಾಮೀಜಿಯವರ ಆಹಾರದಲ್ಲಿ ವಿಷಪ್ರಾಸನವಾಗಿರುವ ಸಾದ್ಯತೆಗಳಿವೆ ಎಂಬ ಮಾತನ್ನು ಹೇಳಿದ್ದಾರೆ. ಸ್ವಾಮೀಜಿಯವರ ಪಾರ್ಥೀವ ಶರೀರವನ್ನು ಇದೀಗ ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ, ಇದರ ವರದಿ ಬಂದ ಬಳಿಕವಷ್ಟೇ ಸತ್ಯಾಸತ್ಯತೆ ಹೊರಬರಲಿದೆ.

ಇತ್ತೀಚೆಗೆ ಕರ್ನಾಟಕ ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ಶ್ರೀಗಳವರು ಉಡುಪಿ ವಿಧಾನಸಭಾ ಕ್ಷೇತ್ರದಿಂದ ಭಾರತೀಯ ಜನತಾ ಪಕ್ಷದ ಟಿಕೆಟ್ ನಿಂದ ಸ್ಪರ್ಧಿಸಲು ಬಯಸಿದ್ದರು. ಆದರೆ ಆ ಪಕ್ಷದಿಂದ ಟಿಕೆಟ್ ಸಿಗದೇ ಇದ್ದಾಗ ಸ್ವತಂತ್ರ್ಯ ಅಭ್ಯರ್ಥಿಯಾಗಿ ಉಮೇದುವಾರಿಕೆಯನ್ನು ಬಯಸಿ ನಾಮಪತ್ರ ಸಲ್ಲಿಸಿದ್ದರು. ಆದರೆ ಬಳಿಕ ನಾಮಪತ್ರ ವಾಪಾಸು ಪಡೆದುಕೊಂಡು ಸ್ಪರ್ಧೆಯಿಂದ ಹಿಂದೆ ಸರಿದಿದ್ದರು. ಆದರೆ ಶ್ರೀಗಳ ಈ ನಡೆ ರಾಜ್ಯಾದ್ಯಂತ ಸಂಚಲವನ್ನು ಸೃಷ್ಟಿಸಿತ್ತು.

ವೇಷಧಾರಿಗಳ ನೆಚ್ಚನ ಶ್ರೀ ಶೀರೂರು ಸ್ವಾಮಿಗಳು…
ಶ್ರೀ ಕೃಷ್ಣ ಜನ್ಮಾಷ್ಠಮಿ ಮತ್ತು ವಿಟ್ಲಪಿಂಡಿ ಉತ್ಸವಗಳು ಉಡುಪಿಯ ನಾಡಹಬ್ಬವೆಂದೇ ಜನಮನ್ನಣೆ ಗಳಿಸಿವೆ. ಈ ಸಂದರ್ಭದಲ್ಲಿ ಪ್ರತೀವರ್ಷ ಉಡುಪಿ ನಗರದಲ್ಲಿ ಮತ್ತು ರಥಬೀದಿ ಪರಿಸರದಲ್ಲಿ ವಿವಿಧ ವೇಷಗಳು ಮೇಳೈಸುತ್ತಿದ್ದವು. ಈ ಸಂದರ್ಭದಲ್ಲಿ ರಥಬೀದಿಯ ವಿವಿಧ ಕಡೆಗಳಲ್ಲಿ ವೇಷಧಾರಿಗಳ ಪ್ರದರ್ಶನ ಮತ್ತು ಪುರಸ್ಕಾರಗಳು ನಡೆಯುತ್ತಿರುತ್ತದೆ. ಇದರಲ್ಲಿ ಯಾವಾಗಲೂ ಶಿರೂರು ಮಠದ ಕಡೆಯಿಂದ ನಡೆಯುತ್ತಿದ್ದ ವೇಷಗಳ ಪ್ರದರ್ಶನ ಜನಾಕರ್ಷಣೆಯ ಕೇಂದ್ರವಾಗಿರುತ್ತಿತ್ತು. ಈ ಸಂದರ್ಭದಲ್ಲಿ ಹಿರಿ ಕಿರಿಯ ವೇಷಧಾರಿಗಳೆಂಬ ಬೇಧವನ್ನು ತೋರದೆ ಎಲ್ಲರಿಗೂ ತಮ್ಮ ವೇದಿಕೆಯಲ್ಲಿ ವೇಷಗಳ ಪ್ರದರ್ಶನಕ್ಕೆ ಅವಕಾಶ ನೀಡಿ ಸೂಕ್ತ ನಗದು ಪುರಸ್ಕಾರವನ್ನು ತಮ್ಮ ಕೈಯಾರೆ ನೀಡುತ್ತಿದ್ದರು. ಸುಮಾರು 5-6 ಗಂಟೆಗಳ ಕಾಲ ವೇದಿಕೆಯಲ್ಲೇ ಕುಳಿತು ವೇಷಧಾರಿಗಳ ಪ್ರದರ್ಶನವನ್ನು ಕಂಡು ಮಗುವಿನಂತೆ ಸಂತೋಷಪಟ್ಟು ಅವರಿಗೆ ಬಹುಮಾನ ನೀಡಿ ಕಳುಹಿಸುತ್ತಿದ್ದ ವಿಶಿಷ್ಠ ಗುಣ ಶ್ರೀಗಳದ್ದಾಗಿತ್ತು.

ಉಡುಪಿಯ ಅಷ್ಠಮಠಾಧೀಶರಲ್ಲಿಯೇ ವಿಶಿಷ್ಠವಾಗಿದ್ದ ವ್ಯಕ್ತಿತ್ವವನ್ನು ಹೊಂದಿದ್ದ ಶಿರೂರು ಮಠದ ಲಕ್ಷ್ಮೀವರತೀರ್ಥ ಶ್ರೀಪಾದರು ಬಹುಮುಖ ವ್ಯಕ್ತಿತ್ವವನ್ನು ಹೊಂದಿದವರಾಗಿದ್ದರು. ಉತ್ತಮ ಈಜುಪಟುವಾಗಿದ್ದ ಶ್ರೀಗಳವರು ಈ ಹಿಂದೆ ಗೋಪಾಲ ಖಾರ್ವಿ ಅವರು ಮಲ್ಪೆ ಸಮುದ್ರದಲ್ಲಿ ಗಿನ್ನೆಸ್ ರೆಕಾರ್ಡ್ ನಿರ್ಮಿಸುವ ಉದ್ದೇಶದಿಂದ ಮ್ಯಾರಥಾನ್ ಈಜಿನ ಸಂದರ್ಭದಲ್ಲಿ ಶ್ರೀಗಳವರೂ ಸಹ ಕೆಲವು ಕಿಲೋಮೀಟರುಗಳಷ್ಟು ದೂರ ಸಮುದ್ರದಲ್ಲಿ ಈಜಿ ತಾವೊಬ್ಬ ಉತ್ತಮ ಈಜುಪಟು ಎಂಬುದನ್ನು ನಿರೂಪಿಸಿದ್ದರು.

ಟಾಪ್ ನ್ಯೂಸ್

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

Temperature Increase: ಮೊಟ್ಟೆ ದರ ಇಳಿಕೆ

Retail Market; ತಾಪಮಾನ ಏರಿಕೆ: ಮೊಟ್ಟೆ ದರ ಇಳಿಕೆ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

Temperature Increase: ಮೊಟ್ಟೆ ದರ ಇಳಿಕೆ

Retail Market; ತಾಪಮಾನ ಏರಿಕೆ: ಮೊಟ್ಟೆ ದರ ಇಳಿಕೆ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.