ಮೀರಾರೋಡ್‌ ಪಲಿಮಾರು ಮಠದ ಶ್ರೀ ಬಾಲಾಜಿ ಸನ್ನಿಧಿ: ಆಷಾಢ ಏಕಾದಶಿ

Team Udayavani, Jul 25, 2018, 4:49 PM IST

2407mum09.jpg

ಮುಂಬಯಿ: ಮೀರಾ ರೋಡ್‌ ಪೂರ್ವದ ಪಲಿಮಾರು ಮಠದ ಶ್ರೀ ಬಾಲಾಜಿ ಸನ್ನಿಧಿಯಲ್ಲಿ ಆಷಾಢ ಏಕಾದಶಿ ಅಂಗವಾಗಿ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಶ್ರೀ ಸನ್ನಿಧಿಯಲ್ಲಿ ಜು. 23 ರಂದು ದಿನಪೂರ್ತಿ ನಡೆಯಿತು.

ಧಾರ್ಮಿಕ ಕಾರ್ಯಕ್ರಮವಾಗಿ ಲಕ್ಷ ತುಳಸಿ ಅರ್ಚನೆ, ಮಹಾಪೂಜೆ ಮತ್ತು ಸೂರ್ಯಾಸ್ತದಿಂದ ಸೂರ್ಯೋದ ಯದ ವರೆಗೆ ಅಖಂಡ ಭಜನ ಕಾರ್ಯಕ್ರಮ ಜರಗಿತು. ಇದೇ ಸಂದರ್ಭ ದಲ್ಲಿ ಶ್ರೀ ಸನ್ನಿಧಿಯ ಪರಿವಾರ ದೇವರಿಗೆ ಆಂಜನೇಯ, ನಾಗದೇವರು, ಶ್ರೀ ಪದ್ಮಾಂಬಿಕಾ ದೇವಿ, ನವಗ್ರಹ, ಶ್ರೀ ಮಧ್ವಾಚಾರ್ಯರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.

ಮಠದ ಟ್ರಸ್ಟಿ ಸಚ್ಚಿದಾನಂದ ರಾವ್‌ ಇವರು ಇದೇ ಸಂದರ್ಭದಲ್ಲಿ ಮಾತನಾಡಿ, ಪರ್ಯಾಯ ಶ್ರೀ ಪಲಿಮಾರು ಮಠದ ಶ್ರೀ ವಿದ್ಯಾಧೀಶ ತೀರ್ಥ ಸ್ವಾಮೀಜಿಯವರ ಆಶೀರ್ವಾ ದದಿಂದ ಪ್ರತಿದಿನ ಸಂಜೆ ಭಜನೆ, ಪಂಚಾಂಗಾನುಸಾರವಾಗಿ ನಾಗರ ಪಂಚಮಿ, ವರಮಹಾಲಕ್ಷ್ಮೀ ಪೂಜೆ, ನವರಾತ್ರಿ ಉತ್ಸವ, ದೀಪಾವಳಿ ಉತ್ಸವ, ಸುಬ್ರಹ್ಮಣ್ಯ ಷಷ್ಠಿ ಹಾಗೂ ಇನ್ನಿತರ ಅನೇಕ ಧಾರ್ಮಿಕ, ಆಧ್ಯಾತ್ಮಿಕ, ಶಿಬಿರಗಳನ್ನು ಆಯೋಜಿಸಲಾಗುತ್ತಿದೆ.

ಏಕಾದಶಿಯಿಂದ ಮುಂದಿನ ನಾಲ್ಕು ತಿಂಗಳವರೆಗೆ ಭಗವಂತ ಯೋಗ ನಿದ್ರೆಯಲ್ಲಿರುವುದರಿಂದ ಜಪ, ತಪ, ವೃತಾದಿಗಳ ಅನುಷ್ಠಾನಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ ಎಂದರು. ಅಖಂಡ ಭಜನೆಯಲ್ಲಿ ಶ್ರೀ ಬಾಲಾಜಿ ಸನ್ನಿಧಿಯ ಭಜನಾ ಮಂಡಳಿಯ ಮಹಿಳಾ ಸದಸ್ಯೆಯರು ಕುಣಿತ ಭಜನೆ ನಡೆಸಿದರು.

ಇತರ ಭಜನ ತಂಡಗಳು ಸಾಮೂಹಿಕ ಭಜನೆಯಲ್ಲಿ ಪಾಲ್ಗೊಂ ಡರು. ವಿದ್ವಾನ್‌ ರಾಧಾಕೃಷ್ಣ ಭಟ್‌, ಗೋಪಾಲ್‌ ಭಟ್‌, ವಿಷ್ಣು ಭಟ್‌, ಜಯರಾಮ ಭಟ್‌, ಗಣೇಶ್‌ ಭಟ್‌, ಯತಿರಾಜ ಉಪಾಧ್ಯಾಯ ಇವರು ವಿವಿಧ ಪೂಜಾ ವಿಧಿ-ವಿಧಾನಗಳಲ್ಲಿ ಸಹಕರಿಸಿದರು. ಅಹೋರಾತ್ರಿ ನಡೆದ ಅಖಂಡ ಭಜನೆಯಲ್ಲಿ ವಿವಿಧ ಪ್ರದೇಶಗಳ ಭಕ್ತರು, ತುಳು-ಕನ್ನಡಿಗರು ಪಾಲ್ಗೊಂಡರು.
 ಚಿತ್ರ-ವರದಿ : ರಮೇಶ್‌ ಅಮೀನ್‌

ಟಾಪ್ ನ್ಯೂಸ್

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.