ಜಿಲ್ಲಾ ಉಸ್ತುವಾರಿ ಸಚಿವರ ಪಟ್ಟಿಗೆ ಆಷಾಢ ಅಡ್ಡಿ


Team Udayavani, Jul 26, 2018, 12:39 PM IST

m6-jilla.jpg

ಮೈಸೂರು: ಮುಖ್ಯಮಂತ್ರಿ ಕುಮಾರಸ್ವಾಮಿ ಸರ್ಕಾರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಪಟ್ಟಿ ಬಿಡುಗಡೆ ಗಜಪ್ರಸವವಾಗಿ ಪರಿಣಮಿಸಿರುವುದರಿಂದ ಜಿಲ್ಲಾಡಳಿತಕ್ಕೊಬ್ಬರು ಮೇಟಿ ಇಲ್ಲದೆ ಅಧಿಕಾರಿಗಳು ಇಕ್ಕಟ್ಟಿಗೆ ಸಿಲುಕುವಂತಾಗಿದೆ.

ಕಾಂಗ್ರೆಸ್‌- ಜೆಡಿಎಸ್‌ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿಯಾಗಿ ಕುಮಾರಸ್ವಾಮಿ ಮೇ 23ರಂದು ಪ್ರಮಾಣ ವಚನ ಸ್ವೀಕರಿಸಿದರೂ ಮಂತ್ರಿ ಮಂಡಲ ರಚನೆ ಮಾಡಲು ಬರೋಬ್ಬರಿ 15 ದಿನಗಳೇ ಹಿಡಿಯಿತು.

ಕುಮಾರಸ್ವಾಮಿ ಮಂತ್ರಿ ಮಂಡಲದಲ್ಲಿ ಹಳೇ ಮೈಸೂರು ಭಾಗದ ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳಲ್ಲಿ ತಲಾ ಇಬ್ಬರಂತೆ ಆರು ಜನ ಮಂತ್ರಿಗಳಾಗಿದ್ದರೂ ಉಸ್ತುವಾರಿ ಸಚಿವರ ನೇಮಕ ವಾಗದಿರುವುದರಿಂದ ಜಿಲ್ಲಾಡಳಿತ ನಿಂತ ನೀರಿನಂತಾಗಿದೆ.

ಆರು ಸಚಿವರು: ಮೈಸೂರು ಜಿಲ್ಲೆಯಲ್ಲಿ ಜಿ.ಟಿ.ದೇವೇಗೌಡ-ಉನ್ನತ ಶಿಕ್ಷಣ, ಸಾ.ರಾ.ಮಹೇಶ್‌-ಪ್ರವಾಸೋದ್ಯಮ ಹಾಗೂ ರೇಷ್ಮೆ ಇಲಾಖೆ ಸಚಿವರು. ಮಂಡ್ಯ ಜಿಲ್ಲೆಯಲ್ಲಿ ಡಿ.ಸಿ.ತಮ್ಮಣ್ಣ-ಸಾರಿಗೆ, ಸಿ.ಎಸ್‌.ಪುಟ್ಟರಾಜು – ಸಣ್ಣ ನೀರಾವರಿ ಇಲಾಖೆ ಸಚಿವರು.

ಚಾಮರಾಜ ನಗರ ಜಿಲ್ಲೆಯಲ್ಲಿ ಮೂರನೇ ಬಾರಿ ಶಾಸಕರಾಗಿರುವ ಪುಟ್ಟರಂಗಶೆಟ್ಟಿ- ಹಿಂದುಳಿದವರ್ಗಗಳ ಕಲ್ಯಾಣ ಸಚಿವರು. ಮೊದಲ ಬಾರಿ ಶಾಸಕರಾಗಿರುವ ಬಿಎಸ್‌ಪಿಯ ಎನ್‌.ಮಹೇಶ್‌- ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರು.

ಮೈಸೂರು ಮತ್ತು ಮಂಡ್ಯ ಜಿಲ್ಲೆಯ ಎಲ್ಲಾ ಸಚಿವರು ಜೆಡಿಎಸ್‌ನವರೇ ಆಗಿರುವುದರಿಂದ ಒಬ್ಬರ ಮನವೊಲಿಸಿ ಮತ್ತೂಬ್ಬರಿಗೆ ಉಸ್ತುವಾರಿ ವಹಿಸುವುದು ಸಮಸ್ಯೆ ಆಗಲಾರದು. ಆದರೆ, ಚಾಮರಾಜನಗರ ಜಿಲ್ಲೆಯ ಪರಿಸ್ಥಿತಿ ಭಿನ್ನ.

ಪುಟ್ಟರಂಗ ಶೆಟ್ಟಿ ಕಾಂಗ್ರೆಸ್ಸಿಗರಾದರೆ, ಎನ್‌.ಮಹೇಶ್‌ ಬಿಎಸ್‌ಪಿ ಶಾಸಕರು. ಹೀಗಾಗಿ ಸಮ್ಮಿಶ್ರ ಸರ್ಕಾರದಲ್ಲಿ ಸಮನ್ವಯ ಸಮಿತಿ ಅಧ್ಯಕ್ಷರಾಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಸಚಿವ ಪುಟ್ಟರಂಗಶೆಟ್ಟಿ ಅವರಿಗೆ ಜಿಲ್ಲಾ ಉಸ್ತುವಾರಿ ಕೊಡಿಸಿದ್ದಾರೆ ಎಂಬ ಮಾತಿದೆ.

ಪುಟ್ಟರಾಜುಗೆ ಮಂಡ್ಯ ನಾಯಕತ್ವ: ಮಂಡ್ಯ ಜಿಲ್ಲೆಯಲ್ಲಿ ಆರಂಭದಲ್ಲಿ ಎಚ್‌.ಡಿ.ದೇವೇಗೌಡರು ತಮ್ಮ ಬೀಗರಾದ ಡಿ.ಸಿ.ತಮ್ಮಣ್ಣ ಅವರಿಗೆ ಉಸ್ತುವಾರಿ ಕೊಡಲು ಆಸಕ್ತಿ ವಹಿಸಿದ್ದರು. ಆದರೆ, ಸಿ.ಎಸ್‌.ಪುಟ್ಟರಾಜು ಚುನಾವಣೆ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಪಕ್ಷದ ನಾಯಕತ್ವವನ್ನು ತಮಗೆ ವಹಿಸಿದಂತೆ ಉಸ್ತುವಾರಿ ಸ್ಥಾನವನ್ನೂ ನೀಡಬೇಕೆಂದು ಪಟ್ಟು ಹಿಡಿದಿದ್ದರಿಂದ ಸಿ.ಎಸ್‌.ಪುಟ್ಟರಾಜು ಅವರನ್ನೇ ಜಿಲ್ಲಾ ಉಸ್ತುವಾರಿ ಮಾಡಲು ಒಪ್ಪಿಗೆ ನೀಡಲಾಗಿದೆ ಎನ್ನಲಾಗುತ್ತಿದೆ.

ಸಿದ್ದರಾಮಯ್ಯ ತವರು ಜಿಲ್ಲೆ ಮೈಸೂರಿನ ಪರಿಸ್ಥಿತಿ ಈ ಎರಡೂ ಜಿಲ್ಲೆಗಳಿಗಿಂತ ಭಿನ್ನ. ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳಲ್ಲಿ ಜೆಡಿಎಸ್‌ ಐದು, ಕಾಂಗ್ರೆಸ್‌ ಮೂರು, ಬಿಜೆಪಿಯ ಮೂವರು ಶಾಸಕರು ಆರಿಸಿ ಬಂದಿದ್ದಾರೆ. ಕಾಂಗ್ರೆಸ್‌ನ ಮೂವರು ಶಾಸಕರ ಪೈಕಿ ಸಿದ್ದರಾಮಯ್ಯ ಪುತ್ರ ಡಾ.ಯತೀಂದ್ರ

ಹಾಗೂ ಮಾಜಿ ಶಾಸಕ ದಿ.ಎಸ್‌.ಚಿಕ್ಕಮಾದು ಪುತ್ರ ಅನಿಲ್‌ ಕುಮಾರ್‌ ಇದೇ ಮೊದಲ ಬಾರಿಗೆ ಶಾಸಕರಾಗಿದ್ದರೆ, ಹಿರಿಯ ಶಾಸಕರಾಗಿರುವ ತನ್ವೀರ್‌ ಸೇs…, ಸಿದ್ದರಾಮಯ್ಯ ಮಂತ್ರಿ ಮಂಡಲದಲ್ಲಿ ದ್ವಿತೀಯಾರ್ಧದಲ್ಲಿ ಮಂತ್ರಿಯಾಗಿದ್ದರು. ಹೀಗಾಗಿ ಸಮ್ಮಿಶ್ರ ಸರ್ಕಾರದಲ್ಲಿ ಮೈಸೂರು ಜಿಲ್ಲೆಯ ಕಾಂಗ್ರೆಸ್‌ ಶಾಸಕರಿಗೆ ಮಂತ್ರಿ ಸ್ಥಾನ ದೊರೆತಿಲ್ಲ.

ಜಿಟಿಡಿಗೆ ಉಸ್ತುವಾರಿ: ಸಿದ್ದರಾಮಯ್ಯ ವಿರುದ್ಧ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭರ್ಜರಿ ಗೆಲುವು ಸಾಧಿಸಿದ ಜಿ.ಟಿ.ದೇವೇಗೌಡ ಅವರಿಗೇ ಜಿಲ್ಲಾ ಉಸ್ತುವಾರಿ ಮಂತ್ರಿ ಸ್ಥಾನ ದೊರೆಯುವುದು ಬಹುತೇಕ ಖಚಿತವಾದರೂ ಸರ್ಕಾರದಿಂದ ಅಧಿಕೃತ ಆದೇಶ ಹೊರಬಿದ್ದಿಲ್ಲ. ಚಾಮುಂಡೇಶ್ವರಿ ಕ್ಷೇತ್ರದ ಚುನಾವಣಾ ಪ್ರಚಾರ ಸಭೆಗಳಲ್ಲೇ ಕುಮಾರಸ್ವಾಮಿ, ಜಿ.ಟಿ.ದೇವೇಗೌಡರನ್ನು ಗೆಲ್ಲಿಸಿಕೊಟ್ಟರೆ ಪ್ರಮುಖ ಖಾತೆ ನೀಡಿ ಜಿಲ್ಲಾ ಉಸ್ತುವಾರಿ ಮಂತ್ರಿ ಮಾಡುವುದಾಗಿ ಹೇಳಿದ್ದರು. 

ಆದರೆ, ತಾವು ಕೇಳಿದ ಖಾತೆ ನೀಡಲಿಲ್ಲ ಎಂದು ಅಸಮಾಧಾನಗೊಂಡ ಜಿ.ಟಿ.ದೇವೇಗೌಡ, 15 ದಿನಗಳ ಬಳಿಕ ಒಲ್ಲದ ಮನಸ್ಸಿನಿಂದಲೇ ಉನ್ನತ ಶಿಕ್ಷಣ ಖಾತೆಯನ್ನು ಒಪ್ಪಿಕೊಂಡು ಕಾರ್ಯಾರಂಭ ಮಾಡಿದ್ದಾರೆ. ಅವರದೇ ಪಕ್ಷದ ಸಚಿವ ಸಾ.ರಾ.ಮಹೇಶ್‌ ನಾನು ಜಿಲ್ಲಾ ಉಸ್ತುವಾರಿ ಮಂತ್ರಿ ಸ್ಥಾನದ ಆಕಾಂಕ್ಷಿಯಲ್ಲ.

ಆದರೆ, ಕೊಟ್ಟರೆ ಬೇಡ ಎನ್ನುವುದಿಲ್ಲ ಎಂಬ ದಾಳ ಉರುಳಿಸುತ್ತಲೇ ಜಿಲ್ಲಾಮಟ್ಟದ ಅಧಿಕಾರಿಗಳನ್ನೆಲ್ಲಾ ಕರೆದು ಸಭೆ ಮಾಡಿದ್ದಲ್ಲದೆ, ಸ್ವಕ್ಷೇತ್ರ ಕೆ.ಆರ್‌.ನಗರ ತಾಲೂಕಿನ ಹರದನಹಳ್ಳಿಯಲ್ಲಿ ಗ್ರಾಮ ವಾಸ್ತವ್ಯ ಮಾಡುವ ಮೂಲಕ ಇಡೀ ಜಿಲ್ಲಾಡಳಿತವನ್ನು ಕರೆಸಿಕೊಂಡು ಸಭೆ ನಡೆಸಿ, ತಲುಪಬೇಕಾದ ಜಾಗಕ್ಕೆ ಸಂದೇಶ ರವಾನಿಸಿದ್ದಾರೆ.

ಸಚಿವರಾದ 39 ದಿನಗಳ ನಂತರ ಜಿಲ್ಲೆಗೆ ಆಗಮಿಸಿದ ಜಿ.ಟಿ.ದೇವೇಗೌಡ, ತಮ್ಮನ್ನು ಗೆಲ್ಲಿಸಿದ ಚಾಮುಂಡೇಶ್ವರಿ ಕ್ಷೇತ್ರದ ಮತದಾರರಿಗೆ ಕೃತಜ್ಞತೆ ಸಲ್ಲಿಸುವ, ಸಣ್ಣ ನೀರಾವರಿ ಸಚಿವರನ್ನು ಕರೆಸಿ ಕ್ಷೇತ್ರದ ಕೆರೆಗಳ ಅಭಿವೃದ್ಧಿ ಪರಿಶೀಲನೆ, ತಮ್ಮ ಇಲಾಖೆಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದು,

ಜೊತೆಗೆ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಸಂಬಂಧಿಸಿದ ಅಧಿಕಾರಿಗಳ ಸಭೆ ಮಾತ್ರ ನಡೆಸಿ, ಎಚ್ಚರಿಕೆ ನೀಡಿ ಹೋಗಿದ್ದಾರೆ. ಸರ್ಕಾರದಿಂದ ಅಧಿಕೃತ ಆದೇಶ ಹೊರಬೀಳದಿರುವುದರಿಂದ ಜಿಲ್ಲಾ ಉಸ್ತುವಾರಿ ಸಚಿವರ್ಯಾರು ಎಂಬುದು ತಿಳಿಯದೆ, ಜಿಲ್ಲಾಮಟ್ಟದ ಅಧಿಕಾರಿಗಳು ಯಾವ ಸಚಿವರು ಸಭೆ ಕರೆದರೂ ಹೋಗ ಬೇಕಾದ ಸ್ಥಿತಿ ಎದುರಾಗಿದೆ.

* ಗಿರೀಶ್‌ ಹುಣಸೂರು

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.