ಹದಗೆಟ್ಟ ಮುಡಿಪಿರೆ-ದೇವರಗುಂಡಿ ರಸ್ತೆ

Team Udayavani, Jul 30, 2018, 1:15 AM IST

madanthyar-road-29-7.jpg

ಮಡಂತ್ಯಾರು: ಬೆಳ್ತಂಗಡಿ ತಾ|ನ ಮುಡಿಪಿರೆ-ದೇವರಗುಂಡಿ ರಸ್ತೆಯ ಪೆರ್ನಡ್ಕಕಟ್ಟೆ ಸಮೀಪ ಸಂಪೂರ್ಣ ಹದಗೆಟ್ಟಿದೆ. ವಾಹನ ಸಂಚಾರ ಸ್ಥಗಿತವಾಗಿದ್ದು, ಜನರು ನಡೆದುಕೊಂಡು ಹೋಗುವಂತಾಗಿದೆ. ತಾತ್ಕಾಲಿಕ ಕಾಮಗಾರಿ ನಡೆಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಿ ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಕಾಮಗಾರಿಯಿಂದ ತೊಂದರೆ
ದೇವರಗುಂಡಿ ನಾಳ ರಸ್ತೆಗೆ ಜಿ.ಪಂ. ಅನುದಾನದಲ್ಲಿ ಕಾಂಕ್ರೀಟ್‌ ರಸ್ತೆ ಕಾಮಗಾರಿ ನಡೆಯುವಾಗ  ಸಾಮಗ್ರಿಗಳನ್ನು ಮಚ್ಚಿನ – ಮುಡಿಪಿರೆ ರಸ್ತೆಯಾಗಿ ಕೊಂಡೊಯ್ಯಲಾಗಿದ್ದು, ಘನ ವಾಹನ ಸಂಚಾರದಿಂದ ರಸ್ತೆ ಹದಗೆಟ್ಟಿದೆ ಎನ್ನುತ್ತಾರೆ ಸ್ಥಳೀಯರು.

ಮಚ್ಚಿನದ ಮೊದಲ ಸಂಪರ್ಕ ರಸ್ತೆ
15 ವರ್ಷಗಳ ಹಿಂದೆ ಶ್ರೀಕಂಠಪ್ಪ ಸಂಸದರಾಗಿದ್ದಾಗ ದೇವರಗುಂಡಿ – ನಾಳ ಸಂಪರ್ಕ ರಸ್ತೆಯ ದೇವರಗುಂಡಿ ಸೇತುವೆಗೆ 15 ಲ. ರೂ. ಮಂಜೂರು ಮಾಡುವ ಮೂಲಕ ಇದು ಮಚ್ಚಿನದ ಮೊದಲ ಸಂಪರ್ಕ ರಸ್ತೆ ಎಂದೆನಿಸಿಕೊಂಡಿದೆ. ಬಳಿಕ ಈ ರಸ್ತೆ ಅಭಿವೃದ್ಧಿ ಕಂಡಿರಲಿಲ್ಲ.

150ಕ್ಕೂ ಹೆಚ್ಚು ಮನೆಗಳು
ಈ ಭಾಗದಲ್ಲಿ 150ಕ್ಕೂ ಹೆಚ್ಚು ಮನೆಗಳಿದ್ದು, ಶಾಲಾ ಮಕ್ಕಳ ಸಂಖ್ಯೆ ಕೂಡ ಹೆಚ್ಚಿದೆ. ಮಡಂತ್ಯಾರು, ಪುಂಜಾಲಕಟ್ಟೆ, ಮಚ್ಚಿನ ಶಾಲೆಗೆ ಹೋಗುವ ಮಕ್ಕಳು ನಿತ್ಯ ಪರದಾಡುವಂತಾಗಿದೆ. ಶಾಲಾ ವಾಹನದಲ್ಲಿ ಹೋಗುವ ಸುಮಾರು 35 ಮಕ್ಕಳು ನಡೆದುಕೊಂಡು ಬರುವಂತಾಗಿದೆ. ಚಿಕ್ಕ ಮಕ್ಕಳನ್ನು ಎತ್ತಿಕೊಂಡೇ ರಸ್ತೆ ದಾಟಿಸಬೇಕು. ವಾಹನ ಮುಡಿಪಿರೆಯಲ್ಲಿ ಇಟ್ಟು ನಡೆದುಕೊಂಡು ಹೋಗುವ ಪರಿಸ್ಥಿತಿ ಇದೆ. ಅಂಗವಿಕಲರೊಬ್ಬರ ಅಂಗಡಿಯಿದ್ದು, ರಸ್ತೆ ಹದಗೆಟ್ಟ ಕಾರಣ ಸಾಮಗ್ರಿ ತರಲು ಆಟೋದವರು ಬರದೆ ತೊಂದರೆಗೀಡಾಗಿದ್ದಾರೆ.

ಗ್ರಾಮಸಭೆಗೆ ಅವಕಾಶವಿಲ್ಲ
ರಸ್ತೆ ಹದಗೆಟ್ಟಿದೆ. ನಾವು ವಾಹನ ಬೇರೆ ಕಡೆ ಇಟ್ಟು ನಡೆದುಕೊಂಡು ಹೋಗುತ್ತಿದ್ದೇವೆ. ಯಾರೂ ಸರಿಯಾಗಿ ಸ್ಪಂದಿಸುತ್ತಿಲ್ಲ. ಗ್ರಾಮಸಭೆ ಮೊದಲು ಕಾಮಗಾರಿ ನಡೆಸಿಕೊಡುತ್ತೇವೆ ಎಂದು ಭರವಸೆ ನೀಡಿದ್ದಾರೆ. ಇದುವರೆಗೂ ಸುದ್ದಿ ಇಲ್ಲ. ಕಾಮಗಾರಿ ನಡೆಸದಿದ್ದರೆ ಗ್ರಾಮಸಭೆ ನಡೆಸಲು ಬಿಡುವುದಿಲ್ಲ.
– ಹೆನ್ರಿ ಮೊಂತೆರೋ, ಒನಿಯಡ್ಕ 

ತಾತ್ಕಾಲಿಕ ಕಾಮಗಾರಿ
ಕಾಂಕ್ರೀಟ್‌ ರಸ್ತೆ ಆಗುವಾಗ ಘನ ವಾಹನ ಹೋದ ಕಾರಣ ರಸ್ತೆ ಹದಗೆಟ್ಟಿದೆ. ಮಳೆಗಾಲ ಕಳೆದ ಬಳಿಕ ನಡೆಸಿದ್ದರೆ ಸಮಸ್ಯೆಯಾಗುತ್ತಿರಲಿಲ್ಲ. ಪಂ.ನಲ್ಲಿ ಅನುದಾನ ಕಡಿಮೆ. 1 ಲ.ರೂ. ವೆಚ್ಚದಲ್ಲಿ ತಾತ್ಕಾಲಿಕ ಕಾಮಗಾರಿ ನಡೆಸಲಾಗಿತ್ತು. ಜನರ ಸಮಸ್ಯೆಗೆ ಸ್ಪಂದಿಸುವ ನಿಟ್ಟಿನಲ್ಲಿ ಮಳೆಗಾಲ ಕಾರಣ ತಾತ್ಕಾಲಿಕ ಕಾಮಗಾರಿ ನಡೆಸುತ್ತೇವೆ. 
– ಹರ್ಷಲತಾ, ಅಧ್ಯಕ್ಷರು, ಗ್ರಾ. ಪಂ., ಮಚ್ಚಿನ

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.