ಪರಿಸರಕ್ಕಾಗುವ ಪರಿಣಾಮ ಪರಿಶೀಲನೆ

Team Udayavani, Jul 31, 2018, 11:03 AM IST

blore-5.jpg

ಬೆಂಗಳೂರು: ನಗರದ ಸಂಚಾರ ದಟ್ಟಣೆ ತಗ್ಗಿಸಿ ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಡುವ ಉದ್ದೇಶದಿಂದ ಜಾರಿಗೆ ತರಲಾಗುತ್ತಿರುವ 102 ಕಿ.ಮೀ ಉದ್ದದ “ಎಲೆವೇಟೆಡ್‌ ಕಾರಿಡಾರ್‌’ ಯೋಜನೆಯ “ಪರಿಸರ ಪರಿಣಾಮ ಹಾಗೂ ಮೌಲ್ಯಮಾಪನ ವರದಿ’ ಸಿದ್ಧಪಡಿಸಿ ಸಲ್ಲಿಸುವಂತೆ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಯೋಜನೆ ಕುರಿತು ಸೋಮವಾರ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ, ಅಧಿಕಾರಿಗಳು ಪ್ರಸ್ತುತಪಡಿಸಿದ “ವಿಸ್ತೃತ ಸಂಭವನೀಯ ವರದಿ’ಯನ್ನು (ಡಿಟೇಲ್ಡ್‌ μಸಿಬಿಲಿಟಿ ರಿಪೋರ್ಟ್‌) ಅವಲೋಕಿಸಿದ ಮುಖ್ಯಮಂತ್ರಿಯವರು, ಯೋ ಜನೆ ಜಾರಿಗೆ ತರಬೇಕಾದರೆ ಪರಿಸರಕ್ಕೆ ಸಂಬಂಧಿಸಿದ ವಿಷಯಗಳ ಕಾರಣಕ್ಕೆ ಕೆಲವೊಂದು ಸಂದೇಹಗಳು, ಗೊಂದಲಗಳು ಉಂಟಾಗಿ ವಿರೋಧ ವ್ಯಕ್ತವಾಗುವ ಸಾಧ್ಯತೆಗಳನ್ನು ಅಲ್ಲಗಳೆಯಲು ಆಗುವುದಿಲ್ಲ. ಹಾಗಾಗಿ ಯೋಜನೆ ಬಗ್ಗೆ ಪರಿಸರ ಪರಿಣಾಮ ಹಾಗೂ ಮೌಲ್ಯಮಾಪನ ವರದಿ ಸಿದ್ಧಪಡಿಸಿ ಸಲ್ಲಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿರು. ತಮ್ಮ ಬಜೆಟ್‌ನಲ್ಲಿ ಕುಮಾರಸ್ವಾಮಿ ಈ ಯೋಜನೆ ಘೋಷಣೆ ಮಾಡಿದ್ದರು.

ಬೆಂಗಳೂರಿನ ವಾಹನ ದಟ್ಟಣೆಯನ್ನು ಸುಗಮಗೊಳಿಸಲು, ಪ್ರಯಾಣದ ಸಮಯವನ್ನು ಕಡಿತಗೊಳಿಸಲು ಹಾಗೂ ಇಂಗಾಲ ಪ್ರಮಾಣವನ್ನು ಕಡಿಮೆ ಮಾಡುವ ಉದ್ದೇಶದಿಂದ ನಗರದಲ್ಲಿ ಮೂರು ಎಲಿವೆಟೆಡ್‌ ಕಾರಿಡಾರ್‌ ಹಾಗೂ 3 ಸಂಪರ್ಕ ಕಾರಿಡಾರ್‌ ಸೇರಿ ಒಟ್ಟು 102. 04 ಕಿ.ಮೀ ಉದ್ದದ 6 ಕಾರಿಡಾರ್‌ಗಳನ್ನು ನಿರ್ಮಿಸುವ ಯೋಜನೆ ಇದಾಗಿದ್ದು, ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ನಿಯಮಿತದ ವತಿಯಿಂದ ಏಕಾಂ, ಡೆಲಾಯಿಟ… ಹಾಗೂ ಇರ್ನ್ಪ್ರಸಪೋರ್ಟ್‌ ಸಂಸ್ಥೆಗಳ ಸಹಯೋಗದೊಂದಿಗೆ ವಿಸ್ತೃತ ಸಂಭವನೀಯ ವರದಿ’ ಸಿದ್ಧಪಡಿಸಲಾಗಿದೆ. 

ವೇಗವಾಗಿ ಬೇಳೆಯುತ್ತಿರುವ ಬೆಂಗಳೂರಿನ ಸಂಚಾರ ದಟ್ಟಣೆ ಕಡಿಮೆ ಮಾಡಲು ಸಾರ್ವಜನಿಕ ಸಾರಿಗೆಗೆ ಒತ್ತು ಕೊಡಬೇಕಾಗಿದೆ. ಆದರೆ, ಮೆಟ್ರೋ, ಬಿಎಂಟಿಸಿ, ಮೊನೊ ರೈಲು, ಕೇಬಲ್‌ ಕಾರ್‌ ಇಂತಹ ಯೋಜನೆಗಳಿಂದ ಒಂದಿಷ್ಟು
ಒತ್ತಡ ಕಡಿಮೆಯಾಗ ಬಹುದು. ಆದರೆ, ಇವುಗಳಿಂದ ಮಾತ್ರ ಸಂಚಾರ ಸುಗಮವಾಗುತ್ತದೆ ಎಂದು ಹೇಳಲಿಕ್ಕಾಗುವುದಿಲ್ಲ. ಎಲಿವೆಟೆಡ್‌ ಕಾರಿಡಾರ್‌ನಂತ ಯೋಜನೆಗಳನ್ನೂ ಜಾರಿಗೆ ತರಬೇಕಾಗುತ್ತದೆ. ಮೆಟ್ರೋ 3ನೇ ಹಂತದ ಜೊತೆಗೆ ಅದಕ್ಕೆ ಸಂಪರ್ಕ ಕಲ್ಪಿಸುವ ಯೋಜನೆಗಳನ್ನು ಕಾರ್ಯಗತಗೊಳಿಸಿದಾಗ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ಎಲಿವೆಟೆಡ್‌ ಕಾರಿಡಾರ್‌ ಯೋಜನೆ ಬಗ್ಗೆ ಪ್ರಾಥಮಿಕ ಹಂತದ ಚರ್ಚೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಅಭಿಪ್ರಾಯಪಟ್ಟರು.

ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌, ಲೋಕೋಪಯೋಗಿ ಸಚಿವ ಹೆಚ್‌.ಡಿ.ರೇವಣ್ಣ, ಸಹಕಾರ ಸಚಿವ ಬಂಡೆಪ್ಪ ಕಾಶೆಂಪುರ, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್‌, ಗೃಹ ಹಾಗೂ ಲೋಕೋಪಯೋಗಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್‌ ಗೋಯಲ್‌, ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಸಂಬಂಧಪಟ್ಟ ಇಲಾಖೆಗಳು ಅಧಿಕಾರಿಗಳು ಉಪಸ್ಥಿತರಿದ್ದರು.

ರೇವಣ್ಣ ಉಪಸ್ಥಿತಿ; ಸಿಎಂ ಸಮಜಾಯಿಷಿ ಎಲಿವೇಟೆಡ್‌ ಕಾರಿಡಾರ್‌ ಯೋಜನೆ ಸಂಬಂಧಿತ ಸಭೆಯಲ್ಲಿ ಲೋಕೋಪಯೋಗಿ ಸಚಿವ ಎಚ್‌.ಡಿ.ರೇವಣ್ಣ ಸಹ ಉಪಸ್ಥಿತರಿದ್ದರು. ಇದಕ್ಕೆ ಸಮಜಾಯಿಷಿ ನೀಡಿದ ಮುಖ್ಯಮಂತ್ರಿ ಎಚ್‌ಡಿಕೆ, ಈ ಯೋಜನೆ ಲೋಕೋಪಯೋಗಿ ಇಲಾಖೆ ವ್ಯಾಪಿಗೆ ಬರಲಿದೆ, ಹೀಗಾಗಿ ರೇವಣ್ಣ ಬಂದಿದ್ದಾರೆ. ಮಾಧ್ಯಮದವರು, ಬೆಂಗಳೂರು ಅಭಿವೃದ್ಧಿಯನ್ನು ರೇವಣ್ಣ ಅವರು ಹೈಜಾಕ್‌ ಮಾಡುತ್ತಿದ್ದಾರೆ ಎಂದು ಬಿಂಬಿಸಬೇಡಿ ಎಂದು ಚಟಾಕಿ ಹಾರಿಸಿದರು.

14 ವರ್ಷಗಳಿಂದ ಪ್ರಸ್ತಾವನೆಯಲ್ಲಿರುವ ಎಲಿವೆಟೆಡ್‌ ಕಾರಿಡಾರ್‌ ಯೋಜನೆ ಬಗ್ಗೆ ಇಂದು ಪ್ರಾಥಮಿಕ ಚರ್ಚೆ ನಡೆಸಿದ್ದೇವೆ. ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡೇ ಯೋಜನೆ ಕಾರ್ಯಗತ ಗೊಳಿಸಲಾಗುವುದು. ಒಂದೊಮ್ಮೆ
ಜನ, ಯೋಜನೆ ಬೇಡ, ನಾವು ಟ್ರಾಫಿಕ್‌ನಲ್ಲೇ ಓಡಾಡುತ್ತೇವೆ ಎಂದರೆ ನಾವೇನೂ ಮಾಡಲಾಗುವುದಿಲ್ಲ.
ಎಚ್‌.ಡಿ. ಕುಮಾರಸ್ವಾಮಿ, ಮುಖ್ಯಮಂತ್ರಿ 

ಟಾಪ್ ನ್ಯೂಸ್

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.