ಹಳ್ಳಿಗಳಿಗೆ ಹೋಗದ ಪಿಡಿಒಗಳ ಬೆಂಗಳೂರು ಕೆಲಸ

Team Udayavani, Aug 2, 2018, 6:00 AM IST

rural-area.jpg

ಬೆಂಗಳೂರು: ಗ್ರಾಮೀಣ ಜನರ ಸೇವೆಗೆಂದು ನೇಮಕಗೊಂಡರೂ ಗ್ರಾಮಗಳತ್ತ ಮುಖ ಮಾಡದ ಸುಮಾರು 15ಕ್ಕೂ ಅಧಿಕ ಮಂದಿ ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳ ಕಾರ್ಯಕ್ಷೇತ್ರ ಶಕ್ತಿಕೇಂದ್ರ ವಿಧಾನಸೌಧ ಬಳಿಯ ವಿಶ್ವೇಶ್ವಯ್ಯ ಗೋಪುರ!

ಗ್ರಾಮಗಳಿಗೆ ತೆರಳದೆ ರಾಜಧಾನಿಯಲ್ಲೇ ಏಳು ವರ್ಷದಿಂದ ಬೀಡುಬಿಟ್ಟಿರುವ ಪಿಡಿಒಗಳು ಸ್ವಸ್ಥಾನಕ್ಕೆ ತೆರಳಬೇಕೆಂಬ ಸರ್ಕಾರದ ಸೂಚನೆಗೂ ಕ್ಯಾರೆ ಎಂದಿಲ್ಲ. ಗ್ರಾಮಗಳಿಂದ ದೂರವೇ ಉಳಿದಿರುವ ಈ ಅಧಿಕಾರಿಗಳು ಪಿಡಿಒ ಹುದ್ದೆಯ ಪಗಾರ ಪಡೆಯುತ್ತಿದ್ದರೂ ಸಚಿವಾಲಯದ ಕಿರಿಯ ಸಹಾಯಕರಾಗಿ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ.

ಅಂಬೇಡ್ಕರ್‌ ವೀದಿಯಲ್ಲಿರುವ ವಿಶ್ವೇಶ್ವರಯ್ಯ ಗೋಪುರದಲ್ಲಿನ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಕೇಂದ್ರ ಕಚೇರಿಯ ವಿವಿಧ ಶಾಖೆಗಳಲ್ಲಿ ಸುಮಾರು 15ಕ್ಕೂ ಹೆಚ್ಚು ಪಂಚಾಯತ್‌ ಅಧಿಕಾರಿಗಳು (ಪಿಡಿಒ) ಸಚಿವಾಲಯದ ಕಿರಿಯ ಸಹಾಯಕರಾಗಿ ನಿಯೋಜನೆ ಸೇವೆ ಮೇಲೆ ಕಾರ್ಯ ನಿರ್ವಹಿಸುತ್ತಿದ್ದಾರೆ.

ಏಳು ವರ್ಷಗಳಿಂದ ಇದೇ ಕಚೇರಿಯಲ್ಲಿ ಸೇವೆ ಸಲ್ಲಿಸುತ್ತಿರುವ ಈ ಪಿಡಿಒಗಳು ತಕ್ಷಣವೇ ಸ್ವಸ್ಥಾನಗಳಿಗೆ ಹಿಂತಿರುಗುವಂತೆ ಸರ್ಕಾರ 2016ರಲ್ಲೇ ಸೂಚನೆ ನೀಡಿತ್ತು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆಯಲ್ಲಿ ಎರವಲು ಸೇವೆ ಮೇಲೆ ನಿಯೋಜನೆಗೊಂಡ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯತ್‌ ಕಾರ್ಯದರ್ಶಿಗಳು ತಕ್ಷಣದಿಂದ ಜಾರಿಗೆ ಬರುವಂತೆ ಬಿಡುಗಡೆಗೊಳಿಸಿ ಆಯಾ ಜಿಲ್ಲಾ ಪಂಚಾಯತ್‌ಗೆ ಹಿಂತಿರುಗುವಂತೆ ಆದೇಶ ಹೊರಡಿಸಿತ್ತು. ಆದರೆ ಈ ಆದೇಶವನ್ನು ಕೆಲವು ಅಧಿಕಾರಿಗಳು ಪಾಲನೆ ಮಾಡಿದಂತೆ ಕಾಣುತ್ತಿಲ್ಲ.

ಕರ್ನಾಟಕ ನಾಗರಿಕ ಸೇವಾ ನಿಯಮ 423ರ ಅನ್ವಯ, ನಿಯೋಜನೆಯಡಿ ಕಾರ್ಯ ನಿರ್ವಹಿಸುವಾಗ ಮೂಲ ಹುದ್ದೆಯ ಸರಿಸಮಾನವಾದ ಜವಾಬ್ದಾರಿಯನ್ನೇ ನಿರ್ವಹಿಸಬೇಕು. ಆದರೆ ಈ ನಿಯಮ ಪಾಲನೆಯಾದಂತಿಲ್ಲ. ಸರ್ಕಾರದ ಮಾರ್ಗಸೂಚಿಗಳಿಗೆ ವಿರುದ್ಧವಾಗಿ ನಿಯೋಜಿತ ಸೇವೆ ಸಲ್ಲಿಸುತ್ತಿರುವ ಪಿಡಿಒಗಳು ಹಲವು ಕಾರಣಗಳ ನೆಪವೊಡ್ಡಿ ಆಯಕಟ್ಟಿನ ಹುದ್ದೆಗಳಲ್ಲೇ ಮುಂದುವರಿದಿದ್ದಾರೆ.

ಸರ್ಕಾರದ ಬೊಕ್ಕಸಕ್ಕೂ ನಷ್ಟ:
ಸಚಿವಾಲಯದ ಕಿರಿಯ ಸಹಾಯಕರ ವೇತನ ಶ್ರೇಣಿ ರೂ.21400 – 42000ಗಳಾಗಿದ್ದು, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ವೇತನ ಶ್ರೇಣಿ ರೂ.37900 -70850ಗಳಾಗಿರುತ್ತದೆ. ಆದರೆ, ಸರಿ ಸುಮಾರು ಅರ್ಧದಷುx ಕಡಿಮೆ ವೇತನ ಶ್ರೇಣಿ ಇರುವ ಕಿರಿಯ ಸಹಾಯಕರ ಹುದ್ದೆಗಳಲ್ಲಿ ಪಿಡಿಒಗಳು ಕರ್ತವ್ಯ ನಿರ್ವಸುತ್ತಾ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವೇತನ ಪಡೆಯುತ್ತಿರುವುದರಿಂದ ವೇತನಕ್ಕೆ ಸಮಾನವಾದ ಜವಾಬ್ದಾರಿ ನಿರ್ವಹಿಸದಂತಾಗಿದೆ.

ಸಚಿವಾಲಯದ ಕಿರಿಯ ಸಹಾಯಕರ ಹುದ್ದೆಗಳ ಕರ್ತವ್ಯಗಳಿಗೆ ಸೆಕ್ರೆಟೇರಿಯೇಟ್‌ ಮ್ಯಾನ್ಯುಯಲ್‌ ಇಲಾಖಾ ಪರೀಕ್ಷೆಯ ಅರ್ಹತೆ ಅಗತ್ಯವಾಗಿರುತ್ತದೆ. ಅಲ್ಲದೇ ಇಂತಹ ಹುದ್ದೆಗಳಿಗೆ ಸಮಾನ ಕೇಡರ್‌ ನೌಕರರು ಸಾಕಷ್ಟು ಲಭ್ಯರುತ್ತಾರೆ. ಆದರೆ ಸರ್ಕಾರವೇ ನಿಯಮಗಳನ್ನು ಗಾಳಿಗೆ ತೂರಿ ಕಿರಿಯ ಸಹಾಯಕರ ಹುದ್ದೆಗಳಿಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳನ್ನು ನಿಯೋಜಿಸಿರುವುದು ಹಲವು ರೀತಿಯ ಚರ್ಚೆಗೆ ಕಾರಣವಾಗಿದೆ.

ಒಬ್ಬರಿಗೆ ಮೂರು ಪಂಚಾಯತ್‌!
ಗ್ರಾಮ ಸ್ವರಾಜ್‌ ಶಾಖೆ, ಪಶ್ಚಿಮ ಘಟ್ಟ ಶಾಖೆ, ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯತ್‌ ಕಚೇರಿಗಳಲ್ಲಿ ಕೂಡ ಇದೇ ಪರಿಸ್ಥಿತಿ ಇದೆ. 200ಕ್ಕೂ ಅಧಿಕ ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳು ಮತ್ತು ಗ್ರಾಮ ಪಂಚಾಯತ್‌ ಕಾರ್ಯದರ್ಶಿಗಳು ನಿಯೋಜನೆ ಆಧಾರದಲ್ಲಿ ಕಾರ್ಯನಿರ್ವಸುತ್ತಿದ್ದಾರೆ. ಆ ಹಿನ್ನೆಲೆಯಲ್ಲಿ ಪಿಡಿಒ ಕೊರತೆಯಿದ್ದು, ಕೆಲವು ಪಿಡಿಒಗಳಿಗೆ 2-3 ಗ್ರಾಮ ಪಂಚಾಯಿತಿಗಳ ಜವಾಬ್ದಾರಿ ಹೊರಿಸಲಾಗಿದೆ. 

ಇಲಾಖೆಯ ಹಲವು ಶಾಖೆಗಳಲ್ಲಿ ನಿಯೋಜನೆ ಸೇವೆಯ ಮೇಲೆ ಕೆಲವರು ಕೆಲಸ ಮಾಡುತ್ತಿರುವುದು ನಿಜ. ಇದರಲ್ಲಿ ಕೆಲವರು ಸಚಿವರು, ಶಾಸಕರ ಆಪ್ತ ಸಹಾಯಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಆದರೆ ನಿಯೋಜನೆ ಅಧಿಕಾರಿಗಳು ಇಂತಹದ್ದೇ ಕೆಲಸ ಮಾಡಬೇಕೆಂಬ ಮಾನದಂಡ ಇಲ್ಲ. ಸೆಕ್ರೇಟೆರಿಯೇಟ್‌ ವ್ಯಾಪ್ತಿಯಲ್ಲಿನ ಎಲ್ಲ ಕೆಲಸವನ್ನು ನಿರ್ವಹಿಸುತ್ತಾರೆ.
– ಕೆಂಪೇಗೌಡ, ಆರ್‌ಡಿಪಿಆರ್‌ ನಿರ್ದೇಶಕರು

– ದೇವೇಶ ಸೂರಗುಪ್ಪ

ಟಾಪ್ ನ್ಯೂಸ್

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

6-uv-fusion

UV Fusion: ಮಿತಿಯೊಳಗಿನ ಬದುಕು ನೆನಪಾದಾಗ

5-vitla

Vitla Palace: ಶತಮಾನಗಳ ಇತಿಹಾಸದ ವಿಟ್ಲ ಅರಮನೆ

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.