ಹೈಕೋರ್ಟ್‌ ತರಾಟೆ ಬೆನ್ನಲ್ಲೇ 8 ಸಾವಿರ ಫ್ಲೆಕ್ಸ್‌, ಬ್ಯಾನರ್‌ ತೆರವು

Team Udayavani, Aug 2, 2018, 12:28 PM IST

highcourt4.jpg

ಬೆಂಗಳೂರು: ನಗರದಲ್ಲಿ ಅನಧಿಕೃತ ಫ್ಲೆಕ್ಸ್‌, ಬ್ಯಾನರ್‌ ಹಾಗೂ ಬಂಟಿಂಗ್ಸ್‌ ತೆರವುಗೊಳಿಸದ ಪಾಲಿಕೆ ಕ್ರಮಕ್ಕೆ ಅಧಿಕಾರಿಗಳನ್ನು ಬುಧವಾರ ಹೈಕೋರ್ಟ್‌ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತ್ತು. ಜತೆಗೆ ಮಧ್ಯಾಹ್ನದೊಳಗೆ ವರದಿ ನೀಡುವಂತೆ ಸೂಚಿನೆ ನೀಡಿತ್ತು.

ಆ ಹಿನ್ನೆಲೆಯಲ್ಲಿ ಪಾಲಿಕೆ ಆಯುಕ್ತರು, ಪಾಲಿಕೆಯ ಅಧಿಕಾರಿಗಳು ಎಲ್ಲ ಕೆಲಸಗಳನ್ನು ಬದಿಗೊತ್ತಿ ಕೂಡಲೇ ನಗರದಲ್ಲಿರುವ ಫ್ಲೆಕ್ಸ್‌, ಬ್ಯಾನರ್‌ಗಳ ತೆರವು ಕಾರ್ಯಾಚರಣೆ ಆರಂಭಿಸುವುದಂತೆ ಆದೇಶ ಹೊರಡಿಸಿ, ಮಧ್ಯಾಹ್ನ 2 ಗಂಟೆಯೊಳಗೆ ನಗರದಲ್ಲಿರುವ ಫ್ಲೆಕ್ಸ್‌ ಬ್ಯಾನರ್‌ಗಳನ್ನು ತೆರವು ಮಾಡಿ ಫೋಟೋಗಳನ್ನು ವಾಟ್ಸಾಪ್‌ ಮೂಲಕ ತಮಗೆ ಮಾಹಿತಿ ನೀಡುವಂತೆ ಆದೇಶಿಸಿದ್ದರು.

ಆ ಹಿನ್ನೆಲೆಯಲ್ಲಿ ಪಾಲಿಕೆಯ ಎಲ್ಲ ಎಂಟು ವಲಯಗಳಲ್ಲಿ ಬೆಳಗ್ಗೆ 11 ಗಂಟೆಗೆ ಏಕಕಾಲದಲ್ಲಿ ಕಾರ್ಯಾಚರಣೆ ಆರಂಭಿಸಿದ ಪಾಲಿಕೆ ಸಿಬ್ಬಂದಿ, ಮಧ್ಯಾಹ್ನ 2 ಗಂಟೆ ವೇಳೆಗೆ ಕೇಂದ್ರ ಭಾಗದ ಪ್ರಮುಖ ರಸ್ತೆಗಳಲ್ಲಿ ಅಳವಡಿಸಲಾಗಿದ್ದ 5 ಸಾವಿರಕ್ಕೂ ಹೆಚ್ಚು ಫ್ಲೆಕ್ಸ್‌, ಬ್ಯಾನರ್‌ಗಳನ್ನು ತೆರವುಗೊಳಿಸಿದ್ದಾರೆ. 

ಫ್ಲೆಕ್ಸ್‌ ಅಳವಡಿಸಿದರೆ ಜೈಲುವಾಸ ಗ್ಯಾರೆಂಟಿ: ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಫ್ಲೆಕ್ಸ್‌, ಬ್ಯಾನರ್‌, ಬಂಟಿಂಗ್ಸ್‌ ಹಾಗೂ ಬಾವುಟನ್ನು ಅಳವಡಿಸುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲು ಬಿಬಿಎಂಪಿ ಮುಂದಾಗಿದೆ. ಅದರಂತೆ ತಪ್ಪಿತಸ್ಥರ ವಿರುದ್ಧ ಕೆಎಂಸಿ ಕಾಯ್ದೆ 1976ರ ಮತ್ತು ಕರ್ನಾಟಕ ಮುಕ್ತ ಪ್ರದೇಶಗಳ (ಸಂರಕ್ಷಣೆ) ಕಾಯ್ದೆ 1981ರ ಅನ್ವಯ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಲಾಗುತ್ತದೆ. ಕಾಯ್ದೆಯಂತೆ ತಪ್ಪಿತಸ್ಥರಿಗೆ 6 ತಿಂಗಳವರೆಗೆ ಜೈಲುವಾಸ ಅಥವಾ 1000 ರೂ. ದಂಡ ಅಥವಾ ದಂಡದೊಂದಿಗೆ ಜೈಲುವಾಸ ವಿಧಿಸಲಾಗುತ್ತದೆ.

ನಗರದಲ್ಲಿ 12 ಸಾವಿರಕ್ಕೂ ಹೆಚ್ಚು ಫ್ಲೆಕ್ಸ್‌ ಬ್ಯಾನರ್‌ಗಳಿವೆ ಎಂದು ಅಂದಾಜಿಸಲಾಗಿದ್ದು, ಬುಧವಾರ ತಡರಾತ್ರಿಯವರೆಗೆ ಸುಮಾರು 8 ಸಾವಿರ ಫ್ಲೆಕ್ಸ್‌, ಬ್ಯಾನರ್‌ ತೆರವುಗೊಳಿಸಲಾಗಿದೆ. ಗುರುವಾರ ಕಾರ್ಯಾಚರಣೆ ಪೂರ್ಣವಾಗಲಿದ್ದು, ಉಪಮುಖ್ಯಮಂತ್ರಿಗಳು ಫ್ಲೆಕ್ಸ್‌ ಅಳವಡಿಕೆ ಮಾಡುವವರ ವಿರುದ್ದ ಕಠಿಣ ಕ್ರಮಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. 
-ಎನ್‌.ಮಂಜುನಾಥ ಪ್ರಸಾದ್‌, ಬಿಬಿಎಂಪಿ ಆಯುಕ್ತ

ಟಾಪ್ ನ್ಯೂಸ್

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

10

Bengaluru: ಫ್ಲೈಓವರ್‌ಗಳಲ್ಲೂ ಕಸ ಸುರಿಯುವ ವಾಹನ ಸವಾರರು 

7

Bengaluru: ಸೈಕಲ್‌ ಕದಿಯುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಬಂಧನ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.