ಅ.2ರೊಳಗೆ ಕರ್ನಾಟಕ ಬಯಲು ಬಹಿರ್ದೆಸೆ ಮುಕ್ತ: ಡಾ.ಜಿ.ಪರಮೇಶ್ವರ್‌

Team Udayavani, Aug 3, 2018, 6:00 AM IST

180802kpn84.jpg

ಬೆಂಗಳೂರು:ಅಕ್ಟೋಬರ್‌ 2 ರೊಳಗೆ ಕರ್ನಾಟಕ ಬಯಲು ಬಹಿರ್ದೆಸೆ ಮುಕ್ತ ರಾಜ್ಯವಾಗಲಿದೆ ಎಂದು  ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ.

ವಿಧಾನಸೌಧ-ವಿಕಾಸಸೌಧ ನಡುವಿನ ಗಾಂಧಿ ಪ್ರತಿಮೆ ಬಳಿ ಗುರುವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸ್ವತ್ಛಭಾರತ ಅಭಿಯಾನದಡಿಯಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಆಯೋಜಿಸಲಾಗಿದ್ದ ” ಸ್ವಚ್ಚ ಸರ್ವೇಕ್ಷಣಾ ಗ್ರಾಮೀಣ-18′ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕರ್ನಾಟಕವನ್ನು ಬಯಲು ಬಹಿರ್ದೆಸೆ ಮುಕ್ತಗೊಳಿಸುವ ನಿಟ್ಟಿನಲ್ಲಿ ಈಗಾಗಲೇ 20 ಜಿಲ್ಲೆಗಳಲ್ಲಿ 22 ಲಕ್ಷ ಶೌಚಾಲಯ ನಿರ್ಮಾಣ ಪೂರ್ಣಗೊಳಿಸಲಾಗಿದೆ ಎಂದು ಹೇಳಿದರು.

22 ಲಕ್ಷ ಶೌಚಾಲಯ ನಿರ್ಮಾಣ ಮಾಡುವುದು  ಸಾಮಾನ್ಯವೇನಲ್ಲ. ಈ ವಿಚಾರದಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆ ಸಮಾರೋಪಾದಿ ಕೆಲಸ ಮಾಡಿದೆ. ಇನ್ನೂ 10 ಜಿಲ್ಲೆಗಳಲ್ಲಿ 5 ಲಕ್ಷ ಶೌಚಾಲಯ ನಿರ್ಮಾಣ ಬಾಕಿಯಿದೆ ಎಂದು ತಿಳಿಸಿದರು.

ಸ್ವಚ್ಚತೆ ಎಂಬುದು  ನಮ್ಮ ಜೊತೆ ಜೊತೆಯಲ್ಲೇ ಬರಬೇಕು. ಮೊದಲಿಗೆ  ಪರಿಸರ, ಮನೆ ನಂತರ ನಾವು ಸ್ವಚ್ಚವಾಗಬೇಕು. ವಿದೇಶಗಳಲ್ಲಿ ಸ್ವಚ್ಚತೆ ಬಗ್ಗೆ ಹೆಚ್ಚಿನ ಒತ್ತು ನೀಡಲಾಗಿದೆ. ಕರ್ನಾಟಕವೂ ಸ್ವಚ್ಚತೆ ವಿಚಾರದಲ್ಲಿ ನಂಬರ್‌ ಒನ್‌ ಆಗಬೇಕು ಎಂದು ಹೇಳಿದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಕೃಷ್ಣಭೈರೇಗೌಡ ಮಾತನಾಡಿ, ಗ್ರಾಮೀಣ ಪ್ರದೇಶಗಳಲ್ಲಿ ಸ್ವಚ್ಚತೆ ಕಾಪಾಡುವುದು  ಈ ಯೋಜನೆಯ ಮುಖ್ಯ ಗುರಿ.  ನಿಟ್ಟಿನಲ್ಲಿ ಶೌಚಾಲಯ ನಿರ್ಮಾಣಕ್ಕೆ ಸರ್ಕಾರ ಉತ್ತೇಜನ ನೀಡುತ್ತಿದ್ದು ಪ್ರತಿ ಕುಟುಂಬಕ್ಕೂ ಶೌಚಾಲಯ ಒದಗಿಸುತ್ತೇವೆ ಎಂದು ತಿಳಿಸಿದರು.

ರಾಜ್ಯದ 20 ಜಿಲ್ಲೆಗಳಲ್ಲಿ ಶೌಚಾಲಯ ನಿರ್ಮಾಣ ಸಂಪೂರ್ಣವಾಗಿವೆ. ಉಳಿದ 10 ಜಿಲ್ಲೆಗಳಲ್ಲಿ ಅಕ್ಟೋಬರ್‌ ಒಳಗೆ ಪೂರ್ಣಗೊಳ್ಳಲಿದೆ. ಇದರ ಜೊತೆಗೆ ಚರಂಡಿಗಳ ನಿರ್ಮಾಣ ಹಾಗೂಚರಂಡಿಗಳ ಸ್ವಚ್ಚತೆಗೂ ಪ್ರಾಮುಖ್ಯ ನೀಡಲಾಗಿದೆ ಎಂದು ಹೇಳಿದರು.

ಹಳ್ಳಿಗಳನ್ನ ಸ್ವಚ್ಚವಾಗಿಡುವ ಬಗ್ಗೆ ಜಾಗೃತಿ ಅಭಿಯಾನ ಸಹ ಹಮ್ಮಿಕೊಂಡಿದ್ದು ಮಕ್ಕಳ ಮೂಲಕ ಸ್ವಚ್ಚತಾ ಜಾಗೃತಿ ಕಾರ್ಯಕ್ರಮ ರೂಪಿಸಲಾಗಿದೆ. ಮಕ್ಕಳಿಂದಲೇ ಹಿರಿಯರಲ್ಲಿ ತ್ಯಾಜ್ಯ, ಪ್ಲಾಸ್ಟಿಕ್‌, ಸ್ವಚ್ಚತೆ  ಬಗ್ಗೆ ಜಾಗೃತಿ ಮೂಡಿಸುತ್ತೇವೆ ಎಂದು ತಿಳಿಸಿದರು.

ಉತ್ತರಕರ್ನಾಟಕ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ. ಆ ಭಾಗದ ಅಭಿವೃದ್ಧಿಗೆ  ಹೆಚ್ಚಿನ ಒತ್ತು  ನೀಡಿದ್ದೇವೆ. ಇಷ್ಟಾದರೂ ಪ್ರತ್ಯೇಕ ರಾಜ್ಯದ ಮಾತು ಸಲ್ಲದು. ನಾವೆಲ್ಲರೂ ಅಖಂಡ ಕರ್ನಾಟಕದವರು. ಬಂದ್‌ ಯಶಸ್ವಿಯಾಗಿಲ್ಲ, ಬಂದ್‌ಗೆ ಆ ಭಾಗದ ಜನರು ಒಪ್ಪುವುದಿಲ್ಲ. ರಾಜ್ಯವನ್ನ ಒಡೆಯುವ ವಿಚಾರಕ್ಕೆ ಪಕ್ಷಗಳು ಕೈಹಾಕಬಾರದು.
– ಡಾ. ಜಿ.ಪರಮೇಶ್ವರ್‌

ಟಾಪ್ ನ್ಯೂಸ್

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

dandeli

Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

3-dandeli

Dandeli: 6 ವರ್ಷದ ಮಗುವನ್ನು ನಾಲಾಕ್ಕೆಸೆದ ತಾಯಿ: ಮುಂದುವರಿದ ಮಗುವಿನ ಶೋಧ ಕಾರ್ಯಾಚರಣೆ

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ

2-vitla

Vitla: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

Lok Sabha Elections ಹಂತ-2: ಬಹಿರಂಗ ಪ್ರಚಾರಕ್ಕೆ ಇಂದು ತೆರೆ

Lok Sabha Elections ಹಂತ-2: ಬಹಿರಂಗ ಪ್ರಚಾರಕ್ಕೆ ಇಂದು ತೆರೆ

Karnataka Govt ನೀತಿ ಸಂಹಿತೆ ಸಡಿಲಿಕೆಗೆ ಮನವಿ: ಸರಕಾರ ಚಿಂತನೆ

Karnataka Govt ನೀತಿ ಸಂಹಿತೆ ಸಡಿಲಿಕೆಗೆ ಮನವಿ: ಸರಕಾರ ಚಿಂತನೆ

CM ವಿರುದ್ಧ ನಕಲಿ ಪೋಸ್ಟ್‌: ವಿಕ್ರಮ್‌ ಹೆಗ್ಡೆ, ಗಿಳಿಯಾರ್‌ ಬಂಧನಕ್ಕೆ ತಾತ್ಕಾಲಿಕ ತಡೆ

CM ವಿರುದ್ಧ ನಕಲಿ ಪೋಸ್ಟ್‌: ವಿಕ್ರಮ್‌ ಹೆಗ್ಡೆ, ಗಿಳಿಯಾರ್‌ ಬಂಧನಕ್ಕೆ ತಾತ್ಕಾಲಿಕ ತಡೆ

Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್‌

Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

dandeli

Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

3-dandeli

Dandeli: 6 ವರ್ಷದ ಮಗುವನ್ನು ನಾಲಾಕ್ಕೆಸೆದ ತಾಯಿ: ಮುಂದುವರಿದ ಮಗುವಿನ ಶೋಧ ಕಾರ್ಯಾಚರಣೆ

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.