ಮಾನವ ಹಕ್ಕು  ಬಾಕಿ ಪ್ರಕರಣ ವರದಿ ಕೊಡಿ

Team Udayavani, Aug 3, 2018, 4:49 PM IST

3-agust-18.jpg

ಬೆಳಗಾವಿ: ಮಾನವ ಹಕ್ಕುಗಳ ಆಯೋಗಕ್ಕೆ ಸಂಬಂಧಿಸಿದ ಪ್ರಕರಣಗಳ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಮೂರು ತಿಂಗಳೊಳಗಾಗಿ ವರದಿ ಸಲ್ಲಿಸಬೇಕೆಂದು ರಾಜ್ಯ ಮಾನವ ಹಕ್ಕುಗಳ ಆಯೋಗದ ಸದಸ್ಯ ರೂಪಕ ಕುಮಾರ ದತ್ತಾ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಬೆಳಗಾವಿ ಜಿಲ್ಲೆಗೆ ಸಂಬಂಧಿಸಿದ ಮಾನವ ಹಕ್ಕುಗಳ ಆಯೋಗದ ಬಾಕಿ ಪ್ರಕರಣಗಳ ಕುರಿತ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಆಯೋಗಕ್ಕೆ ವರದಿ ಸಲ್ಲಿಸಲು ವಿಳಂಬ ಮಾಡಿದರೆ ನೋಟಿಸ್‌ ನೀಡಲಾಗುವುದು. ನಂತರವೂ ಉತ್ತರ ನೀಡದಿದ್ದರೆ ಸಂಬಂಧಿಸಿದ ಅಧಿಕಾರಿಗಳಿಗೆ ಸಮನ್ಸ್‌ ಜಾರಿ ಮಾಡಲಾಗುವುದು. ಹೀಗಾಗಿ ಸಕಾಲಕ್ಕೆ ವರದಿ ಸಲ್ಲಿಸುವಂತೆ ಎಚ್ಚರಿಸಿದರು.

ಕೆಳಹಂತದ ಅಧಿಕಾರಿಗಳ ವರದಿಯನ್ನೇ ಜಿಲ್ಲಾಮಟ್ಟದ ಅಧಿ ಕಾರಿಗಳು ಯಥಾವತ್ತಾಗಿ ಕಳುಹಿಸದೇ ಖುದ್ದಾಗಿ ಪ್ರಕರಣ ಪರಿಶೀಲಿಸಿ, ವಿಚಾರಣೆ ನಡೆಸಿ ವರದಿ ಕಳುಹಿಸಿಕೊಡಬೇಕು. ಪ್ರಕರಣಗಳು ವಿಳಂಬವಾಗುವುದರಿಂದ ಸಾರ್ವಜನಿಕರಿಗೆ ಆಡಳಿತ ವ್ಯವಸ್ಥೆ ಮೇಲೆ ನಂಬಿಕೆ ಇರುವುದಿಲ್ಲ. ಹೀಗಾಗಿ ವರದಿ ಸಲ್ಲಿಸಲು ವಿಳಂಬ ಮಾಡುವುದು ಸಮಂಜಸವಲ್ಲ. ಜಿಲ್ಲಾಮಟ್ಟದ ಅಧಿಕಾರಿಗಳು ಪ್ರಕರಣಗಳನ್ನು ಸೂಕ್ತ ರೀತಿಯಲ್ಲಿ ಪರಿಶೀಲಿಸಿ ಕಳುಹಿಸಿಕೊಡುವುದರಿಂದ ಆಯೋಗಕ್ಕೂ ಶೀಘ್ರದಲ್ಲೇ ಪ್ರಕರಣ ಇತ್ಯರ್ಥ ಪಡಿಸಲು ಅನುಕೂಲವಾಗುತ್ತದೆ ಎಂದರು.

ಉತ್ತಮ ಆಡಳಿತಕ್ಕೆ ಅನುಕೂಲ ಮಾಡಿಕೊಡುವುದು ಆಯೋಗದ ಉದ್ದೇಶವಾಗಿದೆ. ಜಿಲ್ಲಾಮಟ್ಟದಲ್ಲಿ ಆಡಳಿತ ಸರಿಯಾಗಿದ್ದರೆ ಇಡೀ ರಾಜ್ಯವೇ ಸುವ್ಯವಸ್ಥಿತವಾಗಿರುತ್ತದೆ. ಹೀಗಾಗಿ ಜಿಲ್ಲಾಮಟ್ಟದ ಅಧಿ ಕಾರಿಗಳು ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕೆಂದು ತಿಳಿಸಿದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸುಧೀರಕುಮಾರ ರೆಡ್ಡಿ, ಅಪರ ಜಿಲ್ಲಾಧಿಕಾರಿ ಎಚ್‌.ಬಿ. ಬೂದೆಪ್ಪ, ಮಹಾನಗರ ಪಾಲಿಕೆ ಆಯುಕ್ತ ಶಶಿಧರ ಕುರೇರ ಸೇರಿದಂತೆ ಜಿಲ್ಲಾ ಪಂಚಾಯತ, ಪೊಲೀಸ್‌ ಇಲಾಖೆ, ಆರೋಗ್ಯ, ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.

ಪ್ರಕರಣಗಳ ವಿಚಾರಣೆ
ಜಿಲ್ಲಾಧಿಕಾರಿಗಳ ಕಚೇರಿ, ಜಿಲ್ಲಾ ಪಂಚಾಯತ, ಪೊಲೀಸ್‌ ಇಲಾಖೆ, ಆರೋಗ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಬಾಕಿ ಇರುವ ಪ್ರಕರಣಗಳ ಕುರಿತು ರೂಪಕ ಕುಮಾರ ದತ್ತಾ ಅವರು ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದರು. ನಂತರ ಅವುಗಳ ಬಗ್ಗೆ ಶೀಘ್ರವೇ ಆಯೋಗಕ್ಕೆ ವರದಿ ಸಲ್ಲಿಸುವಂತೆ ಸೂಚಿಸಿದರು.

ಟಾಪ್ ನ್ಯೂಸ್

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

prahlad-joshi

2025 ರಿಂದ ಕಲ್ಲಿದ್ದಲು ಆಮದು ಸಂಪೂರ್ಣವಾಗಿ ಬಂದ್: ಪ್ರಹ್ಲಾದ್ ಜೋಶಿ

1-wewewqeeq

Relaxed mood; ಮೊಮ್ಮಗಳೊಂದಿಗೆ ಆಟವಾಡಿದ ಕೇಂದ್ರ ಸಚಿವ‌ ಪ್ರಹ್ಲಾದ ಜೋಶಿ

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರದ ಜನರು

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರಿದ ಜನರು

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.